ಮೆಡಿಕಲ್ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 40 ಲಕ್ಷ ಬೆಲೆಬಾಳುವ ಔಷಧಿಗಳು ಬೆಂಕಿಗಾಹುತಿಯಾಗಿವೆ.
ಬೆಂಗಳೂರಿನ ಸುಂಕದಕಟ್ಟೆ ಬಸ್ ನಿಲ್ದಾಣ ಪಕ್ಕದಲ್ಲಿರುವ ಮೆಡಿಕಲ್ ಫಾರ್ಮಾ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಗೋದಾಮು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಗೋದಾಮು ಸಂಪೂರ್ಣವಾಗಿ ಸುಟ್ಟಿರುವ ಕಾರಣ ಸುಮಾರು 40 ಲಕ್ಷ ರೂ. ಬೆಲೆ ಬಾಳುವ ಔಷಧಿಗಳು ಕೂಡ ನಾಶವಾಗಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.