AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: 7 ಕೋಟಿ ರೂ. ದರೋಡೆ ಪ್ರಕರಣದಲ್ಲಿ ಕಾನ್ಸ್‌ಟೇಬಲ್ ಬಂಧನ, ಪೊಲೀಸಪ್ಪನೇ ಮಾಸ್ಟರ್‌ಮೈಂಡ್!

ಬೆಂಗಳೂರಿನಲ್ಲಿ ನಡೆದಿರುವ ಎಟಿಎಂ ವಾಹನದ ಹಗಲು ದರೋಡೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಪೊಲೀಸರು ದರೋಡೆ ಗ್ಯಾಂಗ್‌ಗೆ ಬಲೆ ಬೀಸಿದ್ದು ತಮಿಳುನಾಡು, ಆಂಧ್ರ ಹೀಗೆ ಬೇರೆ ಬೇರೆ ರಾಜ್ಯಗಳಿಗೂ ತನಿಖಾ ತಂಡಗಳು ತೆರಳಿವೆ. ನೂರಾರು ಸಿಸಿಟಿವಿ ಕ್ಯಾಮರಾಗಳನ್ನು ಜಾಲಾಡಲಾಗಿದೆ. ಆದರೆ ಈಗ ಪ್ರಕರಣಕ್ಕೆ ಸ್ಫೋಟಕ ತಿರುವು ದೊರೆತಿದೆ.

ಬೆಂಗಳೂರು: 7 ಕೋಟಿ ರೂ. ದರೋಡೆ ಪ್ರಕರಣದಲ್ಲಿ ಕಾನ್ಸ್‌ಟೇಬಲ್ ಬಂಧನ, ಪೊಲೀಸಪ್ಪನೇ ಮಾಸ್ಟರ್‌ಮೈಂಡ್!
Bengaluru 7 Crore Robbery Case Police Constable Arrest
Kiran HV
| Edited By: |

Updated on:Nov 21, 2025 | 7:56 AM

Share

ಬೆಂಗಳೂರು, ನವೆಂಬರ್ 21: ಬೆಂಗಳೂರಿನಲ್ಲಿ (Bengaluru) 7 ಕೋಟಿ ರೂ. ದರೋಡೆ ಪ್ರಕರಣ (Bengaluru 7 Crore Robbery Case) ಸಂಬಂಧ ದರೋಡೆಕೋರರ ಹೆಡೆಮುರಿ ಕಟ್ಟಲು ಗೃಹ ಸಚಿವ ಡಾ. ಜಿ. ಪರಮೇಶ್ವರ (Dr G Prameshwara) ಕೊಟ್ಟಿದ್ದ 24 ಗಂಟೆಯ ಗಡುವು ಮುಗಿದಿದೆ. ಆದರೆ, ಈವರೆಗೆ ದರೋಡೆಕೋರರ ಸುಳಿವು ಮಾತ್ರ ಸಿಕ್ಕಿದೆ. ಆರೋಪಿಗಳ ಫೋಟೋ ಬಿಡುಗಡೆ ಮಾಡಲಾಗಿದೆ. ಆದರೆ, ಹಣ ದೋಚಿದವರು ಎಲ್ಲಿಗೆ ಹೋಗಿದ್ದಾರೆ? ಹಣ ಎಲ್ಲಿದೆ ಎಂಬುದು ಮಾತ್ರ ಪತ್ತೆಯಾಗಿಲ್ಲ. ಪೊಲೀಸರು ದರೋಡೆ ಕೇಸ್‌ ಸಂಬಂಧ ಒಬ್ಬೊಬ್ಬರಾಗಿ ಶಂಕಿತರನ್ನು ಬಂಧಿಸುತ್ತಿದ್ದಾರೆ. ಈ ಮಧ್ಯೆ, ಈ ಪ್ರಕರಣದ ದಿಕ್ಕನ್ನೇ ಬದಲಿಸುವಂಥ ರೋಚಕ ಬೆಳವಣಿಗೆ ನಡೆದಿದೆ. ಇಡೀ ದರೋಡೆಯ ಮಾಸ್ಟರ್‌ಮೈಂಡ್ ಓರ್ವ ಪೊಲೀಸ್ ಕಾನ್ಸ್‌ಟೇಬಲ್ (Police Constable) ಎಂಬ ಶಂಕೆ ವ್ಯಕ್ತವಾಗಿದೆ.

ದರೋಡೆ ಪ್ರಕರಣ ಸಂಬಂಧ ಗೋವಿಂದಪುರ ಠಾಣೆಯ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್ ಎಂಬವರನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಅಣ್ಣಪ್ಪ ನಾಯ್ಕ್ ಇಡೀ ದರೋಡೆಯ ಮಾಸ್ಟರ್‌ಮೈಂಡ್ ಎನ್ನಲಾಗುತ್ತಿದೆ. ಇವರೇ ಹುಡುಗರನ್ನ ದರೋಡೆಗೆ ಸಿದ್ಧಪಡಿಸಿದ್ದರು ಎಂಬ ವಿಚಾರ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ.

ದರೋಡೆಗೆ ಪಕ್ಕಾ ಮಾಹಿತಿ ನೀಡಿದ್ದ ಕಾನ್ಸ್‌ಟೇಬಲ್!

ಕಮ್ಮನಹಳ್ಳಿ, ಕಲ್ಯಾಣನಗರ ಹುಡುಗರ ಗ್ಯಾಂಗ್ ರೆಡಿ ಮಾಡಿದ್ದ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್, ದರೋಡೆ ಕುರಿತು ಪಕ್ಕಾ ತರಬೇತಿ ನೀಡಿದ್ದರು. ಹೇಗೆ ರಾಬರಿ ಮಾಡಬೇಕು? ಹೇಗೆ ತಪ್ಪಿಸಿಕೊಳ್ಳಬೇಕೆಂದು ಟ್ರೈನಿಂಗ್ ಕೂಡ ಕೊಟ್ಟಿದ್ದರು. ಪೊಲೀಸರು ಹೇಗೆ ಕೆಲಸ ಮಾಡುತ್ತಾರೆಂದು ಸಹ ತಿಳಿಸಿದ್ದರು ಎನ್ನಲಾಗಿದೆ. ಅದರಂತೆ ಕಮ್ಮನಹಳ್ಳಿ, ಕಲ್ಯಾಣನಗರ ಹುಡುಗರ ತಂಡವೇ 7.11 ಕೋಟಿ ರೂ. ದರೋಡೆ ಮಾಡಿದೆ. ಅಲ್ಲದೆ ಸಿಎಂಎಸ್ ಸೆಕ್ಯೂರಿಟಿ ಎಜೆನ್ಸಿಯ ಮಾಜಿ ಉದ್ಯೋಗಿಗಳು ದರೋಡೆಗೆ ಸಾಥ್ ಕೊಟ್ಟಿದ್ದು, ಕದ್ದ ಹಣವನ್ನು ಬೆಂಗಳೂರಲ್ಲಿಯೇ ಬಚ್ಚಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ತಿರುಪತಿಯಲ್ಲಿ ಇನ್ನೋವಾ ಕಾರು ಸೀಜ್, ಇಬ್ಬರು ವಶಕ್ಕೆ

ದರೋಡೆಕೋರರ ಪತ್ತೆಗೆ ನಾಲ್ವರು ಜಂಟಿ ಪೊಲೀಸ್ ಆಯುಕ್ತರು, 18 ಡಿಸಿಪಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದ್ದು, ಇನ್ನೋವಾ ಕಾರು ಗುರುವಾರ ತಿರುಪತಿಯಲ್ಲಿ ಸಿಕ್ಕಿದೆ. ಅಲ್ಲದೇ ಆಂಧ್ರ ಪ್ರದೇಶದ ಚಿತ್ತೂರಿನಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಮಧ್ಯೆ ಸಿದ್ದಾಪುರ ಪೊಲೀಸರು ಡೇವಿಡ್‌ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ದರೋಡೆ ಕೃತ್ಯದಲ್ಲಿ ಶಾಮೀಲಾಗಿದ್ದ ವಿಜಯ್ ಬಳಿ ಇದ್ದದ್ದು ಇದೇ ಡೇವಿಡ್‌ನ ಬೈಕ್‌ ಎನ್ನಲಾಗಿದೆ. ಡೇವಿಡ್‌ನಿಂದ ಬೈಕ್‌ಪಡೆದಿದ್ದ ವಿಜಯ್ ಎಂಬಾತ ಮತ್ತೊಬ್ಬ ವಿಜಯ್ ಅನ್ನೋನಿಗೆ ಬೈಕ್ ನೀಡಿದ್ದ.

ನಂಬರ್ ಪ್ಲೇಟ್‌ಬದಲಿಸಿದ್ದ ಖದೀಮರು

ಸಿಎಂಎಸ್​ ವಾಹನದಿಂದ ಇನ್ನೋವಾಗೆ ಹಣ ಶಿಫ್ಟ್ ಮಾಡಿದ್ದ ದರೋಡೆಕೋರರು, ನಕಲಿ ನಂಬರ್ ಪ್ಲೇಟ್​ ಬಳಸಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದಾರೆ. ಆ ನಂಬರ್ ಮೂಲಕ ಕೆದಕಿದಾಗ ಬೆಂಗಳೂರಿದ್ದೇ ಸ್ವಿಫ್ಟ್ ಕಾರು ಪತ್ತೆ ಆಗಿದೆ.

ಇದನ್ನೂ ಓದಿ: ಬೆಂಗಳೂರು ಗ್ಯಾಂಗ್​ನಿಂದಲೇ 7 ಕೋಟಿ ರೂ. ದರೋಡೆ : ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಯಲು

ಏನೇ ಇರಲಿ, ದೇಶಾದ್ಯಂತ ಸದ್ದು ಮಾಡಿರುವ ದರೋಡೆ ಪ್ರಕರಣದಲ್ಲಿ ಓರ್ವ ಪೊಲೀಸ್ ಕಾನ್ಸ್‌ಟೇಬಲ್ ಬಲೆಗೆ ಬಿದ್ದಿರುವುದು ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ. ಸದ್ಯ ಆರೋಪಿಗಳು ಬೇರೆ ರಾಜ್ಯಕ್ಕೆ ಎಸ್ಕೇಪ್ ಆಗಿರೋದು ಖಚಿತವಾಗಿದೆ. ದರೋಡೆಕೋರರ ತಂಡ ಸೆರೆಸಿಕ್ಕ ಬಳಿಕವಷ್ಟೇ ಇದರ ಹಿಂದಿರುವ ಸೂತ್ರದಾರರು ಎಂಬುದು ಸ್ಪಷ್ಟವಾಗಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:38 am, Fri, 21 November 25

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು