AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮೂರು ತಿಂಗಳ ಹಿಂದೆ ವಿವಾಹವಾಗಿದ್ದ ಮಹಿಳೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಹಲವಾರು ಅನುಮಾನಗಳು ಮೂಡಿವೆ. ಇನ್ನು ಘಟನೆ ಕುರಿತು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದು, ಗಂಡನೇ ಕೊಲೆ ಮಾಡಿದನಾ? ಎಂಬ ಅನುಮಾನ ವ್ಯಕ್ತವಾಗಿದೆ.

ಬೆಂಗಳೂರು: ಮೂರು ತಿಂಗಳ ಹಿಂದೆ ವಿವಾಹವಾಗಿದ್ದ ಮಹಿಳೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ಪ್ರಾತಿನಿಧಿಕ ಚಿತ್ರ
Follow us
Prajwal Kumar NY
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 08, 2023 | 6:26 PM

ಬೆಂಗಳೂರು, ಸೆ.08: ನವ ವಿವಾಹಿತೆಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬೆಂಗಳೂರಿನ (Bengaluru) ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೃಷ್ಣವೇಣಿ (26) ಮೃತ ನವ ವಿವಾಹಿತೆ(Newly Married Woman). ಮೃತ ಕೃಷ್ಣವೇಣಿ ಅವರನ್ನು ಮೂರು ತಿಂಗಳ ಹಿಂದೆ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕೋಲಾರ ಮೂಲದ ಪೃಥ್ವಿರಾಜ್ ಎಂಬುವವರ ಜೊತೆ ವಿವಾಹ ಮಾಡಿಕೊಡಲಾಗಿತ್ತು. ಇದೀಗ ಈ ದುರ್ಘಟನೆ ಬೆಳಕಿಗೆ ಬಂದಿದ್ದು, ಪತಿ ವಿರುದ್ದ ಮೃತಳ ಕುಟುಂಬದವರು ಕೊಲೆ ಆರೋಪ ಮಾಡಿದ್ದಾರೆ. ಈ ಕುರಿತು ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ನೇಣು ಬಿಗಿದುಕೊಂಡು ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ

ಕೋಲಾರ: ನಗರದ ಟಮಕ ಬಳಿಯ ದೇವರಾಜ ಅರಸು ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪಿಜಿಯೋ ಥೆರಪಿ ಪ್ರಾಕ್ಟೀಸ್​ನಲ್ಲಿದ್ದ ಕೇರಳ ಮೂಲದ ಮೆಡಿಕಲ್ ವಿದ್ಯಾರ್ಥಿ, ಅಖಿಲೇಶ್ (20) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಯುವಕ. ಇತ್ತೀಚೆಗೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಇತ, ಜೀವನದಲ್ಲಿ ಬೇಸರಗೊಂಡಿದ್ದ ಎಂಬುದು ತಿಳಿದು ಬಂದಿದೆ. ಇನ್ನು ಮೃತ ಯುವಕ ಸ್ನೇಹಿತರು ಹಾಗೂ ಸಹಪಾಠಿಗಳೊಂದಿಗೆ ಅಷ್ಟಾಗಿ ಬೆರೆಯುತ್ತಿರಲಿಲ್ಲವಂತೆ. ಇನ್ನು ಈ ಘಟನೆಯನ್ನು ಛತ್ತೀಸ್​ಘಡ ಅಲ್ಲಿರುವ ಆತನ ಪೋಷಕರಿಗೆ ತಿಳಿಸಲಾಗಿದ್ದು, ನಾಳೆ ಅವರು ಆಗಮಿಸಿದ ಬಳಿಕ ಪೋಷಕರು ನೀಡಿದ ದೂರನ್ನು ಆಧರಿಸಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ಇನ್ನು ಈ ಘಟನೆ ಗಲ್​ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ:ಚನ್ನಪಟ್ಟಣ: ಪತ್ನಿಯ ಮಾರ್ಫ್ ಮಾಡಿದ ಅಶ್ಲೀಲ ಚಿತ್ರಗಳನ್ನು ಕಳುಹಿಸಿದ ಸಾಲದ ಏಜೆಂಟ್, ನೊಂದ ಪತಿ ಆತ್ಮಹತ್ಯೆಗೆ ಶರಣು

ವಿದ್ಯುತ್ ಸ್ಪರ್ಶಿಸಿ ಯುವಕ ಸಾವು

ಬೆಂಗಳೂರು ಗ್ರಾಮಾಂತರ: ಹೈಟೆನ್ಷನ್ ಟವರ್​ ಏರಿದ್ದ ವ್ಯಕ್ತಿಗೆ ವಿದ್ಯುತ್ ಸ್ಪರ್ಶವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೋನೆನಹಳ್ಳಿ ಬಳಿ ನಡೆದಿದೆ. ಅಮೃತ್(25) ಮೃತ ವ್ಯಕ್ತಿ. ಇನ್ನು ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ದೊಡ್ಡಬೆಳವಂಗಲ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್