ಟ್ರಾಫಿಕ್ ದಂಡ ಪಾವತಿಗೆ 50% ರಿಯಾಯಿತಿ, ನಾಲ್ಕು ದಿನದಲ್ಲಿ 25 ಕೋಟಿ ದಂಡ ಪಾವತಿ

ಸಂಚಾರ ನಿಯಮ ಉಲ್ಲಂಘಿಸಿ ದಂಡ ಬಾಕಿ (Traffic Fine) ಉಳಿಸಿಕೊಂಡಿರುವ ವಾಹನ ಸವಾರರು, ದಂಡ ಪಾವತಿಸಲು ರಾಜ್ಯ ಸಂಚಾರಿ ಪೊಲೀಸ್​​ ಇಲಾಖೆ ಫೆ. 11ರ ವರೆಗೆ ಶೇ. 50 ರಷ್ಟು ರಿಯಾಯಿತಿ ನೀಡಿದೆ. ಇದಕ್ಕೆ ವಾಹನ ಸವಾರರಿಂದ ಭರ್ಜರಿ ಪ್ರತಿಕ್ರಿಯೆ ಸಿಗುತ್ತಿದೆ.

ಟ್ರಾಫಿಕ್ ದಂಡ ಪಾವತಿಗೆ 50% ರಿಯಾಯಿತಿ, ನಾಲ್ಕು ದಿನದಲ್ಲಿ 25 ಕೋಟಿ ದಂಡ ಪಾವತಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Rakesh Nayak Manchi

Updated on:Feb 06, 2023 | 3:42 PM

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿ ದಂಡ ಬಾಕಿ (Traffic Fine) ಉಳಿಸಿಕೊಂಡಿರುವ ವಾಹನ ಸವಾರರು, ದಂಡ ಪಾವತಿಸಲು ರಾಜ್ಯ ಸಂಚಾರಿ ಪೊಲೀಸ್​​ ಇಲಾಖೆ ಫೆ. 11ರ ವರೆಗೆ ಶೇ. 50 ರಷ್ಟು ರಿಯಾಯಿತಿ ನೀಡಿದೆ. ಇದಕ್ಕೆ ವಾಹನ ಸವಾರರಿಂದ ಭರ್ಜರಿ ಪ್ರತಿಕ್ರಿಯೆ ಸಿಗುತ್ತಿದೆ. ಅದರಂತೆ ರಿಯಾಯಿತಿ ಘೋಷಣೆಯಾದ ನಾಲ್ಕು ದಿನಗಳಲ್ಲಿ 8 ಲಕ್ಷಕ್ಕೂ ಅಧಿಕ ಪ್ರಕರಣಗಳು ವಿಲೇವಾರಿಯಾಗಿದ್ದು, 25.42 ಕೋಟಿಗೂ ಅಧಿಕ ಮೊತ್ತದ ದಂಡ ಸಂಗ್ರಹ ಆಗಿದೆ. ಮಾತ್ರವಲ್ಲದೆ ಇನ್ನೂ ಎರಡು ದಿನದಲ್ಲಿ ಪ್ರತಿಕ್ರಿಯೆ ಹಾಗೂ ಪ್ರಕರಣಗಳನ್ನು ನೋಡಿಕೊಂಡು ಕಾಲಾವಧಿ ವಿಸ್ತರಿಸುವ ಬಗ್ಗೆ ಚಿಂತನೆ ಇದೆ.

ದಂಡ ಪಾವತಿ ಬಗ್ಗೆ ಮಾಹಿತಿ ನೀಡಿದ ಸಂಚಾರ ವಿಶೇಷ ಪೊಲೀಸ್ ಆಯುಕ್ತ ಎಂ.ಎ. ಸಲೀಂ, ಶೇ.50 ರಿಯಾಯಿತಿ ಘೋಷಣೆ ನಂತರ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ವಾಹನ ಸವಾರರು ನಾಲ್ಕನೇ ದಿನವೂ ಸ್ವಯಂಪ್ರೇರಿತರಾಗಿ ದಂಡ ಪಾವತಿಸುತ್ತಿದ್ದಾರೆ. 8 ಲಕ್ಷ 68 ಸಾವಿರ 405 ಪ್ರಕರಣಗಳ ವಿಲೇವಾರಿ ಆಗಿದೆ. 25 ಕೋಟಿ 42 ಲಕ್ಷ 52 ಸಾವಿರಕ್ಕೂ ಅಧಿಕ ಮೊತ್ತದ ದಂಡ ಸಂಗ್ರಹ ಆಗಿದೆ ಎಂದರು.

ವಿಲೇವಾರಿಗೆ ಇನ್ನೂ 1 ಕೋಟಿ 80 ಲಕ್ಷ ಪ್ರಕರಣಗಳು ಬಾಕಿ

ದಂಡ ಪಾವತಿಗೆ ಏನಾದರು ಸಮಸ್ಯೆಗಳಿದ್ದರೆ ಟ್ರಾಫಿಕ್ ಮ್ಯಾನೇಜ್ಮೆಂಟ್ ಸೆಂಟರ್​ನಲ್ಲಿ ಪರಿಶೀಲಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದ ಸಲೀಂ, ಎರಡು ದಿನ ನೋಡಿಕೊಂಡು ಕಾಲಾವಧಿಯನ್ನ ವಿಸ್ತರಿಸುವ ಬಗ್ಗೆ ಚಿಂತನೆ ಇದೆ. ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಚರ್ಚಿಸಲಾಗುವುದು. ಇನ್ನು 1.80 ಕೋಟಿ ಪ್ರಕರಣಗಳು ಬಾಕಿ ಇವೆ. ಸದ್ಯ 8 ಲಕ್ಷ ಪ್ರಕರಣಗಳು ವಿಲೇವಾರಿಯಾಗಿದೆ. ದಂಡ ಪಾವತಿ ಮಾಡುವ ವೇಳೆ ನಕಲಿ ನಂಬರ್ ಪ್ಲೇಟ್​ಗಳ ಬಗ್ಗೆಯೂ ದೂರು ಬರುತ್ತಿವೆ. ಅಂತಹ ಪ್ರಕರಣಗಳನ್ನ ಪತ್ತೆ ಹಚ್ಚಿ ಅಂತಹವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು ಮಾಡಲಾಗುತ್ತದೆ ಎಂದರು.

ಇದನ್ನೂ ಓದಿ: Traffic Violation: ಟ್ರಾಫಿಕ್ ರೂಲ್ಸ್ ದಂಡ ಪಾವತಿಗೆ 50% ರಿಯಾಯಿತಿ: ದಂಡ ಪಾವತಿಸುವುದು ಹೇಗೆ? ಇಲ್ಲಿದೆ ವಿವರ

ಜನವರಿಯಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (ಕೆಎಸ್ಎಲ್ಎಸ್ಎ) ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಂತರ ರಾಜ್ಯ ಸಾರಿಗೆ ಇಲಾಖೆ ನಿಯಮ ಉಲ್ಲಂಘಿಸುವವರಿಗೆ 50% ರಿಯಾಯಿತಿಯನ್ನು ನೀಡಿತು. ಬೆಂಗಳೂರು ಸಂಚಾರ ಆಯುಕ್ತ ಸಲೀಂ ಮಾತನಾಡಿ, ನಗರದಲ್ಲಿ ಎರಡು ಕೋಟಿಗೂ ಹೆಚ್ಚು ಇ-ಚಲನ್ ಪ್ರಕರಣಗಳಿದ್ದು, ಒಟ್ಟು 500 ಕೋಟಿ ರೂ.ಗಳವರೆಗೆ ದಂಡ ವಿಧಿಸಬಹುದು ಎಂದಿದ್ದರು.

2022 ರಲ್ಲಿ ಹೈದರಾಬಾದ್ ಟ್ರಾಫಿಕ್ ಪೊಲೀಸರು ಇದೇ ರೀತಿಯ ರಿಯಾಯಿತಿ ಕೊಡುಗೆಯನ್ನು ನೀಡಿದ್ದರು ಮತ್ತು ಇದು ಸಂಚಾರ ನಿಯಮ ಉಲ್ಲಂಘಿಸುವವರಿಂದ ಬಾಕಿ ಉಳಿದಿರುವ ದಂಡವನ್ನು ಸಂಗ್ರಹಿಸುವಲ್ಲಿ ಭಾರಿ ಯಶಸ್ಸನ್ನು ಕಂಡಿತ್ತು. ಇದೀಗ ಬೆಂಗಳೂರಿನಲ್ಲೂ ಈ ಅಸ್ತ್ರವನ್ನು ಪ್ರಯೋಗಿಸಿದ್ದು, ವಾಹನ ಸವಾರರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ರಿಯಾಯಿತಿ ಮೇಲೆ ದಂಡ ಪಾವತಿಸಲು ಫೆ.11ರವರೆಗೆ ಕಾಲವಕಾಶ ಇದ್ದು, ಒಟ್ಟು ಎಷ್ಟು ಸಂಗ್ರಹವಾಗಲಿದೆ ಎಂಬುದನ್ನು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:36 pm, Mon, 6 February 23

Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ