Bengaluru: ಸಿಂಗಾಪುರ ಪ್ರವಾಸಕ್ಕೆ ತೆರಳಲಿರುವ ಬಿಬಿಎಂಪಿಯ 200 ಪೌರಕಾರ್ಮಿಕರು

ಸಿಂಗಾಪುರ ಪ್ರವಾಸಕ್ಕೆ ಆಯ್ಕೆಯಾದ ಕರ್ನಾಟಕದ 300 ಜನರಲ್ಲಿ 200 ಬಿಬಿಎಂಪಿ ಪೌರಕಾರ್ಮಿಕರು ಸೇರಿದ್ದಾರೆ. 35 ಪೌರಕಾರ್ಮಿಕರ ಮೊದಲ ಬ್ಯಾಚ್ ಗುರುವಾರ ರಾತ್ರಿ ಸಿಂಗಾಪುರಕ್ಕೆ ತೆರಳಿದ್ದಾರೆ ಎಂದು ಕೆಎಸ್ಎಸ್​ಕೆಡಿಸಿ ಎಂಡಿ ಹೇಳಿದ್ದಾರೆ.

Bengaluru: ಸಿಂಗಾಪುರ ಪ್ರವಾಸಕ್ಕೆ ತೆರಳಲಿರುವ ಬಿಬಿಎಂಪಿಯ 200 ಪೌರಕಾರ್ಮಿಕರು
ಸಿಂಗಾಪುರImage Credit source: WEERASAK / ADOBE STOCK
Follow us
Rakesh Nayak Manchi
|

Updated on:Mar 11, 2023 | 8:44 PM

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯ ಸುಮಾರು 200 ಪೌರಕಾರ್ಮಿಕರು ಸಿಂಗಾಪುರ ಪ್ರವಾಸಕ್ಕೆ ತೆರಳಲಿದ್ದಾರೆ. ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ (KSSKDC) ಮೂಲಕ ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿರುವ ಪ್ರವಾಸಕ್ಕೆ ಬಿಬಿಎಂಪಿ ಅಧಿಕಾರಿಗಳು 200 ಪೌರಕಾರ್ಮಿಕರನ್ನು (BBMP Pourakarmika) ಆಯ್ಕೆ ಮಾಡಿದ್ದಾರೆ. ಪ್ರವಾಸಕ್ಕೆ ಆಯ್ಕೆಯಾದ ಕರ್ನಾಟಕದ 300 ಜನರಲ್ಲಿ 200 ಬಿಬಿಎಂಪಿ ಪೌರಕಾರ್ಮಿಕರು ಸೇರಿದ್ದಾರೆ ಎಂದು ಕೆಎಸ್ಎಸ್​ಕೆಡಿಸಿ ಎಂಡಿ ಕೆ.ಬಿ.ಮಲ್ಲಿಕಾರ್ಜುನ ಅವರು ಹೇಳಿದ್ದಾರೆ. ಈ ಬಗ್ಗೆ ಟೈಮ್ಸ್ ಆಫ್ ಇಂಡಿಯಾಗೆ ಮಾಹಿತಿ ನೀಡಿದ ಅವರು, 35 ಪೌರಕಾರ್ಮಿಕರ ಮೊದಲ ಬ್ಯಾಚ್ ಗುರುವಾರ ರಾತ್ರಿ ಸಿಂಗಾಪುರಕ್ಕೆ (Singapore Trip) ತೆರಳಿದ್ದು, ಅವರೊಂದಿಗೆ ಕೆಎಸ್ಎಸ್​ಕೆಡಿಸಿ ಒಬ್ಬರು ಮತ್ತು ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್​ನ ಇಬ್ಬರು ಅಧಿಕಾರಿಗಳು ತೆರಳಿದ್ದಾರೆ ಎಂದು ತಿಳಿಸಿದ್ದಾರೆ.

ಸದ್ಯ, ಸಿಂಗಾಪುರಕ್ಕೆ ತೆರಳಿದ ಮೊದಲ ತಂಡದಲ್ಲಿ ಮಂಗಳೂರು, ದಾವಣಗೆರೆ ಮತ್ತು ತುಮಕೂರು ಮಹಾನಗರ ಪಾಲಿಕೆಗಳ ಕಾರ್ಮಿಕರಾಗಿದ್ದಾರೆ. ಅವರು ಮೂರು ದಿನಗಳ ಕಾಲ ಸಿಂಗಾಪುರದಲ್ಲಿ ಇರಲಿದ್ದು, ಸೋಮವಾರ ಬೆಂಗಳೂರಿಗೆ ಮರಳಲಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ನಮಗೆ 200 ಪೌರಕಾರ್ಮಿಕರ ಪಟ್ಟಿಯನ್ನು ನೀಡಿದ್ದಾರೆ. ಅವರ ಪಾಸ್ಪೋರ್ಟ್ ಮತ್ತು ಇತರ ದಾಖಲೆಗಳನ್ನು ಸಿದ್ದಪಡಿಸುವ ಕೆಲಸಗಳು ನಡೆಯುತ್ತಿವೆ ಮತ್ತು ಈ ತಿಂಗಳ ಮೂರನೇ ಮತ್ತು ಕೊನೆಯ ವಾರಗಳಲ್ಲಿ ನಾವು ಅವರನ್ನು ಸಿಂಗಾಪುರಕ್ಕೆ ಕಳುಹಿಸುತ್ತೇವೆ ಎಂದು ಮಲ್ಲಿಕಾರ್ಜುನ ಅವರು ಹೇಳಿದ್ದಾರೆ.

ಇದನ್ನೂ ಓದಿ: DC Office Belagavi Recruitment 2023: ಬೆಳಗಾವಿ ಜಿಲ್ಲೆಯ ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉಳಿದ 100 ಪೌರಕಾರ್ಮಿಕರು ಬೆಳಗಾವಿ, ಬಳ್ಳಾರಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಮೈಸೂರು, ಕಲಬುರಗಿ, ಶಿವಮೊಗ್ಗ, ತುಮಕೂರು ಮತ್ತು ವಿಜಯಪುರ ಮಹಾನಗರ ಪಾಲಿಕೆಗಳಿಗೆ ಸೇರಿದವರಾಗಿದ್ದಾರೆ. ಸಿಂಗಾಪುರಕ್ಕೆ ಪ್ರವಾಸ ಕೈಗೊಳ್ಳುತ್ತಿರುವ ಕರ್ನಾಟಕದ ಎಲ್ಲಾ ಪೌರಕಾರ್ಮಿಕರು ಸಿಂಗಾಪುರದಲ್ಲಿ ಅಳವಡಿಸಿಕೊಂಡಿರುವ ಘನತ್ಯಾಜ್ಯ ನಿರ್ವಹಣೆ ಮತ್ತು ಒಳಚರಂಡಿ ಸಂಸ್ಕರಣಾ ಕಾರ್ಯವಿಧಾನಗಳನ್ನು ಅಧ್ಯಯನ ನಡೆಸಲಿದ್ದಾರೆ.

ಸದಾ ಕೆಲಸದಲ್ಲೇ ತೊಡಗಿರುವ ಪೌರಕಾರ್ಮಿಕರಿಗೆ ರಾಜ್ಯಸರ್ಕಾರ ಹೊರಪ್ರಪಂಚವನ್ನು ತೋರಿಸುತ್ತಿರುವುದು ಮಹತ್ವದ ಸಂಗತಿಯಾಗಿದೆ. ಈ ಹಿಂದೆ ಪೌರಕಾರ್ಮಿಕರು ಪ್ರವಾಸ ಕೈಗೊಳ್ಳುತ್ತಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಸಿಂಗಾಪುರ ಪ್ರವಾಸ ಭಾಗ್ಯ ಯೋಜನೆಯನ್ನು ರಾಜ್ಯದಲ್ಲಿ 300 ಪೌರಕಾರ್ಮಿಕರು ಪಡೆಯಲಿದ್ದಾರೆ. ಅವರು ಶೀಘ್ರದಲ್ಲೇ ಸಿಂಗಾಪುರಕ್ಕೆ ತೆರಳಲಿದ್ದಾರೆ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:27 pm, Sat, 11 March 23

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್