AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್​​

ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಬಾಂಬ್ ಸ್ಫೋಟವಾದ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ​​ಭದ್ರತಾ ಪಡೆ ಹಾಗೂ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ​ವಿಮಾನ ನಿಲ್ದಾಣಕ್ಕೆ ಬಂದು ಹೋಗುವ ವಾಹನಗಳ ಮೇಲೆ ಹದ್ದಿನಕಣ್ಣು ಇಟ್ಟಿದ್ದಾರೆ. ಮತ್ತು ಎರಡೂ ಟರ್ಮಿನಲ್​ ಒಳಗಡೆ ಪ್ರವೇಶಿಸುವವರ ಮೇಲೆ, ಅಂಗಡಿ ಮುಂಗಟ್ಟುಗಳ ಮೇಲೂ ನಿಗಾ ಇರಿಸಿದ್ದಾರೆ.

ಬೆಂಗಳೂರು ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್​​
ವಿಮಾನ ನಿಲ್ದಾಣದಲ್ಲಿ ಭದ್ರತೆ
ನವೀನ್ ಕುಮಾರ್ ಟಿ
| Edited By: |

Updated on:Mar 02, 2024 | 2:44 PM

Share

ಬೆಂಗಳೂರು, ಮಾರ್ಚ್​​ 02: ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ (ಮಾ.02) ಬಾಂಬ್ ಸ್ಫೋಟವಾದ (Bengaluru Rameshwaram Cafe Bomb Blast) ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ​​ಭದ್ರತಾ ಪಡೆ ಹಾಗೂ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ​ವಿಮಾನ ನಿಲ್ದಾಣಕ್ಕೆ ಬಂದು ಹೋಗುವ ವಾಹನಗಳ ಮೇಲೆ ಹದ್ದಿನಕಣ್ಣು ಇಟ್ಟಿದ್ದಾರೆ. ಮತ್ತು ಎರಡೂ ಟರ್ಮಿನಲ್​ ಒಳಗಡೆ ಪ್ರವೇಶಿಸುವವರ ಮೇಲೆ, ಅಂಗಡಿ ಮುಂಗಟ್ಟುಗಳ ಮೇಲೂ ನಿಗಾ ಇರಿಸಿದ್ದಾರೆ. ವಿಐಪಿ ಲೈನ್​​ನಲ್ಲಿ ಪಾರ್ಕಿಂಗ್​ ಅವಧಿಯನ್ನು ಅರ್ಧ ಗಂಟೆಯಿಂದ 5 ರಿಂದ 10 ನಿಮಿಷಕ್ಕೆ ಇಳಿಸಿದ್ದಾರೆ. ಭದ್ರತಾ ಸಿಬ್ಬಂದಿಯ ಸಂಖ್ಯೆಯನ್ನು ಹೆಚ್ಚಳ ಮಾಡಿದ್ದಾರೆ. ರಾತ್ರ-ಹಗಲು ಮೂರು ಪಾಳಯದಲ್ಲಿ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಕರ್ನಾಟಕದ ಎಲ್ಲ ಬಸ್ಸು, ರೈಲು ನಿಲ್ದಾಣಗಳಲ್ಲಿ ಕಟ್ಟೆಚ್ಚರ

ಬೆಂಗಳೂರು ನಗರದ ಬಸ್ಸು ಮತ್ತು ರೈಲು ನಿಲ್ದಾಣಗಳಲ್ಲಿ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ. ಅಷ್ಟೇ ಅಲ್ಲದೆ, ರಾಜ್ಯದ ಎಲ್ಲಾ ಬಸ್ಸು ಮತ್ತು ರೈಲು ನಿಲ್ದಾಣಗಳಲ್ಲೂ ನಿಗಾ ಇಡಲು ಸೂಚನೆ ನೀಡಲಾಗಿದೆ. ರೈಲು ನಿಲ್ದಾಣಗಳಲ್ಲಿ ಭದ್ರತೆಗೆ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣದ ತನಿಖೆ ಸಿಸಿಬಿಗೆ ವರ್ಗಾವಣೆ

ರೈಲು ನಿಲ್ದಾಣಗಳಲ್ಲಿ ಅನುಮಾನಾಸ್ಪದ ವಸ್ತುಗಳು ಕಂಡುಬಂದರೆ ಅಗತ್ಯ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಈ ಮಧ್ಯೆ, ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ರೈಲ್ವೆ ನಿಲ್ದಾಣಗಳಲ್ಲಿ ಎಂದಿನಂತೆ ಪ್ರಯಾಣಿಕರ ಸಂಚಾರ ಮುಂದುವರಿದಿದೆ.

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೂ ಭದ್ರತೆ ಹೆಚ್ಚಿಸಲಾಗಿದೆ. ಟರ್ಮಿನಲ್ ಆವರಣಗಳಲ್ಲಿ ಕ್ಯಾಬ್ ಮತ್ತು ಪ್ರಯಾಣಿಕರನ್ನು ಕರೆದೊಯ್ಯುವ ಇತರ ವಾಹನಗಳ ಕಾಯುವಿಕೆ ಅವಧಿಯನ್ನು ಕಡಿಮೆ ಮಾಡಲಾಗಿದೆ. ವಿಮಾನ ನಿಲ್ದಾಣ ಮಾತ್ರವಲ್ಲದೆ, ಪ್ರಮುಖ ಪ್ರದೇಶಗಳಲ್ಲಿಯೂ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:30 am, Sat, 2 March 24