AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮಕ್ಕಳಲ್ಲಿ ವೈರಾಣು ಜ್ವರ ಪ್ರಕರಣ ಶೇ 25 – 30 ರಷ್ಟು ಏರಿಕೆ

ಬೆಂಗಳೂರಿನಲ್ಲಿ ಒಂದು ವಾರ ಮಳೆ ಮತ್ತೊಂದು ವಾರ ಬಿಸಿಲು ಹಾಗೂ ಸೆಖೆಯ ವಾತವರಣ ಜನರನ್ನು ಹೈರಾಣು ಮಾಡುತ್ತಿದೆ. ಬದಲಾಗುತ್ತಿರುವ ಬೆಂಗಳೂರಿನ ಹವಾಮಾನ ಸಿಲಿಕಾನ್ ಸಿಟಿ ಜನರಲ್ಲಿ ಸಾಂಕ್ರಾಮಿಕ ರೋಗಗಳ ಜೊತೆ ವೈರಾಣು ಜ್ವರ ಪ್ರಕರಣ ಹೆಚ್ಚಾಗಿದ್ದು, ಅದರಲ್ಲೂ ಪುಟಾಣಿ ಮಕ್ಕಳು ಪರದಾಡುವಂತಾಗಿದೆ.

ಬೆಂಗಳೂರು: ಮಕ್ಕಳಲ್ಲಿ ವೈರಾಣು ಜ್ವರ ಪ್ರಕರಣ ಶೇ 25 - 30 ರಷ್ಟು ಏರಿಕೆ
ಸಾಂದರ್ಭಿಕ ಚಿತ್ರImage Credit source: Getty Images
ವಿನಯ್​ ಕಾಶಪ್ಪನವರ್​
| Edited By: |

Updated on: Sep 14, 2024 | 11:17 AM

Share

ಬೆಂಗಳೂರು, ಸೆಪ್ಟೆಂಬರ್ 14: ಬೆಂಗಳೂರಿನ ಮಕ್ಕಳಲ್ಲಿ ಕಳೆದ ಕೆಲವು ದಿನಗಳಿಂದ ವೈರಾಣು ಜ್ವರ ಹೆಚ್ಚಾಗಿದೆ. ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗದಲ್ಲಿ ಶೇ 30 ರಷ್ಟು ಮಕ್ಕಳಲ್ಲಿ ಜ್ವರದ ಪ್ರಕರಣ ಏರಿಕೆ ಕಂಡ ಬಂದಿದೆ. ಇದಕ್ಕೆಲ್ಲ ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ಹವಾಮಾನ ಕಾರಣ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ಗಾಳಿ ಸಹಿತ ಮಳೆ, ಬಿಸಿಲು, ಚಳಿಯಿಂದಾಗಿ ಮಕ್ಕಳಲ್ಲಿ ಹೆಚ್ಚಾಗಿ ವೈರಾಣು ಜ್ವರ ಕಂಡು ಬರುತ್ತಿದೆ. ವೈರಾಣು ಜ್ವರದ ಜೊತೆ ILI ಪ್ರಕರಣಗಳ ಏರಿಕೆಯೂ ಕಂಡು ಬರುತ್ತಿದೆ.

ಬೆಂಗಳೂರಿನ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗೆ ಪ್ರತಿನಿತ್ಯ 550 ರಿಂದ 600 ಹೊರ ರೋಗಿಗಳು ಚಿಕಿತ್ಸಗೆ ಬರುತ್ತಿದ್ದಾರೆ. ಈ ಪೈಕಿ ಶೇ 50 ರಷ್ಟು ಮಕ್ಕಳಲ್ಲಿ ವೈರಾಣು ಜ್ವರ ಕಂಡು ಬರುತ್ತಿದೆ. ಜತೆಗೆ ಕೆಸಿ ಜನರಲ್ ಆಸ್ಪತ್ರೆ, ವಿಕ್ಟೋರಿಯಾ ಆಸ್ಪತ್ರೆ, ವಾಣಿವಿಲಾಸ್ ಆಸ್ಪತ್ರೆ ಸೇರಿದಂತೆ ಬಹುತೇಕ ಆಸ್ಪತ್ರೆಗಳಲ್ಲಿ ದಾಖಲಾಗುವ ಅರ್ದದಷ್ಟು ಹೊರ ರೋಗಿಗಳ ವಿಭಾಗದಲ್ಲಿಯೂ ವೈರಾಣು ಜ್ವರ ಕಂಡು ಬರುತ್ತಿದೆ.

ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳಲ್ಲಿಯೇ ಹೆಚ್ಚಾಗಿ ಈ ಜ್ವರ ಕಂಡು ಬರುತ್ತಿದೆ. ಮನೆಯಲ್ಲಿ ಮಕ್ಕಳಿಂದ ಮನೆ ಮಂದಿಗೆಲ್ಲ ಈ ವೈರಾಣು ಸೋಂಕು ಹರಡುತ್ತಿದ್ದು ಎಚ್ಚರಿಕೆ ವಹಿಸುವಂತೆ ವೈದ್ಯರು ಸೂಚಸಿದ್ದಾರೆ. ಅದರಲ್ಲೂ ಚಿಣ್ಣರಲ್ಲಿ ಕಂಡು ಬರುತ್ತಿರುವ ಈ ಸೋಂಕಿನ ಬಗ್ಗೆ ಹೆಚ್ಚು ನಿಗಾವಹಿಸುವಂತೆ ಪೋಷಕರಿಗೆ ತಿಳಸಿದ್ದಾರೆ. ಇದರ ಜೊತೆಗೆ ILI ಕೇಸ್ ಏರಿಕೆ ಕೂಡಾ ರಾಜಧಾನಿಯಲ್ಲಿ ಕಂಡು ಬರ್ತಿದೆ ಜುಲೈನಲ್ಲಿ 72 ಇದ್ದ ಪ್ರಕರಣಗಳ ಸಂಖ್ಯೆ ಸೆಪ್ಟಂಬರ್ ವೇಳೆಗೆ 261 ಕ್ಕೆ ಏರಿಕೆ ಕಂಡಿದೆ ಹೀಗಾಗಿ ಪೋಷಕರು ನಿಗಾವಹಿಸಬೇಕಿದೆ. ಮಕ್ಕಳ ಆರೋಗ್ಯದಲ್ಲಿ ಬದಲಾಣವೆಯಾದರೂ ನಿರ್ಲಕ್ಷ್ಯವಹಿದಂತೆ ಸೂಚಿಸಿದ್ದಾರೆ.

ವೈರಾಣು ಜ್ವರದ ಲಕ್ಷಣಗಳೇನು?

  • ತೀವ್ರ ಜ್ವರ
  • ಉಸಿರಾಟದ ಸಮಸ್ಯೆ
  • ನೆಗಡಿ ಕೆಮ್ಮು
  • ತೀವ್ರವಾದ ಸುಸ್ತು
  • ಮೈಕೈ ನೋವು
  • ತಲೆ ಸಿಡಿತ, ಚಳಿ ಜ್ವರ
  • ಕೆಲವು ಮಕ್ಕಳಲ್ಲಿ ಶೀತ ಜ್ವರ ಕಂಡು ಬರುತ್ತದೆ

ಇದನ್ನೂ ಓದಿ: ವೃದ್ಧೆಗೆ ಕಚ್ಚಿದ್ದ ಬೀದಿನಾಯಿಗಾಗಿ ಹುಡುಕಾಡಿ ಬಿಬಿಎಂಪಿ ಸುಸ್ತು! ಬರೋಬ್ಬರಿ 110ಕ್ಕೂ ಹೆಚ್ಚು ಬೀದಿನಾಯಿಗಳ ಪರಿಶೀಲನೆ

ಒಟ್ಟಿನಲ್ಲಿ ಡೆಂಘಿ ಜ್ವರದ ಹಾವಳಿ ಜೊತೆಗೆ ಈಗ ಮಕ್ಕಳಲ್ಲಿ ಹೆಚ್ಚಾಗುತ್ತಿರುವ ವೈರಾಣು ಜ್ವರ ಪೋಷಕರಲ್ಲಿ ಆತಂಕಕ್ಕೆ ಕಾರವಾಗಿದೆ. ಹೀಗಾಗಿ ಜನರು ಸ್ವಚ್ಛತೆ, ಆರೋಗ್ಯಕರ ಆಹಾರ ಸೇವನೆ ಮಾಡುವುದು ಅತೀ ಅಗತ್ಯ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್