ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ಆರೋಪ: ಶಾಸಕ ಉದಯ್ ಗರುಡಾಚಾರ್​ಗೆ ಜಾಮೀನು

| Updated By: ರಮೇಶ್ ಬಿ. ಜವಳಗೇರಾ

Updated on: Oct 13, 2022 | 5:19 PM

ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ ಬಿಗ್ ರಿಲೀಫ್ ಸಿಕ್ಕಿದೆ.

ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ಆರೋಪ: ಶಾಸಕ ಉದಯ್ ಗರುಡಾಚಾರ್​ಗೆ ಜಾಮೀನು
uday garudachar
Follow us on

ಬೆಂಗಳೂರು: ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ ಜಾಮೀನು ಸಿಕ್ಕಿದೆ.

3 ವರ್ಷಕ್ಕಿಂತ ಕಡಿಮೆ ಶಿಕ್ಷೆಯಾಗಿರುವ ಹಿನ್ನೆಲೆ ಜಾಮೀನು ನೀಡಿ 42ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. 25,000 ರೂಪಾಯಿ ಬಾಂಡ್, ಶ್ಯೂರಿಟಿ ಒದಗಿಸಲು ನ್ಯಾಯಾಧೀಶ ಜೆ.ಪ್ರೀತ್​ ಸೂಚನೆ ನೀಡಿದ್ದಾರೆ. ಇದರಿಂದ ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ ಸದ್ಯ ರಿಲೀಫ್‌ ಸಿಕ್ಕಂತಾಗಿದೆ.

ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ಆರೋಪದ ಮೇಲೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ, ಬೆಂಗಳೂರಿನ ಚಿಕ್ಕಪೇಟೆ ಬಿಜೆಪಿ ಶಾಸಕ ಗರುಡಾಚಾರ್​ಗೆ 2 ತಿಂಗಳು ಜೈಲು ಹಾಗೂ 10 ಸಾವಿರ ದಂಡ ವಿಧಿಸಿ ಇಂದು(ಅಕ್ಟೋಬರ್. 13) ಆದೇಶ ಹೊರಡಿಸಿತ್ತು,

2018 ರಲ್ಲಿ ಚಿಕ್ಕಪೇಟೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾಗ ಪ್ರಮಾಣಪತ್ರದಲ್ಲಿ ಕ್ರಿಮಿನಲ್ ಕೇಸ್ ಗಳ ಮಾಹಿತಿ ನೀಡಿರುವುದಿಲ್ಲ. ಈ ಬಗ್ಗೆ ಪ್ರಕಾಶ್ ಎಂ ಶೆಟ್ಟಿ ಎಂಬುವರು ಅಶೋಕನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಆರ್‌ಒಸಿಯಿಂದ ಉದಯ್ ಗರುಡಾಚಾರ್ ಹಾಗೂ ಪತ್ನಿ ಅನರ್ಹಗೊಂಡಿದ್ದರು. ಈ ಮಾಹಿತಿಯನ್ನು ಪ್ರಮಾಣಪತ್ರದಿಂದ ಮುಚ್ಚಿಟ್ಟಿದ್ದರು. ಮೆವರಿಕ್ ಹೋಲ್ಡಿಂಗ್ಸ್ ನಲ್ಲಿ ಎಂಡಿ ಯಾಗಿದ್ದರೂ ಹೂಡಿಕೆದಾರ ಎಂದು ನಮೂದು. ಪತ್ನಿ ನಿರ್ದೇಶಕರಾಗಿರುವುದನ್ನು ನಮೂದಿಸದ ಆರೋಪ. ಪತ್ನಿಯ ಬ್ಯಾಂಕ್ ವಿವರ ನೀಡದೇ ಮುಚ್ಚಿಟ್ಟ ಆರೋಪ. ಈ ಎಲ್ಲದರ ಬಗ್ಗೆ ಹೆಚ್.ಜಿ.ಪ್ರಶಾಂತ್ ಅವರು ದೂರು ದಾಖಲಿಸಿದ್ದರು.

ಈ ಎಲ್ಲಾ ಆರೋಪಗಳು ಸಾಬೀತಾಗಿರುವುದರಿಂದ ಬೆಂಗಳೂರಿನ 42 ನೇ ಎಸಿಎಂಎಂ ಕೋರ್ಟ್ ಉದಯ್ ಗರುಡಾಚಾರ್ ಗೆ 2 ತಿಂಗಳು ಜೈಲು ಹಾಗೂ 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿತ್ತು. ಬಳಿಕ ಜಾಮೀನು ಸಹ ನೀಡಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:57 pm, Thu, 13 October 22