AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ 7 ಕೋಟಿ ದರೋಡೆ​: ಕೊನೆಗೂ ಸಿಕ್ಕಿದ ಆರೋಪಿಗಳ ಸುಳಿವು

ಬೆಂಗಳೂರಿನಲ್ಲಿ ನಡೆದ 7.11 ಕೋಟಿ ನಗದು ದರೋಡೆ ಪ್ರಕರಣ ಸಂಬಂಧ ಆರೋಪಿಗಳ ಸುಳಿವು ಪೊಲೀಸರಿಗೆ ಲಭ್ಯವಾಗಿದೆ. ಇಬ್ಬರನ್ನು ವಶಕ್ಕೆ ಪಡೆದು ಸಿಸಿಬಿ ವಿಚಾರಣೆ ನಡೆಸುತ್ತಿದ್ದು, ಆರೋಪಿಗಳು ಬ್ಯಾಂಕ್‌ನಿಂದಲೇ ಹಣದ ವಾಹನವನ್ನು ಫಾಲೋ ಮಾಡಿರುವ ಶಂಕೆಯೂ ವ್ಯಕ್ತವಾಗಿದೆ. ನಾಲ್ವರು ಜಂಟಿ ಆಯುಕ್ತರು, 18 ಡಿಸಿಪಿಗಳ ನೇತೃತ್ವದಲ್ಲಿ ಆರೋಪಿಗಳಿಗೆ ಹುಡುಕಾಟ ನಡೆದಿದೆ.

ಬೆಂಗಳೂರಲ್ಲಿ 7 ಕೋಟಿ ದರೋಡೆ​: ಕೊನೆಗೂ ಸಿಕ್ಕಿದ ಆರೋಪಿಗಳ ಸುಳಿವು
ದರೋಡೆಯಾದ ವಾಹನ
ಪ್ರಸನ್ನ ಹೆಗಡೆ
|

Updated on:Nov 20, 2025 | 2:28 PM

Share

ಬೆಂಗಳೂರು, ನವೆಂಬರ್​ 20: ನಗರದಲ್ಲಿ 7.11 ಕೋಟಿ ನಗದು ದರೋಡೆ ಪ್ರಕರಣ ಸಂಬಂಧ ಆರೋಪಿಗಳ ಸುಳಿವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ದರೋಡೆಕೋರರ ಗ್ಯಾಂಗ್​​ ತಿರುಪತಿಯಲ್ಲಿ ಇರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಬೆಂಗಳೂರು ದಕ್ಷಿಣ ವಿಭಾಗ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ತಿರುಪತಿ ಪೊಲೀಸರೂ ಶೋಧ ಕಾರ್ಯಕ್ಕೆ ಸಾಥ್​​ ನೀಡಿದ್ದು, ಹೋಟೆಲ್, ಲಾಡ್ಜ್, ದೇಗುಲ ‌ಬಳಿ ಮಫ್ತಿಯಲ್ಲಿ ಆರೋಪಿಗಳಿಗಾಗಿ ಹುಡುಕಾಟ ನಡೆದಿದೆ. ಹಣ ಬೇರೆ ಕಡೆ ಇರಿಸಿ ಆರೋಪಿಗಳು ತಿರುಪತಿಯಲ್ಲಿ ಇರುವ ಶಂಕೆ ತನಿಖೆ ವೇಳೆ ವ್ಯಕ್ತವಾಗಿದೆ.

ಇಬ್ಬರು ಸಿಸಿಬಿ ಪೊಲೀಸರ ವಶಕ್ಕೆ

ಪ್ರಕರಣ ಸಂಬಂಧ ಬಾಣಸವಾಡಿಯ ಕಲ್ಯಾಣನಗರದ ಇಬ್ಬರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯುಪಿ ನೋಂದಣಿಯ ಕಾರಿನ ನಂಬರ್ ಪ್ಲೇಟ್ ಹಾಕಿಕೊಂಡು ಗ್ಯಾಂಗ್​ ಎಸ್ಕೇಪ್​ ಆಗಿದ್ದು, ದರೋಡೆ ವೇಳೆ ಕಾರಿನ ನೋದಣಿ ಕರ್ನಾಟಕದ್ದು ಇತ್ತು. ಕಲ್ಯಾಣನಗರದ ಸ್ವಿಫ್ಟ್ ಕಾರ್ ನಂಬರ್​ನ ಆರೋಪಿಗಳು ಬಳಸಿದ್ದರು. ದರೋಡೆಕೋರರು ಹಿಂದಿ ಮಾತನಾಡಿ ದಾರಿ ತಪ್ಪಿಸುವ ಕೆಲಸ‌ ಮಾಡಿದ್ದು, ಸಿಸಿಟಿವಿ ಮತ್ತು ಲೊಕೇಶನ್ ಡಂಪಿಂಗ್​ ಆಧಾರದಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ 7 ಕೋಟಿ ದರೋಡೆ​; ವೆಬ್​​ ಸೀರೀಸ್​ನಿಂದ ಪ್ರೇರಿತರಾಗಿದ್ರಾ ರಾಬರ್ಸ್?

ಬ್ಯಾಂಕ್​ ಬಳಿಯಿಂದಲೇ ವಾಹನ ಫಾಲೋ?

ರಾಜ್ಯವನ್ನೇ ಬೆಚ್ಚಿಬೀಳಿಸಿರುವ ರಾಬರಿ ಪ್ರಕರಣ ಬೆಂಗಳೂರು ನಗರ ಪೊಲೀಸರ ತಲೆಕೆಡಿಸಿದೆ. ನಾಲ್ವರು ಜಂಟಿ ಆಯುಕ್ತರು, 18 ಡಿಸಿಪಿಗಳ ನೇತೃತ್ವದಲ್ಲಿ ಆರೋಪಿಗಳಿಗೆ ಹುಡುಕಾಟ ನಡೆದಿದೆ. L&O, CCB, ಟ್ರಾಫಿಕ್ ಪೊಲೀಸರೂ ಶೋಧಕಾರ್ಯದಲ್ಲಿ ಭಾಗಿಯಾಗಿದ್ದಾರೆ. ನಾಲ್ವರು ಜಂಟಿ ಪೊಲೀಸ್ ಆಯುಕ್ತರು ಇಡೀ ಕೇಸ್ ಮಾನಿಟರ್ ಮಾಡುತ್ತಿದ್ದು, ಈವರೆಗೆ ನಗರದಲ್ಲಿ ನೂರಕ್ಕೂ ಹೆಚ್ಚು ಸಿಸಿಟಿವಿ ಫೂಟೇಜ್ ಪರಿಶೀಲನೆ ನಡೆಸಲಾಗಿದೆ. ಸಿಎಂಎಸ್ ವಾಹನದ ಮೊದಲ ಪಾಯಿಂಟ್ ಸಿಸಿಟಿವಿ ದೃಶ್ಯ ಲಭ್ಯವಾಗಿದ್ದು, ಹೆಚ್​ಡಿಎಫ್​ಸಿ ಬ್ಯಾಂಕ್​ನಿಂದ ಹಣ ತುಂಬಿ ವಾಹನ ಹೊಡುವ ವೇಳೆ ಆರೋಪಿಗಳಿದ್ದ ಇನ್ನೋವಾ ಕಾರು ಅಲ್ಲಿ ಕಂಡಬಂದಿಲ್ಲ. ಸ್ವಲ್ಪ ದೂರದಿಂದ ಕಾರಿನಲ್ಲಿ ಆರೋಪಿಗಳು ಫಾಲೋ ಮಾಡಿದ್ದು, HDFC ಬ್ಯಾಂಕ್ ಬಳಿಯಿಂದ ಬೈಕ್​ನಲ್ಲಿ ಫಾಲೋ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಹೀಗಾಗಿ ಆ ವೇಳೆ ಸ್ಥಳದಲ್ಲಿದ್ದ ಬೈಕ್​ಗಳ ಮಾಹಿತಿ ಕಲೆ ಹಾಕಲು ಪೊಲೀಸರು ಮುಂದಾಗಿದ್ದಾರೆ.

ವರದಿ- ವಿಕಾಸ್​, ಟಿವಿ9, ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:20 pm, Thu, 20 November 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ