ಬೆಂಗಳೂರು-ದೆಹಲಿ ಇಂಡಿಗೋ ಫ್ಲೈಟ್‌ನಲ್ಲಿ ಹುಸಿ ಬಾಂಬ್ ಬೆದರಿಕೆ!

ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನದಲ್ಲಿ ಹುಸಿ ಬಾಂಬ್ ಬೆದರಿಕೆ ಆತಂಕ ಸೃಷ್ಟಿಸಿತು. ವಿಮಾನದ ಶೌಚಾಲಯದಲ್ಲಿ ಪತ್ತೆಯಾದ ಟಿಷ್ಯೂ ಪೇಪರ್‌ನಲ್ಲಿ ಬಾಂಬ್ ಸಂದೇಶವಿತ್ತು. 183 ಪ್ರಯಾಣಿಕರನ್ನು ಸ್ಥಳಾಂತರಿಸಿದ ನಂತರ, ಇದು ಹುಸಿ ಬೆದರಿಕೆ ಎಂದು ದೃಢಪಟ್ಟಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು-ದೆಹಲಿ ಇಂಡಿಗೋ ಫ್ಲೈಟ್‌ನಲ್ಲಿ ಹುಸಿ ಬಾಂಬ್ ಬೆದರಿಕೆ!
ಬೆಂಗಳೂರು-ದೆಹಲಿ ಇಂಡಿಗೋ ಫ್ಲೈಟ್‌ನಲ್ಲಿ ಹುಸಿ ಬಾಂಬ್ ಬೆದರಿಕೆ!
Edited By:

Updated on: Apr 05, 2026 | 2:14 PM

ಬೆಂಗಳೂರು, ಏಪ್ರಿಲ್ 05: ಬೆಂಗಳೂರಿನ ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಇಂಡಿಗೋ ವಿಮಾನದಲ್ಲಿ ಹುಸಿ ಬಾಂಬ್ ಬೆದರಿಕೆ ಪ್ರಕರಣ ಆತಂಕ ಮೂಡಿಸಿತ್ತು. ದೆಹಲಿಗೆ ತೆರಳುತ್ತಿದ್ದ ವಿಮಾನದ ಶೌಚಾಲಯದಲ್ಲಿ ಬಾಂಬ್ ಇದೆ ಎಂದು ಬರೆದ ಟಿಷ್ಯೂ ಪೇಪರ್ ಪತ್ತೆಯಾಗುತ್ತಿದ್ದಂತೆ ತಕ್ಷಣ ಎಚ್ಚರಿಕೆ ಕ್ರಮ ಕೈಗೊಳ್ಳಲಾಯಿತು.ವಿಮಾನದಲ್ಲಿದ್ದ 183 ಪ್ರಯಾಣಿಕರನ್ನು ಕೆಳಗಡೆ ಇಳಿಸಿ ತಪಾಸಣೆ ನಡೆಸಿದ ನಂತರ ಹುಸಿ ಬೆದರಿಕೆಯೆಂದು ಗೊತ್ತಾಗಿ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ.

ಹುಸಿ ಬೆದರಿಕೆ ಹಾಕಿದವರಿಗಾಗಿ ಶೋಧ

ಪೈಲಟ್ ಏರ್ ಟ್ರಾಫಿಕ್ ಕಂಟ್ರೋಲ್‌ಗೆ ಮಾಹಿತಿ ನೀಡಿದ ನಂತರ, ವಿಮಾನದಲ್ಲಿದ್ದ 183 ಪ್ರಯಾಣಿಕರನ್ನು ತುರ್ತಾಗಿ ಕೆಳಗಿಳಿಸಿ ಸಂಪೂರ್ಣ ತಪಾಸಣೆ ನಡೆಸಲಾಯಿತು. ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾದರೂ, ಯಾವುದೇ ಸ್ಫೋಟಕ ಅಥವಾ ಅನುಮಾನಾಸ್ಪದ ವಸ್ತು ಪತ್ತೆಯಾಗದ ಹಿನ್ನೆಲೆಯಲ್ಲಿ ಇದು ಹುಸಿ ಬೆದರಿಕೆ ಎಂದು ಅಧಿಕಾರಿಗಳು ಘೋಷಿಸಿದ್ದಾರೆ. ವಿಮಾನವು ನಂತರ ದೆಹಲಿಗೆ ಸುರಕ್ಷಿತವಾಗಿ ಪ್ರಯಾಣ ಮುಂದುವರಿಸಿದೆ.

ವಿಮಾನದ ಶೌಚಾಯಲದಲ್ಲಿ ಬಾಂಬ್ ಇದೆ ಎಂದು ಟಿಷ್ಯೂ ಪೇಪರ್‌ನಲ್ಲಿ ಬೆದರಿಕೆ ಸಂದೇಶ ಬರೆದಿರುವುದು ವಿಮಾನದಲ್ಲಿದ್ದ ಪ್ರಯಾಣಿಕರಲ್ಲೆ ಒಬ್ಬರಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಕಿಡಿಗೇಡಿಗಳನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
Loading...
Unable to load recommendations.
Follow Us