ಲೋಕಾಯುಕ್ತ ದಾಳಿ ವೇಳೆ ಅಕ್ರಮ ಆಸ್ತಿ ಪತ್ತೆ: BBMP ಮೌಲ್ಯಮಾಪಕನಿಗೆ 40 ಲಕ್ಷ ದಂಡ, 4 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

| Updated By: ರಮೇಶ್ ಬಿ. ಜವಳಗೇರಾ

Updated on: Oct 29, 2022 | 9:43 PM

ಬಿಬಿಎಂಪಿ ಮೌಲ್ಯಮಾಪಕನ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಕಠಿಣ ಜೈಲು ಹಾಗೂ ದಂಡ ವಿಧಿಸಿ ಕೋರ್ಟ್ ಆದೇಶಿಸಿದೆ.

ಲೋಕಾಯುಕ್ತ ದಾಳಿ ವೇಳೆ ಅಕ್ರಮ ಆಸ್ತಿ ಪತ್ತೆ: BBMP ಮೌಲ್ಯಮಾಪಕನಿಗೆ 40 ಲಕ್ಷ ದಂಡ, 4 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಕೋರ್ಟ್
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮೌಲ್ಯಮಾಪಕ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಆದೇಶ ಪ್ರಕಟಿಸಿದ್ದು, (BBMP) ಮೌಲ್ಯಮಾಪಕ ಆರ್. ಪ್ರಸನ್ನಕುಮಾರ್​ಗೆ 40 ಲಕ್ಷ ದಂಡ ಹಾಗೂ 4 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ 23ನೇ ಸಿಟಿ ಸಿವಿಲ್ & ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ. ದಂಡ ಪಾವತಿಸದಿದ್ದರೆ 4 ತಿಂಗಳ ಸಾದಾ ಜೈಲುವಾಸ ವಿಧಿಸಿ ಆದೇಶಿಸಿದೆ.

2013ರಲ್ಲಿ ಮೌಲ್ಯಮಾಪಕ R.ಪ್ರಸನ್ನಕುಮಾರ್ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿತ್ತು. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಪ್ರಸನ್ನಕುಮಾರ್ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಪರಿಶೀಲನೆ ವೇಳೆ ಆದಾಯಕ್ಕೂ ಮೀರಿ ಆಸ್ತಿ ಗಳಿಸಿರುವುದು ಪತ್ತೆಯಾಗಿತ್ತು. ಶೇಕಡಾ 31ರಷ್ಟು ಅಕ್ರಮ ಆಸ್ತಿ ಹೊಂದಿರುವುದು ಪತ್ತೆಯಾಗಿತ್ತು. ಬಳಿಕ ತನಿಖೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.

ಇದೀಗ ಈ ಪ್ರಕರಣ ಸಂಬಂಧ ಆರೋಪಿ ಪ್ರಸನ್ನಕುಮಾರ್​ ಅವರಿಗೆ 4 ವರ್ಷ ಕಠಿಣ ಸಜೆ ಮತ್ತು 40 ಲಕ್ಷ ದಂಡ ವಿಧಿಸಿ 23ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ವಿಶೇಷ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.