ಕಾರ್ಮಿಕ ಇಲಾಖೆ ಕಚೇರಿ ಮೇಲೆ ಎಸಿಬಿ ದಾಳಿ; ದಾಖಲೆ ಇಲ್ಲದ 1.54 ಲಕ್ಷ ನಗದು ಪತ್ತೆ

ಕಾರ್ಮಿಕ ಇಲಾಖೆಯ ಸಿಬ್ಬಂದಿ ವ್ಯವಸ್ಥೆಯಲ್ಲಿ ಲೋಪ ಕಂಡು ಬಂದಲ್ಲಿ ಕ್ರಮ ಜರುಗಿಸದೆ ಅಕ್ರಮ ಹಣಕ್ಕಾಗಿ ಡಿಮ್ಯಾಂಡ್ ಮಾಡುತ್ತಿದ್ದರು ಎಂಬ ಆರೋಪ ಮಾಡಲಾಗಿದೆ.

ಕಾರ್ಮಿಕ ಇಲಾಖೆ ಕಚೇರಿ ಮೇಲೆ ಎಸಿಬಿ ದಾಳಿ; ದಾಖಲೆ ಇಲ್ಲದ 1.54 ಲಕ್ಷ ನಗದು ಪತ್ತೆ
ಭ್ರಷ್ಟಾಚಾರ ನಿಗ್ರಹ ದಳ
Follow us
TV9 Web
| Updated By: guruganesh bhat

Updated on:Sep 07, 2021 | 10:45 PM

ಬೆಂಗಳೂರು: ಕಾರ್ಮಿಕ ಇಲಾಖೆ ಕಚೇರಿ ಮೇಲೆ ಎಸಿಬಿ ದಾಳಿ ಮಾಡಿದ್ದು, ದಾಖಲೆ ಇಲ್ಲದ 1.54 ಲಕ್ಷ ನಗದು ಪತ್ತೆಯಾಗಿದೆ. ಬೆಂಗಳೂರಿನ ಡೇರಿ ಸರ್ಕಲ್‌ ಬಳಿಯ ಕಾರ್ಮಿಕ ಇಲಾಖೆ ಕಚೇರಿ ಮೇಲೆ ನಡೆಸಿದ ದಾಳಿಯಲ್ಲಿ ಇಲಾಖೆಯ ಸಿಬ್ಬಂದಿ ಕಾರ್ಮಿಕ ಏಜೆನ್ಸಿಗಳಿಂದ ಲಂಚ ಪಡೆಯುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ದಾಖಲೆ ಸರಿಯಿಲ್ಲವೆಂದು ಗಾರ್ಮೆಂಟ್ಸ್, ಸೆಕ್ಯೂರಿಟಿ ಏಜೆನ್ಸಿಗಳಿಂದ ಕಾರ್ಮಿಕ ಇಲಾಖೆಯ ಸಿಬ್ಬಂದಿ ಲಂಚ ಪಡೆಯುತ್ತಿದ್ದರು. ಕಚೇರಿಯಲ್ಲೇ ಕುಳಿತು ಏಜೆಂಟ್​ಗಳ ಮೂಲಕ ಹಣ ಸುಲಿಗೆ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ಇಲಾಖೆ ಕಾರ್ಮಿಕರ ಪಿಎಫ್, ಗ್ರ್ಯಾಚ್ಯುವಿಟಿ ಸೇರಿದಂತೆ ನಾನಾ‌ ಸೌಲಭ್ಯಗಳ ಬಗ್ಗೆ ಪರಿಶೀಲನೆ ಮಾಡಬೇಕು. ಆದರೆ ಕಾರ್ಮಿಕ ಇಲಾಖೆಯ ಸಿಬ್ಬಂದಿ ವ್ಯವಸ್ಥೆಯಲ್ಲಿ ಲೋಪ ಕಂಡು ಬಂದಲ್ಲಿ ಕ್ರಮ ಜರುಗಿಸದೆ ಅಕ್ರಮ ಹಣಕ್ಕಾಗಿ ಡಿಮ್ಯಾಂಡ್ ಮಾಡುತ್ತಿದ್ದರು ಎಂಬ ಆರೋಪ ಮಾಡಲಾಗಿದೆ. ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿಯ ನಂತರ ತನಿಖೆ ಮುಂದುವರೆಸಿದ್ದಾರೆ.

ರಾತ್ರಿ ಪಾಳಿಗೆ ವಾಹನ ವ್ಯವಸ್ಥೆ ಕೇಳಿದ್ದಕ್ಕೆ ನಿಮ್ಹಾನ್ಸ್ ಪೌರಕಾರ್ಮಿಕರ ವಜಾ; ನ್ಯಾಯ ನೀಡುವಂತೆ ಆಗ್ರಹ ರಾತ್ರಿಪಾಳಿಗೆ ವಾಹನ ವ್ಯವಸ್ಥೆ ಮಾಡಲು ಕೇಳಿದ್ದಕ್ಕೆ ನಿಮ್ಹಾನ್ಸ್ ಆಸ್ಪತ್ರೆ ಪೌರಕಾರ್ಮಿಕರನ್ನು ವಜಾ ಮಾಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ನಿಮ್ಹಾನ್ಸ್​ ಆಸ್ಪತ್ರೆ ಬಳಿ ಪೌರಕಾರ್ಮಿಕರು ಧರಣಿ ನಡೆಸಿದ್ದಾರೆ. ಪೌರಕಾರ್ಮಿಕರು ಕಳೆದ 2 ತಿಂಗಳಿನಿಂದ ಧರಣಿ ನಡೆಸುತ್ತಿದ್ದಾರೆ. 19 ಪೌರಕಾರ್ಮಿಕರ ವಜಾಗೊಳಿಸಿದ ಕ್ರಮ ಪ್ರಶ್ನಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಸಂಬಂಧ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಶಿವಣ್ಣ ಭೇಟಿ ನೀಡಿದ್ದಾರೆ. ನೊಂದ ಪೌರಕಾರ್ಮಿಕರ ಅಹವಾಲು ಆಲಿಸಿದ್ದಾರೆ.

ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪೌರಕಾರ್ಮಿಕರಿಗೆ ಆಗಿರುವ ಅನ್ಯಾಯದ ವಿರುದ್ಧ ಕಿಡಿಕಾರಿದ್ದಾರೆ. ನಿಮ್ಹಾನ್ಸ್ ಆಸ್ಪತ್ರೆ ನಿರ್ದೇಶಕಿಯನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ವಜಾಗೊಂಡ ಕಾರ್ಮಿಕರಿಗೆ ನ್ಯಾಯ ನೀಡುವಂತೆ ಆಗ್ರಹಿಸಿದ್ದಾರೆ.

ನಿಮ್ಹಾನ್ಸ್ ಸಿಬ್ಬಂದಿ ಪ್ರತಿಭಟನೆ ನಗರದ ನಿಮ್ಹಾನ್ಸ್ ಆಸ್ಪತ್ರೆ ಗುತ್ತಿಗೆ ಸಿಬ್ಬಂದಿಯಿಂದ ಕೆಲಸದ ಸಮಯದ ವಿಚಾರವಾಗಿ ಈ ಹಿಂದೆಯೂ ಪ್ರತಿಭಟನೆ ನಡೆದಿತ್ತು. ಮಹಿಳಾ ಸಿಬ್ಬಂದಿ ಸಂಜೆ 7.30ರ ಒಳಗೆ ಶಿಫ್ಟ್ ಮುಗಿಸುವಂತೆ ಮನವಿ ಮಾಡಿದ್ದರು. ಆದರೆ, ಗುತ್ತಿಗೆ ಸಿಬ್ಬಂದಿ ಮನವಿಗೆ ಆಡಳಿತ ಮಂಡಳಿ ಸೂಕ್ತ ರೀತಿಯಲ್ಲಿ ಸ್ಪಂದಿಸಿಲ್ಲ. ಹೀಗಾಗಿ, ಸಿಬ್ಬಂದಿ ಧರಣಿ ನಡೆಸಿದ್ದರು. ಈ ವಿಚಾರವಾಗಿ ಕಳೆದ ಕೆಲವು ಸಮಯದಿಂದ ಗುತ್ತಿಗೆ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದರು. ಆದರೂ ಸಂಸ್ಥೆ ಡೋಂಟ್‌ಕೇರ್ ಎಂಬಂತೆ ವರ್ತಿಸುತ್ತಿದೆ ಎಂದು ತಿಳಿದುಬಂದಿತ್ತು.

ರೇಡಿಯಾಲಜಿ ವಿಭಾಗದಲ್ಲಿ ಹೌಸ್ ಕೀಪಿಂಗ್ ಹಾಗೂ ಸಹಾಯಕ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಅವರು ಕೆಲಸದ ಟೈಮಿಂಗ್ ವಿಚಾರವಾಗಿ ಪ್ರತಿಭಟನೆ ನಡೆಸುತ್ತಿದ್ದರು. ವಿಭಾಗದ ಬಹುತೇಕ ಸಿಬ್ಬಂದಿ ಹೆಣ್ಣು ಮಕ್ಕಳು ಆಗಿರುವ ಕಾರಣದಿಂದ ರಾತ್ರಿ ವೇಳೆ ಕೆಲಸ ಮಾಡುವುದು ತೊಂದರೆ ಆಗುತ್ತಿದೆ. ಹೀಗಾಗಿ ಸಂಜೆ 7.30 ಒಳಗೆ ಕೆಲಸ ಮುಗಿಸಲು ಅವರು ಬೇಡಿಕೆ ಇಟ್ಟಿದ್ದರು.

ಇದನ್ನೂ ಓದಿ: 

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ ರಚನೆ; ಮೊಹಮ್ಮದ್ ಹಸನ್ ಅಕುಂದ್ ನೂತನ ಪ್ರಧಾನ ಮಂತ್ರಿ

ನಮ್ಮ ಸಿನಿಮಾದಲ್ಲಿ ಸಿಎಂ ಬೊಮ್ಮಾಯಿ ಹೀರೋ, ಯಡಿಯೂರಪ್ಪ ನಿರ್ದೇಶಕ: ಸಚಿವ ಶ್ರೀರಾಮುಲು ವ್ಯಾಖ್ಯಾನ

(Bengaluru ACB attacks on Labour Department office 1.54 lakh cash found)

Published On - 10:31 pm, Tue, 7 September 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ