ದಂಡ ಪಾವತಿಸಲು 50% ರಿಯಾಯಿತಿ; 4ನೇ ದಿನ 7.45 ಕೋಟಿ ರೂ. ದಂಡದ ಹಣ ಸಂಗ್ರಹ

ಸಂಚಾರ ನಿಯಮ ಉಲ್ಲಂಘಿಸಿ ದಂಡ ಬಾಕಿ (Traffic Fine) ಉಳಿಸಿಕೊಂಡಿರುವ ವಾಹನ ಸವಾರರು, ದಂಡ ಪಾವತಿಸಲು ರಾಜ್ಯ ಸಂಚಾರಿ ಪೊಲೀಸ್​​ ಇಲಾಖೆ ಫೆ. 11ರ ವರೆಗೆ ಶೇ. 50 ರಷ್ಟು ರಿಯಾಯಿತಿ ನೀಡಿದೆ. ಇದಕ್ಕೆ ವಾಹನ ಸವಾರರಿಂದ ಭರ್ಜರಿ ಪ್ರತಿಕ್ರಿಯೆ ಸಿಗುತ್ತಿದ್ದು, ನಾಲ್ಕನೇ ದಿನವಾದ ಇಂದು 7 ಕೋಟಿ ದಂಡದ ಮೊತ್ತ ಪಾವತಿಯಾಗಿದೆ.

ದಂಡ ಪಾವತಿಸಲು 50% ರಿಯಾಯಿತಿ; 4ನೇ ದಿನ 7.45 ಕೋಟಿ ರೂ. ದಂಡದ ಹಣ ಸಂಗ್ರಹ
ಪ್ರಾತಿನಿಧಿಕ ಚಿತ್ರImage Credit source: thehindu.com
Follow us
TV9 Web
| Updated By: Rakesh Nayak Manchi

Updated on:Feb 06, 2023 | 10:43 PM

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿ ದಂಡ ಬಾಕಿ (Traffic Fine) ಉಳಿಸಿಕೊಂಡಿರುವ ವಾಹನ ಸವಾರರು, ದಂಡ ಪಾವತಿಸಲು ರಾಜ್ಯ ಸಂಚಾರಿ ಪೊಲೀಸ್​​ ಇಲಾಖೆ ಫೆ. 11ರ ವರೆಗೆ ಶೇ. 50 ರಷ್ಟು ರಿಯಾಯಿತಿ ನೀಡಿದೆ. ಇದಕ್ಕೆ ವಾಹನ ಸವಾರರಿಂದ ಭರ್ಜರಿ ಪ್ರತಿಕ್ರಿಯೆ ಸಿಗುತ್ತಿದ್ದು, ನಾಲ್ಕನೇ ದಿನವಾದ ಇಂದು (ಫೆವ್ರವರಿ 06) 2.59 ಲಕ್ಷ ಪ್ರಕರಣಗಳಿಗೆ ಸಂಬಂಧಿಸಿದ ವಾಹನ ಸವಾರರು ದಂಡ ಕಟ್ಟಿದ್ದು, ಒಂದೇ ದಿನ 7.45 ಕೋಟಿ ದಂಡದ ಹಣ ಸಂಗ್ರಹವಾಗಿದೆ. ಇಂದು ಬೆಳಗ್ಗೆ 8 ಲಕ್ಷಕ್ಕೂ ಅಧಿಕ ಪ್ರಕರಣಗಳು ವಿಲೇವಾರಿಯಾಗಿದ್ದವು. ಇದೀಗ ಆ ಸಂಖ್ಯೆ 10.62 ಲಕ್ಷಕ್ಕೆ ಏರಿಕೆಯಾಗಿದೆ. ಸದ್ಯ ರಿಯಾಯಿತಿ ಘೋಷಣೆ ಮಾಡಿ ಇಂದಿಗೆ ನಾಲ್ಕು ದಿನಗಳು ಆಗಿದ್ದು, ಈವರೆಗೆ ಒಟ್ಟು 30.96 ಕೋಟಿ ರೂಪಾಯಿ ದಂಡದ ಹಣ ಸಂಗ್ರಹ ಮಾಡಲಾಗಿದೆ.

ಜನವರಿಯಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (ಕೆಎಸ್ಎಲ್ಎಸ್ಎ) ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಂತರ ರಾಜ್ಯ ಸಾರಿಗೆ ಇಲಾಖೆ ನಿಯಮ ಉಲ್ಲಂಘಿಸುವವರಿಗೆ 50% ರಿಯಾಯಿತಿಯನ್ನು ನೀಡಿತು. ಬೆಂಗಳೂರು ಸಂಚಾರ ಆಯುಕ್ತ ಸಲೀಂ ಮಾತನಾಡಿ, ನಗರದಲ್ಲಿ ಎರಡು ಕೋಟಿಗೂ ಹೆಚ್ಚು ಇ-ಚಲನ್ ಪ್ರಕರಣಗಳಿದ್ದು, ಒಟ್ಟು 500 ಕೋಟಿ ರೂ.ಗಳವರೆಗೆ ದಂಡ ವಿಧಿಸಬಹುದು ಎಂದಿದ್ದರು.

ಇದನ್ನೂ ಓದಿ: Traffic Violation: ಟ್ರಾಫಿಕ್ ರೂಲ್ಸ್ ದಂಡ ಪಾವತಿಗೆ 50% ರಿಯಾಯಿತಿ: ದಂಡ ಪಾವತಿಸುವುದು ಹೇಗೆ? ಇಲ್ಲಿದೆ ವಿವರ

2022 ರಲ್ಲಿ ಹೈದರಾಬಾದ್ ಟ್ರಾಫಿಕ್ ಪೊಲೀಸರು ಇದೇ ರೀತಿಯ ರಿಯಾಯಿತಿ ಕೊಡುಗೆಯನ್ನು ನೀಡಿದ್ದರು ಮತ್ತು ಇದು ಸಂಚಾರ ನಿಯಮ ಉಲ್ಲಂಘಿಸುವವರಿಂದ ಬಾಕಿ ಉಳಿದಿರುವ ದಂಡವನ್ನು ಸಂಗ್ರಹಿಸುವಲ್ಲಿ ಭಾರಿ ಯಶಸ್ಸನ್ನು ಕಂಡಿತ್ತು. ಇದೀಗ ಬೆಂಗಳೂರಿನಲ್ಲೂ ಈ ಅಸ್ತ್ರವನ್ನು ಪ್ರಯೋಗಿಸಿದ್ದು, ವಾಹನ ಸವಾರರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ರಿಯಾಯಿತಿ ಮೇಲೆ ದಂಡ ಪಾವತಿಸಲು ಫೆ.11ರವರೆಗೆ ಕಾಲವಕಾಶ ಇದ್ದು, ಒಟ್ಟು ಎಷ್ಟು ಸಂಗ್ರಹವಾಗಲಿದೆ ಎಂಬುದನ್ನು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:43 pm, Mon, 6 February 23

Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ