Chetan Ahimsa: ಪರಪ್ಪನ ಅಗ್ರಹಾರ ಜೈಲಿನಿಂದ ನಟ ಚೇತನ್ ಅಹಿಂಸಾ ಬಿಡುಗಡೆ

ಸೋಶಿಯಲ್​ ಮೀಡಿಯಾದಲ್ಲಿ ಹಿಂದುತ್ವದ ಬಗ್ಗೆ ಪೋಸ್ಟ್​ ಮಾಡಿದ್ದ ನಟ ಚೇತನ್ ಅಹಿಂಸಾಗೆ ಜಾಮೀನು ಮಂಜೂರಾದ ಹಿನ್ನೆಲೆ ಇದೀಗ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ನಂತರ ಮಾತನಾಡಿದ ಅವರು, ಇನ್ನೂ ಹೆಚ್ಚಿನ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

Chetan Ahimsa: ಪರಪ್ಪನ ಅಗ್ರಹಾರ ಜೈಲಿನಿಂದ ನಟ ಚೇತನ್ ಅಹಿಂಸಾ ಬಿಡುಗಡೆ
ಪರಪ್ಪನ ಅಗ್ರಹಾರದ ಬಳಿ ಚೇತನ್ ಅಹಿಂಸಾ
Follow us
Rakesh Nayak Manchi
|

Updated on:Mar 26, 2023 | 7:36 AM

ಬೆಂಗಳೂರು: ಸೋಶಿಯಲ್​ ಮೀಡಿಯಾದಲ್ಲಿ ಹಿಂದುತ್ವದ ಬಗ್ಗೆ ಪೋಸ್ಟ್​ ಮಾಡಿದ್ದ ನಟ ಚೇತನ್ ಅಹಿಂಸಾಗೆ (Chetan Kumar Ahimsa) ಜಾಮೀನು ಮಂಜೂರಾದ ಹಿನ್ನೆಲೆ ಇದೀಗ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ನಂತರ ಮಾತನಾಡಿದ ಅವರು, ಇನ್ನೂ ಹೆಚ್ಚಿನ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಪರಪ್ಪನ ಅಗ್ರಹಾರ ಬಳಿ ಮಾತನಾಡಿದ ಅವರು, ಸಮಾನತೆಗಾಗಿ ಇನ್ನೂ‌ ಎಷ್ಟು ಸಲ ಬೇಕಾದರೂ ಜೈಲಿಗೆ ಹೋಗಲು ಸಿದ್ಧನಾಗಿದ್ದೇನೆ. ಕಳೆದ ಬಾರಿ ಟ್ವೀಟ್ ಮಾಡಿದ್ದಕ್ಕೆ ಏಳು ದಿನ ಜೈಲಿಗೆ ಹಾಕಿದ್ದರು. ಈ ಬಾರಿ ‌ಟ್ವೀಟ್ ಮಾಡಿದಕ್ಕೆ ಮೂರು ದಿನ‌ ಬಂಧನ ಮಾಡಿದ್ದಾರೆ. ಹೋರಾಟಗಾರರು ಸೆರೆಮನೆಯನ್ನೇ ಅರಮನೆ ಅಂತ ತಿಳಿದುಕೊಳ್ಳಬೇಕು.  ವಾಕ್‌ ಸ್ವಾತಂತ್ರ್ಯ ಕಿತ್ತು ಹಾಕಲಾಗುತ್ತಿದೆ. ಹಿಂದುತ್ವ (Hindutva) ಬೇರೆ ಹಿಂದೂ ಧರ್ಮ ಬೇರೆ. ಪ್ರತ್ಯೇಕ ಲಿಂಗಾಯತ ಧರ್ಮದ ರೀತಿ ಪ್ರತ್ಯೇಕ ಧರ್ಮ ಮಾಡುವುದಾದರೆ ಹೇಳಿ ನಾವು ನಿಮ್ಮ ಜತೆ ನಿಲ್ಲುತ್ತೇವೆ. ಆದರೆ ಹಿಂದೂನೂ ನೀವೇ, ಹಿಂದುತ್ವವೂ ನೀವೇ ಅಂತ ಧರ್ಮ ಹೈಜಾಕ್ ಮಾಡಲು ಆಗುವುದಿಲ್ಲ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಹೋರಾಟ ಮಾಡುತ್ತೇವೆ. ನಮ್ಮನ್ನು ಕುಗ್ಗಿಸಲು ಆಗಲ್ಲ ಎಂದರು.

ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಸ್ಯಾಂಡಲ್​ವುಡ್ ನಟ ಚೇತನ್ ಅಹಿಂಸಾಗೆ ಜಾಮೀನು ಮಂಜೂರಾದ ಹಿನ್ನೆಲೆ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. 25 ಸಾವಿರ ರೂಪಾಯಿ ವೈಯಕ್ತಿಕ ಬಾಂಡ್, ಒಬ್ಬರ ಶ್ಯೂರಿಟಿ ನೀಡುವಂತೆ ಸೂಚಿಸಿ ಚೇತನ್​ಗೆ ಜಾಮೀನು ಮಂಜೂರು ಮಾಡಿ ಬೆಂಗಳೂರಿನ 32ನೇ ACMM ಕೋರ್ಟ್​​ ನ್ಯಾಯಾಧೀಶೆ ಲತಾ ಅವರು ಆದೇಶಿಸಿತ್ತು. ಸಾಮಾಜಿಕ ಜಾಲತಾಣದಲ್ಲಿ ಹಿಂದುತ್ವದ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್​ ಮಾಡಿದ್ದ ಪ್ರಕರಣ ಸಂಬಂಧ ಚೇತನ್​ನನ್ನ ಬಂಧಿಸಿದ್ದ ಶೇಷಾದ್ರಿಪುರಂ ಠಾಣಾ ಪೊಲೀಸರು, ಕೋರ್ಟ್​ಗೆ ಹಾಜರು ಪಡಿಸಿದ್ದರು. ಅದರಂತೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್​ ಆದೇಶಿಸಿತ್ತು. ಅದರ ಅನ್ವಯ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಚೇತನ್​ಗೆ ಇದೀಗ ಜಾಮೀನು ಮಂಜೂರಾಗಿತ್ತು.

ಇದನ್ನೂ ಓದಿ: ಹಿಂದೂ ಆಗಿದ್ದರೂ ಹಿಂದುತ್ವದ ವಿರೋಧಿ ಅಂತ ಸಿದ್ದರಾಮಯ್ಯ ಹೇಳುವುದು ಅರ್ಥಹೀನ: ಮಂತ್ರಾಲಯ ಸ್ವಾಮೀಜಿ

‘ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕ : ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದಾಗ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು. ಇದು ಒಂದು ಸುಳ್ಳು. 1992ರಲ್ಲಿ: ಬಾಬರಿ ಮಸೀದಿ ‘ರಾಮನ ಜನ್ಮಭೂಮಿ’. ಇದು ಒಂದು ಸುಳ್ಳು. ಈಗ 2023ರಲ್ಲಿ: ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು- ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು ಸತ್ಯವೇ ಸಮಾನತೆ’ ಎಂದು ಚೇತನ್​ ಮಾಡಿರುವ ಪೋಸ್ಟ್​ ವೈರಲ್​ ಆಗಿತ್ತು.

ಚೇತನ್​ ಮಾಡಿರುವ ಈ ಪೋಸ್ಟ್​ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಕೆಲವರು ಚೇತನ್ ಮಾತಿಗೆ ಬೆಂಬಲ ಸೂಚಿಸಿದ್ದಾರೆ. ಆದರೆ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಶಿವಕುಮಾರ್ ಎಂಬವರು ಶೇಷಾದ್ರಿಪುರಂ ಠಾಣೆಗೆ ದೂರು ನೀಡಿದ್ದರು. ಸಿನಿಮಾ ಹೊರತಾಗಿಯೂ ಚೇತನ್ ಸದಾ ಹಿಂದೂ ಧರ್ಮ, ಹಿಂಧುತ್ವ, ಬ್ರಾಹ್ಮಣರ ವಿರುದ್ಧ ಹೇಳಿಕೆ ನೀಡುವ ಮೂಲಕ ಸದಾ ಸದ್ದಿಯಲ್ಲಿರುತ್ತಾರೆ. ರಾಜಕೀಯ ಮತ್ತು ಸಾಮಾಜಿಕ ಬೆಳವಣಿಗೆಗಳ ಬಗ್ಗೆ ವಿವಾದ ಹುಟ್ಟುಕೊಳ್ಳುವಂತೆ ಆಗಾಗ ತಮ್ಮ ಅನಿಸಿಕೆ ಹಂಚಿಕೊಳ್ಳುತ್ತಿರುತ್ತಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:28 pm, Thu, 23 March 23

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ