AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬರ್ತ್ ಡೇ ಸಂಭ್ರಮಾಚರಣೆಯಲ್ಲಿ ಏರ್ ಫೈರ್, ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಅಪ್​ಲೋಡ್ ಮಾಡಿದ್ದೇ ಮುಳುವಾಯ್ತು!

ಬರ್ತ್ ಡೇ ಸಂಭ್ರಮಾಚರಣೆಯಲ್ಲಿ ಪಿಸ್ತೂಲ್ ಸದ್ದು ಮಾಡಿದ್ದು, ಹುಚ್ಚಾಟ ಮಾಡಿ ವಿಡಿಯೋ ಇನ್​​ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದವನು ಈಗ ಪೇಚಿಗೆ ಸಿಲುಕಿದ್ದಾನೆ. ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಶಸ್ತ್ರಾಗಳ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇನ್​​ಸ್ಟಾಗ್ರಾಂನಲ್ಲಿ ವಿಡಿಯೋ ಅಪ್​ಲೋಡ್ ಮಾಡಿದ್ದೇ ಆರೋಪಿಗೆ ಮುಳುವಾಗಿದೆ! ಘಟನೆ ಕುರಿತ ವಿವರ ಇಲ್ಲಿದೆ.

ಬೆಂಗಳೂರು: ಬರ್ತ್ ಡೇ ಸಂಭ್ರಮಾಚರಣೆಯಲ್ಲಿ ಏರ್ ಫೈರ್, ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಅಪ್​ಲೋಡ್ ಮಾಡಿದ್ದೇ ಮುಳುವಾಯ್ತು!
ಕೃತ್ಯ ನಡೆದ ಶೆಡ್ ಇರುವ ಪ್ರದೇಶ
ರಾಚಪ್ಪಾಜಿ ನಾಯ್ಕ್
| Edited By: |

Updated on: Oct 03, 2024 | 7:12 AM

Share

ಬೆಂಗಳೂರು, ಅಕ್ಟೋಬರ್ 3: ಬೆಂಗಳೂರಿನ ಒಂದು ಶೆಡ್​​ನಲ್ಲಿ ಸಿನಿಮಾ ರೀತಿಯಲ್ಲಿ, ವಿಲನ್​ನಂತೆ ಗುಂಡು ಹಾರಿಸಿದವನು ಈಗ ಸಿಸಿಬಿ ಕಚೇರಿಯಲ್ಲಿ ವಿಚಾರಣೆಗೆ ನಿಲ್ಲುವಂತಾಗಿದೆ! ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ಮೆರೆದ ಕಾರಣ ಸೈಯದ್ ಅಲ್ತಫ್ ಅಹಮದ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಶಸ್ತ್ರಾಸ್ತ್ರಗಳ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ. ಈ ಘಟನೆ ನಡೆದಿರುವುದು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಒಂದು ಶೆಡ್​​ನಲ್ಲಿ.

ಬನ್ನೇರುಘಟ್ಟ ರಸ್ತೆ ಶೆಡ್​​ನಲ್ಲಿ ನಡೆದಿದ್ದೇನು?

ಸೆಪ್ಟೆಂಬರ್ 22 ರ ರಾತ್ರಿ 8.30 ರ ಸಮಯ. ಬನ್ನೇರುಘಟ್ಟ ರಸ್ತೆಯಲ್ಲಿರುವ ಒಂದು ಶೆಡ್​​​ನಲ್ಲಿ ಮೊಯಿನ್ ಖಾನ್ ಎಂಬಾತನ ಹುಟ್ಟುಹಬ್ಬ ಆಚರಿಸಲಾಗಿತ್ತು. ಸಾಕಷ್ಟು ಗೆಳೆಯರು ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದರು. ಕೇಕ್ ಕತ್ತರಿಸಿ ಪಟಾಕಿ ಹೊಡೆದು ಸಂಭ್ರಮಿಸಿದ್ದರು. ಇದೇ ಸಂಭ್ರಮಾಚಣೆ ಜೋಶ್​ನಲ್ಲಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಸೈಯದ್ ಅಲ್ತಫ್ ಮೊಹಮದ್, ತನ್ನ ಬಳಿ ಇದ್ದ ಲೈಸನ್ಸ್ ಪಿಸ್ತೂಲ್ ತೆಗೆದು ಆರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿಬಿಟ್ಟಿದ್ದ.‌

ಏರ್ ಫೈರ್ ದೃಶ್ಯ ವಿಡಿಯೋ ಮಾಡಿಕೊಂಡಿದ್ದು, ಬಿಲ್ಡಪ್ ಸಾಂಗ್ ಮಿಕ್ಸ್ ಮಾಡಿ ಸೋಷಿಯಲ್ ಮೀಡಿಯಾ ಇನ್​ಸ್ಟಾಗ್ರಾಂನಲ್ಲಿ ಹರಿಬಿಟ್ಟಿದ್ದ. ಜುಬೇರ್ ಖಾನ್ ಲಿಮ್ರಾ ಎಂಬಾತನ ಇನ್​ಸ್ಟಾಗ್ರಾಂ ಅಕೌಂಟ್​​ನ ಸ್ಟೋರಿಯಲ್ಲಿ ಇದನ್ನ ಅಪ್ಲೋಡ್ ಮಾಡಲಾಗಿತ್ತು. ಇದನ್ನು ಗಮನಿಸಿದ್ದ ನಗರ ಪೊಲೀಸ್ ಸೋಷಿಯಲ್ ಮೀಡಿಯಾ ವಿಂಗ್ ಅಪಾರಧ ವಿಭಾಗ ಡಿಸಿಪಿ 2 ಆದ ಶ್ರೀನಿವಾಸ್ ಗೌಡ ಗಮನಕ್ಕೆ ತಂದಿದ್ದರು. ತಕ್ಷಣ ಅಲರ್ಟ್ ಆದ ಸಿಸಿಬಿ ತಂಡ, ಆರೋಪಿ ಅಲ್ತಫ್ ನನ್ನ ಬಂಧಿಸಿ ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ.

ಆರೋಪಿ ಅಲ್ತಫ್ ಬಳಿ ಇದ್ದುದು ಪರವಾನಗಿ ಹೊಂದಿರುವ ಪಿಸ್ತೂಲ್ ಎಂಬುದು ವಿಚಾರಣೆ ವೇಳೆ ಗೊತ್ತಾಗಿದೆ. ಸದ್ಯ ಕೃತ್ಯ ನಡೆದ ಸ್ಥಳದ ಆಧಾರದ ಮೇಲೆ ಪ್ರಕರಣವನ್ನು ಬನ್ನೇರುಘಟ್ಟ ಪೊಲೀಸರಿಗೆ ವರ್ಗಾಯಿಸಲು ಸಿಸಿಬಿ ಪೊಲೀಸರು ಮುಂದಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರೀತ್ಸೇ ಪ್ರೀತ್ಸೇ ಎಂದು ಯುವಕನ ಬಲಿ ಪಡೆದ ಕನ್ನಡ ಸೀರಿಯಲ್ ನಟಿ

ಪರವಾನಗಿ ಇದ್ದರೂ ಅಜಾಗರೂಕತೆ ಹಾಗೂ ಸಂಭ್ರಮಾಚರಣೆಯಲ್ಲಿ ಮೈ ಮರೆತು ಗುಂಡು ಹಾರಿಸುವುದು ಕೂಡ ಅಪರಾಧ. ಅದರ ಅರಿವೇ ಇಲ್ಲದ ಆಸಾಮಿ ತಪ್ಪು ಮಾಡಿ ಜೈಲು ಸೇರಿದ್ದಾನೆ. ಇದೇ ರೀತಿ ಹುಚ್ಚಾಟ ಮೆರೆಯುವವರಿಗೆ ಈ ಪ್ರಕರಣ ಒಂದು ಪಾಠವಾಗಿದೆ‌. ತಾವೇನೇ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಅಪ್ಲೋಡ್ ಮಾಡಿ ಬಿಲ್ಡಪ್ ತಗೊಳ್ಳುತ್ತೇವೆ ಎಂಬವರು ಹುಷಾರಾಗಿರಬೇಕಿದೆ. ಯಾಕಂದರೆ ‌ನಗರ ಪೊಲೀಸ್ ಸೋಷಿಯಲ್ ಮೀಡಿಯಾ ವಿಂಗ್ ಇಂತಗ ಅಪರಾಧ ಕೃತ್ಯದ ಮೇಲೆ ಕಣ್ಣಿಟ್ಟಿರುತ್ತೆ ಎಂಬುದಕ್ಕೆ ಈ ಪ್ರಕರಣವೇ ಸಾಕ್ಷಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ