81 ವರ್ಷದ ವೃದ್ಧ ಅಪರಾಧಿಗೆ 1 ವರ್ಷ ಅಂಗನವಾಡಿಯಲ್ಲಿ ಉಚಿತ ಸೇವೆ ಸಲ್ಲಿಸುವಂತೆ ವಿಭಿನ್ನ ಶಿಕ್ಷೆ ವಿಧಿಸಿದ ಕರ್ನಾಟಕ ಹೈಕೋರ್ಟ್

ಬಂಟ್ವಾಳದ ಆರೋಪಿ ಐತಪ್ಪ ನಾಯ್ಕಗೆ ದಕ್ಷಿಣ ಕನ್ನಡ ಜಿಲ್ಲಾ ಕೋರ್ಟ್‌ 2 ವರ್ಷ ಶಿಕ್ಷೆ ವಿಧಿಸಿತ್ತು. ಇದೀಗ ಹೈಕೋರ್ಟ್ ಶಿಕ್ಷೆ ಪ್ರಮಾಣವನ್ನು ಕಡಿಮೆಗೊಳಿ ವಿಭಿನ್ನ ಶಿಕ್ಷೆಯೊಂದನ್ನು ವಿಧಿಸಿದೆ.

81 ವರ್ಷದ ವೃದ್ಧ ಅಪರಾಧಿಗೆ 1 ವರ್ಷ ಅಂಗನವಾಡಿಯಲ್ಲಿ ಉಚಿತ ಸೇವೆ ಸಲ್ಲಿಸುವಂತೆ ವಿಭಿನ್ನ ಶಿಕ್ಷೆ ವಿಧಿಸಿದ ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
Follow us
Rakesh Nayak Manchi
|

Updated on:Feb 24, 2023 | 9:50 PM

ಬೆಂಗಳೂರು: ಹಲವು ವರ್ಷಗಳ ಹಿಂದೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಗಾಯಗೊಳಿಸಿದ್ದ ಪ್ರಕರಣ ಸಂಬಂಧ ಆರೋಪಿಯೊಬ್ಬನಿಗೆ ವಿಧಿಸಿದ ಶಿಕ್ಷೆ ಪ್ರಮಾಣವನ್ನು ಭಾರೀ ಪ್ರಮಾಣದಲ್ಲಿ ಇಳಿಕೆ ಮಾಡಿ ವಿಭಿನ್ನವಾದ ಒಂದು ಶಿಕ್ಷೆಯನ್ನು ನೀಡಿ ಕರ್ನಾಟಕ ಹೈಕೋರ್ಟ್ (Karnataka High Court) ಆದೇಶ ಹೊರಡಿಸಿದೆ. ಹೌದು, 2008ರಲ್ಲಿ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಗಾಯಗೊಳಿಸಿದ್ದ ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಆರೋಪಿ ಐತಪ್ಪ ನಾಯ್ಕ (81)ಗೆ ಜಿಲ್ಲಾ ಕೋರ್ಟ್ ವಿಧಿಸಿದ್ದ 2 ವರ್ಷಗಳ ಶಿಕ್ಷೆಯನ್ನು ಮೂರು ದಿನಕ್ಕೆ ಇಳಿಕೆ ಮಾಡಿ ಒಂದು ವರ್ಷ ಅಂಗನವಾಡಿಯಲ್ಲಿ ಉಚಿತವಾಗಿ ಸೇವೆ ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್​ ಆದೇಶಿಸಿದೆ.

ವೃದ್ಧ ಐತಪ್ಪ ನಾಯ್ಕ 2008ರಲ್ಲಿ ವ್ಯಕ್ತಿಯೊಬ್ಬರ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಗಾಯಗೊಳಿಸಿದ್ದರು. ಈ ಪ್ರಕರಣ ಸಂಬಂಧ ಆರೋಪಿ ಐತಪ್ಪನನ್ನು ಪೊಲೀಸರು ಬಂಧಿಸಿದ್ದರು. ಅದರಂತೆ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯವರು ಆರೋಪಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿತ್ತು. ಆದರೆ ಮಕ್ಕಳಿಲ್ಲದ ವೃದ್ಧ ಐತಪ್ಪ ನಾಯ್ಕ ತನ್ನ ಪತ್ನಿಯನ್ನು ನೋಡಿಕೊಳ್ಳಬೇಕಿರುವುದರಿಂದ ಶಿಕ್ಷೆ ಪ್ರಮಾಣವನ್ನು ಕಡಿಮೆಗೊಳಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಕ್ರೈಸ್ತ ಧರ್ಮಕ್ಕೆ ಬಲವಂತದ ಮತಾಂತರ ಯತ್ನ ಆರೋಪ: ಆರೋಪಿಗಳ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ

ಹೈಕೋರ್ಟ್​ನಲ್ಲಿ ನ್ಯಾಯಮೂರ್ತಿ ಆರ್. ನಟರಾಜ್ ಅವರಿದ್ದ ಏಕಸದಸ್ಯ ಪೀಠ, ಅರ್ಜಿ ವಿಚಾರಣೆಗೆ ಕೈಗೆತ್ತಿಕೊಂಡ ವೇಳೆ ವಾದ ಮಂಡಿಸಿದ ಆರೋಪಿ ಪರ ವಕೀಲ ದಿನೇಶ್ ಕುಮಾರ್ ಕೆ.ರಾವ್, ಮಕ್ಕಳಿಲ್ಲದ ವೃದ್ಧ ಐತಪ್ಪ ನಾಯ್ಕ ತನ್ನ ಪತ್ನಿಯನ್ನು ನೋಡಿಕೊಳ್ಳಬೇಕಿದೆ. ತಪ್ಪು ಒಪ್ಪಿಕೊಂಡು ಸಾಮುದಾಯಿಕ ಸೇವೆ ಸಲ್ಲಿಸಲು ಸಿದ್ದರಿದ್ದಾರೆ. ಹೀಗಾಗಿ ಶಿಕ್ಷೆ ಕಡಿಮೆ ಮಾಡುವಂತೆ ಮನವಿ ಮಾಡಿದರು.

ವಾದ ಆಲಿಸಿದ ಏಕಸದಸ್ಯ ಪೀಠ, ಆರೋಪಿ ಐತಪ್ಪ ನಾಯ್ಕಗೆ ಜಿಲ್ಲಾ ನ್ಯಾಯಾಲಯ ವಿಧಿಸಿದ್ದ ಎರಡು ವರ್ಷಗಳ ಶಿಕ್ಷೆಯನ್ನು ಮೂರು ದಿನಗಳಿಗೆ ಇಳಿಕೆ ಮಾಡಿತು. ಅಲ್ಲದೆ, 2023ರ ಫೆ.20ರಿಂದ ಮಿತನಡ್ಕ ಅಂಗನವಾಡಿಯಲ್ಲಿ ಒಂದು ವರ್ಷ ಉಚಿತವಾಗಿ ಸೇವೆ ಸಲ್ಲಿಸಬೇಕು ಎಂದು ಆದೇಶ ಹೊರಡಿಸಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:50 pm, Fri, 24 February 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ