ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ಆರೋಪ: ಶಾಸಕ ಉದಯ್ ಗರುಡಾಚಾರ್ಗೆ ಜಾಮೀನು
ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಉದಯ್ ಗರುಡಾಚಾರ್ಗೆ ಬಿಗ್ ರಿಲೀಫ್ ಸಿಕ್ಕಿದೆ.
ಬೆಂಗಳೂರು: ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಉದಯ್ ಗರುಡಾಚಾರ್ಗೆ ಜಾಮೀನು ಸಿಕ್ಕಿದೆ.
3 ವರ್ಷಕ್ಕಿಂತ ಕಡಿಮೆ ಶಿಕ್ಷೆಯಾಗಿರುವ ಹಿನ್ನೆಲೆ ಜಾಮೀನು ನೀಡಿ 42ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. 25,000 ರೂಪಾಯಿ ಬಾಂಡ್, ಶ್ಯೂರಿಟಿ ಒದಗಿಸಲು ನ್ಯಾಯಾಧೀಶ ಜೆ.ಪ್ರೀತ್ ಸೂಚನೆ ನೀಡಿದ್ದಾರೆ. ಇದರಿಂದ ಬಿಜೆಪಿ ಶಾಸಕ ಉದಯ್ ಗರುಡಾಚಾರ್ಗೆ ಸದ್ಯ ರಿಲೀಫ್ ಸಿಕ್ಕಂತಾಗಿದೆ.
ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ಆರೋಪದ ಮೇಲೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ, ಬೆಂಗಳೂರಿನ ಚಿಕ್ಕಪೇಟೆ ಬಿಜೆಪಿ ಶಾಸಕ ಗರುಡಾಚಾರ್ಗೆ 2 ತಿಂಗಳು ಜೈಲು ಹಾಗೂ 10 ಸಾವಿರ ದಂಡ ವಿಧಿಸಿ ಇಂದು(ಅಕ್ಟೋಬರ್. 13) ಆದೇಶ ಹೊರಡಿಸಿತ್ತು,
2018 ರಲ್ಲಿ ಚಿಕ್ಕಪೇಟೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾಗ ಪ್ರಮಾಣಪತ್ರದಲ್ಲಿ ಕ್ರಿಮಿನಲ್ ಕೇಸ್ ಗಳ ಮಾಹಿತಿ ನೀಡಿರುವುದಿಲ್ಲ. ಈ ಬಗ್ಗೆ ಪ್ರಕಾಶ್ ಎಂ ಶೆಟ್ಟಿ ಎಂಬುವರು ಅಶೋಕನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಆರ್‌ಒಸಿಯಿಂದ ಉದಯ್ ಗರುಡಾಚಾರ್ ಹಾಗೂ ಪತ್ನಿ ಅನರ್ಹಗೊಂಡಿದ್ದರು. ಈ ಮಾಹಿತಿಯನ್ನು ಪ್ರಮಾಣಪತ್ರದಿಂದ ಮುಚ್ಚಿಟ್ಟಿದ್ದರು. ಮೆವರಿಕ್ ಹೋಲ್ಡಿಂಗ್ಸ್ ನಲ್ಲಿ ಎಂಡಿ ಯಾಗಿದ್ದರೂ ಹೂಡಿಕೆದಾರ ಎಂದು ನಮೂದು. ಪತ್ನಿ ನಿರ್ದೇಶಕರಾಗಿರುವುದನ್ನು ನಮೂದಿಸದ ಆರೋಪ. ಪತ್ನಿಯ ಬ್ಯಾಂಕ್ ವಿವರ ನೀಡದೇ ಮುಚ್ಚಿಟ್ಟ ಆರೋಪ. ಈ ಎಲ್ಲದರ ಬಗ್ಗೆ ಹೆಚ್.ಜಿ.ಪ್ರಶಾಂತ್ ಅವರು ದೂರು ದಾಖಲಿಸಿದ್ದರು.
ಈ ಎಲ್ಲಾ ಆರೋಪಗಳು ಸಾಬೀತಾಗಿರುವುದರಿಂದ ಬೆಂಗಳೂರಿನ 42 ನೇ ಎಸಿಎಂಎಂ ಕೋರ್ಟ್ ಉದಯ್ ಗರುಡಾಚಾರ್ ಗೆ 2 ತಿಂಗಳು ಜೈಲು ಹಾಗೂ 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿತ್ತು. ಬಳಿಕ ಜಾಮೀನು ಸಹ ನೀಡಿದೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 4:57 pm, Thu, 13 October 22