AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮತ್ತೆ ಕುಖ್ಯಾತಿಗೆ ಒಳಗಾದ ಬಿಎಂಟಿಸಿ ಸಂಸ್ಥೆ; ಬಸ್ ಹರಿದು ಬಾಲಕಿ ದಾರುಣ ಸಾವು

ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಹರಿದು 9 ವರ್ಷದ ಬಾಲಕಿ ದಾರುಣವಾಗಿ ಸಾವನ್ನಪ್ಪಿದ ಘಟನೆ ರಾಜಾಜಿನಗರ ಮೊದಲನೇ ಬ್ಲಾಕ್​ನ ಸಿಗ್ನಲ್ ಬಳಿ ನಡೆದಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಬಿಎಂಟಿಸಿ ಚಾಲಕರ ಬೇಜವಾಬ್ದಾರಿತನದಿಂದ ಇಂತಹ ಅಪಘಾತಗಳು ಹೆಚ್ಚುತ್ತಿದ್ದು, ಸಾರ್ವಜನಿಕ ಸುರಕ್ಷತೆಯ ಬಗ್ಗೆ ತೀವ್ರ ಆತಂಕ ಮೂಡಿದೆ.

ಬೆಂಗಳೂರು: ಮತ್ತೆ ಕುಖ್ಯಾತಿಗೆ ಒಳಗಾದ ಬಿಎಂಟಿಸಿ ಸಂಸ್ಥೆ; ಬಸ್ ಹರಿದು ಬಾಲಕಿ ದಾರುಣ ಸಾವು
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Oct 18, 2025 | 7:32 AM

Share

ಬೆಂಗಳೂರು, ಅಕ್ಟೋಬರ್​ 18: ನಗರದಲ್ಲಿ ಜನಸಾಮಾನ್ಯರು ಎಲ್ಲಾದರೂ ಹೊರಗಡೆ ಹೋಗಬೇಕಾದರೆ ಮೊದಲಿಗೆ ನೆನಪಾಗುವುದು ಬಿಎಂಟಿಸಿ. ಆದರೆ ಇತ್ತೀಚಿನ ದಿನಗಳಲ್ಲಿ ಬಿಎಂಟಿಸಿ (BMTC) ಅಂದರೆ ಜನರು ಒಂದು ಕ್ಷಣ ಯೋಚಿಸುವಂತಾಗಿದೆ. ಏಕೆಂದರೆ ಉತ್ತಮ ಸಾರಿಗೆ ಸೇವೆಗೆ ಹೆಸರಾಗಿದ್ದ ಬಿಎಂಟಿಸಿ ಬಸ್​ಗಳು ಅಮಾಯಕ ಜನರ ಜೀವ ತೆಗೆಯುವ ಯಮಸ್ಬರೂಪಿಗಳಾಗಿ ಮಾರ್ಪಟ್ಟಿವೆ. ಇದೀಗ ನಗರದಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, 9 ವರ್ಷದ ಬಾಲಕಿ ಬಿಎಂಟಿಸಿ ಬಸ್ ಹರಿದು ದಾರುಣ ಅಂತ್ಯ (death) ಕಂಡಿದ್ದಾಳೆ.

ಬೆಂಗಳೂರಿನಲ್ಲಿ ಉತ್ತಮ ಸಾರಿಗೆ ಸೇವೆ ನೀಡುವಲ್ಲಿ ಹೆಸರುವಾಸಿಯಾದ ಬಿಎಂಟಿಸಿ ಸಂಸ್ಥೆಗೆ ಇತ್ತೀಚೆಗೆ ಮೇಲಿಂದ ಮೇಲೆ ಕಪ್ಪು ಚುಕ್ಕೆಗಳು ಬೀಳುತ್ತಿವೆ. ಬೇಜವಾಬ್ದಾರಿತನ ಪ್ರದರ್ಶಿಸಿ ಅಮಾಯಕ ಜನರ ಜೀವದ ಜೊತೆಗೆ ಕೆಲ ಬಿಎಂಟಿಸಿ ಬಸ್ ಚಾಲಕರು ಚೆಲ್ಲಾಟ ಆಡುತ್ತಿದ್ದಾರೆ. ಈ ರೀತಿಯ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿದ್ದು, ಅದಕ್ಕೆ ಮತ್ತೊಂದು ಪ್ರಕರಣ ಸೇರ್ಪಡೆಯಾಗಿದೆ. ಶಾಲೆ ಮುಗಿಸಿ ಮನೆ ಕಡೆಗೆ ತೆರಳುತ್ತಿದ್ದ 9 ವರ್ಷದ ಬಾಲಕಿ ಭುವನ ಮೇಲೆ ಬಿಎಂಟಿಸಿ ಚಕ್ರ ಹರಿದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಜಾಜಿನಗರ ಮೊದಲನೇ ಬ್ಲಾಕ್​ನ ಸಿಗ್ನಲ್ ಬಳಿ ನಡೆದಿದೆ.

ಇದನ್ನೂ ಓದಿ: ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಬಿಎಂಟಿಸಿ: ಮೂರು ಸಾವಿರ ಬಸ್​​ ಮಾರ್ಗಗಳ ವೇಳಾಪಟ್ಟಿ ಪರಿಷ್ಕರಣೆ

ರಾಜಾಜಿನಗರ ಮೊದಲನೇ ಬ್ಲಾಕ್​​ನಲ್ಲಿರುವ ಪಾಂಚ ಜನ್ಯ ವಿದ್ಯಾಪೀಠ ಶಾಲೆಯಲ್ಲಿ ಐದನೇ ತರಗತಿ ವ್ಯಾಸಂಗ ಮಾಡುತ್ತಿದ್ದ 9 ವರ್ಷದ ಭುವನ ತನ್ನ ಇಬ್ಬರು ಸಹೋದರಿಯರ ಜೊತೆ ಸಿಗ್ನಲ್ ದಾಟುವ ವೇಳೆ ಬಿಎಂಟಿಸಿ ಚಕ್ರಕ್ಕೆ ಸಿಲುಕಿ ನರಳಿ ಕೊನೆಯುಸಿರೆಳಿದ್ದಾಳೆ. ಘಟನೆ ಬಳಿಕ ಕೂಡಲೇ ಸಾರ್ವಜನಿಕರು ಭುವನಳನ್ನ ಸಮೀಪದಲ್ಲೇ ಇದ್ದ ಫೋರ್ಟಿಸ್ ಆಸ್ಪತ್ರೆಗೆ ಕರೆ ತಂದರೂ, ಅಷ್ಟರಲ್ಲಾಗಲೇ ಬಾಲಕಿ ಕೊನೆಯುಸಿರೆಳಿದಿದ್ದಳು.

ಸ್ಥಳಕ್ಕೆ ಬಂದ ಭುವನ ಪೋಷಕರ ಆಕ್ರಂದನ ಕರುಳು ಹಿಂಡುವಂತಿತ್ತು. ಭುವನ ಮೃತದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಯಿತು. ಮೃತ ಭುವನ ಅವರ ತಂದೆ ತಳ್ಳುವ ಗಾಡಿಯಲ್ಲಿ ವ್ಯಾಪಾರ ಮಾಡುತ್ತಿದ್ದು, ತಾಯಿ ಜೋಳದ ವ್ಯಾಪಾರ ಮಾಡುತ್ತಾ ಮೂರು ಹೆಣ್ಣು ಮಕ್ಕಳನ್ನು ಸಾಕುತ್ತಿದ್ದರು. ಮಹಾಲಕ್ಷ್ಮಿ ಲೇಔಟ್ ಬಳಿಯ ಬೋವಿ ಪಾಳ್ಯದಲ್ಲಿ ವಾಸ ಇದ್ದರು ಎನ್ನಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಹರಿದು ಬಾಲಕ ಸ್ಥಳದಲ್ಲೇ ಸಾವು

ಒಟ್ಟಾರೆ ಬಿಎಂಟಿಸಿ ಬಸ್​ಗಳೆಂದರೆ ಇತ್ತೀಚೆಗೆ ಜನ ಗಾಬರಿ ಪಡುವ ಹಾಗೆ ಘಟನೆಗಳು ಒಂದಾದ ಮೇಲೆ ಒಂದರಂತೆ ಮರುಕಳಿಸುತ್ತಿವೆ. ಜನಸಾಮಾನ್ಯರು ಬಸ್ ಹತ್ತುವುದಿರಲಿ ರಸ್ತೆಯಲ್ಲಿ ಓಡಾಟ ಮಾಡುವುದಕ್ಕೂ ಭಯ ಪಡುವ ಹಾಗೆ ಕೆಲ ಬಿಎಂಟಿಸಿ ಬಸ್ ಚಾಲಕರು ಅಪಾಯಕಾರಿ ಚಾಲನೆ ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಬೀಳುವುದು ಯಾವಾಗ? ಬಿಎಂಟಿಸಿ ಹಿರಿಯ ಅಧಿಕಾರಿಗಳು ಏನೇ ಸಬೂಬು ಹೇಳುತ್ತಿದ್ದರೂ, ಘಟನೆಗಳು ನಡೆಯುತ್ತಲೇ ಇದ್ದು, ಸಾರ್ವಜನಿಕರ ಛೀಮಾರಿಗೆ ಗುರಿಯಾಗಿದೆ.

ವರದಿ: ಲಕ್ಷ್ಮಿ ನರಸಿಂಹ ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ