AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ 13 ಅಪಘಾತಗಳು! ಎಲ್ಲೆಲ್ಲಿ ಎಷ್ಟು ಸಾವು? ಇಲ್ಲಿದೆ ಅಂಕಿಅಂಶ

ಇತ್ತೀಚೆಗೆ ಕರ್ನಾಟಕದಲ್ಲಿ ಒಂದೇ ದಿನ 38 ಮಂದಿ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಈ ದಿನವನ್ನು ಕರಾಳ ಶನಿವಾರ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದರು. ಇದೀಗ, ಬೆಂಗಳೂರು ನಗರದಲ್ಲೇ ಕಳೆದ 24 ಗಂಟೆಗಳಲ್ಲಿ 13 ಅಫಾತಗಳು ಸಂಭವಿಸಿದೆ.

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ 13 ಅಪಘಾತಗಳು! ಎಲ್ಲೆಲ್ಲಿ ಎಷ್ಟು ಸಾವು? ಇಲ್ಲಿದೆ ಅಂಕಿಅಂಶ
ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ 13 ಅಪಘಾತಗಳು (ಸಾಂದರ್ಭಿಕ ಚಿತ್ರ)
Shivaprasad B
| Edited By: |

Updated on:Aug 22, 2023 | 12:55 PM

Share

ಬೆಂಗಳೂರು, ಆಗಸ್ಟ್ 22: ಇತ್ತೀಚೆಗೆ ಕರ್ನಾಟಕದಲ್ಲಿ ಒಂದೇ ದಿನ 38 ಮಂದಿ ಅಪಘಾತದಲ್ಲಿ (Accident) ಸಾವನ್ನಪ್ಪಿದ್ದರು. ಈ ದಿನವನ್ನು ಕರಾಳ ಶನಿವಾರ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದರು. ಇದೀಗ ಕಳೆದ 24 ಗಂಟೆಗಳಲ್ಲಿ ಬೆಂಗಳೂರು (Bengaluru) ನಗರದಲ್ಲೇ ಸಂಭವಿಸಿದ 13 ಅಫಾತಗಳಲ್ಲಿ ಮೂವರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಎಲ್ಲೆಲ್ಲಿ ಅಪಘಾತ ಸಂಭವಿಸಿದೆ?

  • ಹೆಬ್ಬಾಳ – ಒಂದು ಅಪಘಾತ, ಒಂದು ಸಾವು (ಸೆಲ್ಫ್ ಆಕ್ಸಿಡೆಂಟ್)
  • ರಾಜಾಜಿನಗರ – ಎರಡು ಅಪಘಾತ, ಒಂದು ಸಾವು‌ (ಸೆಲ್ಫ್ ಆಕ್ಸಿಡೆಂಟ್)
  • ಹೆಣ್ಣೂರು – ಎರಡು ಅಪಘಾತ, ಒಂದು ಸಾವು (ಪಾದಚಾರಿ ಸಾವು)
  • ಬಸವನಗುಡಿ – ಎರಡು ಅಪಘಾತ
  • ಕೆ.ಆರ್ ಪುರಂ – ಒಂದು ಅಪಘಾತ
  • ವೈಟ್ ಫೀಲ್ಡ್ – ಎರಡು ಅಪಘಾತ
  • ಹುಳಿಮಾವು – ಎರಡು ಅಪಘಾತ
  • ಸದಾಶಿವನಗರ – ಒಂದು ಅಪಘಾತ
  • ಮೈಲೋ ಲೇ ಔಟ್ – ಒಂದು ಅಪಘಾತ

ಹೆಬ್ಬಾಳ ಠಾಣಾ ವ್ಯಾಪ್ತಿಯಲ್ಲಿ ಸೆಲ್ಪ್ ಆಕ್ಸಿಡೆಂಟ್​​ಗೆ ಪಶ್ಚಿಮ ಬಂಗಾಳ‌ ಮೂಲದ 32 ವರ್ಷದ ಯುವಕ ಬಲಿಯಾಗಿದ್ದು, ಹೆಣ್ಣೂರು ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ. ಪೂನಂದಾಸ್ (32) ಮೃತೆ. ಅತಿ ವೇಗದಿಂದ ಬಂದು ಡಿವೈಡರ್​​ಗೆ ಬೈಕ್ ಡಿಕ್ಕಿಯಾಗಿ ರಾಹುಲ್ (19) ಎಂಬಾತ ಮೃತಪಟ್ಟಿದ್ದಾನೆ. ಒಟ್ಟಾರೆಯಾಗಿ 13 ಅಪಘಾತಗಳಲ್ಲಿ 10 ಮಂದಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಹೊರವಲಯದಲ್ಲಿ ತಡರಾತ್ರಿ 2 ಅಪಘಾತಗಳು, ಒಬ್ಬ ಯುವಕ ಸಾವು

ರಾಜ್ಯದಲ್ಲಿ ದಿನೇ ದಿನೇ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದೆ. ಕಾಲೇಜು ಯುವಕ, ಯುವತಿಯರು, ಮಹಿಳೆಯರು, ಮಕ್ಕಳು, ಪುರುಷರು ಸೇರಿದಂತೆ ವಯೋವೃದ್ಧರು ಅಪಘಾತದಲ್ಲಿ ಸಾವನ್ನಪ್ಪುತ್ತಿದ್ದಾರೆ. ಈ ಕುರಿತು ಆತಂಕ ವ್ಯಕ್ತಪಡಿಸಿದ್ದ ರಾಜ್ಯ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್, ಶನಿವಾರ ಒಂದೇ ದಿನ ಸಂಭವಿಸಿದ ಅಪಘಾತಗಳನ್ನ ಆಧರಿಸಿ ಕರಾಳ ಶನಿವಾರ ಎಂದು ಕರೆದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:44 pm, Tue, 22 August 23

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ