AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಭಾರಿ ಕಾರ್ಯಾಚರಣೆ: 1.02 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ

ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ₹1.07 ಕೋಟಿ ಮೌಲ್ಯದ 3.05 ಕೆಜಿ ಹೈಡ್ರೋಪೋನಿಕ್ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಥೈಲ್ಯಾಂಡ್‌ನಿಂದ ಬಂದ ಪ್ರಯಾಣಿಕನ ಲಗೇಜ್‌ನಲ್ಲಿ ಇದು ಪತ್ತೆಯಾಗಿದೆ. ಇತ್ತ ಕೋಲಾರದಲ್ಲಿ, ಬ್ಯಾಂಕ್‌ನಿಂದ ಒಡವೆ ಬಿಡಿಸಲು ತೆರಳುತ್ತಿದ್ದ ನಾರಾಯಣಸ್ವಾಮಿ ಅವರಿಗೆ ಖಾರದ ಪುಡಿ ಎರಚಿ ₹2 ಲಕ್ಷ ನಗದು ಮತ್ತು ಬೈಕ್ ದರೋಡೆ ಮಾಡಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಭಾರಿ ಕಾರ್ಯಾಚರಣೆ: 1.02 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ
ಬೆಂಗಳೂರು ಗಾಂಜಾ ಜಪ್ತಿ
ನವೀನ್ ಕುಮಾರ್ ಟಿ.
| Edited By: |

Updated on: Sep 01, 2026 | 5:53 PM

Share

ಬೆಂಗಳೂರು, ಸೆ.1: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIAB) ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು (Hydroponic Ganja) ಜಪ್ತಿ ಮಾಡಲಾಗಿದೆ. ಥೈಲ್ಯಾಂಡ್‌ನ ಪುಕೆಟ್‌ನಿಂದ (Phuket) ಆಗಮಿಸಿದ್ದ ಪ್ರಯಾಣಿಕನೊಬ್ಬನಿಂದ ಬರೋಬ್ಬರಿ 1.07 ಕೋಟಿ ರೂ. ಮೌಲ್ಯದ 3.05 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಪುಕೆಟ್‌ನಿಂದ ವಿಮಾನದಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನ ಲಗೇಜ್ ಬ್ಯಾಗ್ ಅನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಈ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ.

ಕಸ್ಟಮ್ಸ್ ಅಧಿಕಾರಿಗಳು ತಕ್ಷಣವೇ ಗಾಂಜಾ ವಶಪಡಿಸಿಕೊಂಡು, ಅದನ್ನು ಸಾಗಿಸುತ್ತಿದ್ದ ಪ್ರಯಾಣಿಕನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನಾರ್ಕೋಟಿಕ್ ಡ್ರಗ್ಸ್ ಅಂಡ್ ಸೈಕೋಟ್ರೋಪಿಕ್ ಸಬ್‌ಸ್ಟೆನ್ಸಸ್ (NDPS) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

ಕಣ್ಣಿಗೆ ಖಾರದ ಪುಡಿ ಎರಚಿ ಭೀಕರ ದರೋಡೆ;

ಬ್ಯಾಂಕ್‌ನಲ್ಲಿ ಅಡವಿಟ್ಟಿದ್ದ ಒಡವೆಗಳನ್ನು ಬಿಡಿಸಿಕೊಳ್ಳಲು ತೆರಳುತ್ತಿದ್ದ ಬೈಕ್ ಸವಾರನ ಕಣ್ಣಿಗೆ ಖಾರದ ಪುಡಿ ಎರಚಿ ₹೨ ಲಕ್ಷ ನಗದು ಹಾಗೂ ಬೈಕ್ ಅನ್ನು ದರೋಡೆ ಮಾಡಿಕೊಂಡು ಪರಾರಿಯಾಗಿರುವ ಘಟನೆ ಕೋಲಾರ ತಾಲೂಕಿನ ಅರಹಳ್ಳಿ ಗೇಟ್ ಬಳಿ ಸಂಭವಿಸಿದೆ. ಕೋಲಾರ ತಾಲೂಕಿನ ಜಂಗಮಗುರ್ಜೆನಹಳ್ಳಿ ನಿವಾಸಿ ನಾರಾಯಣಸ್ವಾಮಿ ದರೋಡೆಗೊಳಗಾದ ವ್ಯಕ್ತಿ. ನಾರಾಯಣಸ್ವಾಮಿ ಅವರು ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್‌ನಲ್ಲಿ ಅಡವಿಟ್ಟಿದ್ದ ತಮ್ಮ ಒಡವೆಗಳನ್ನು ಬಿಡಿಸಿಕೊಳ್ಳಲು ₹೨ ಲಕ್ಷ ಹಣದೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಅರಹಳ್ಳಿ ಗೇಟ್ ಬಳಿ ಅಡ್ಡಗಟ್ಟಿದ ದುಷ್ಕರ್ಮಿಗಳು ಅವರ ಕಣ್ಣಿಗೆ ಖಾರದ ಪುಡಿ ಎರಚಿದ್ದಾರೆ.

ಇದನ್ನೂ ಓದಿ; ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ

ಖಾರದ ಪುಡಿ ಎರಚಿ ನಾರಾಯಣಸ್ವಾಮಿ ಅವರ ಬಳಿಯಿದ್ದ 2 ಲಕ್ಷ ರೂ. ನಗದು ಹಾಗೂ ಅವರು ಪ್ರಯಾಣಿಸುತ್ತಿದ್ದ ಬೈಕ್‌ನೊಂದಿಗೆ ಕಳ್ಳರು ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾರೆ. ನಾರಾಯಣಸ್ವಾಮಿ ಅವರು ಹಣ ತೆಗೆದುಕೊಂಡು ಒಡವೆ ಬಿಡಿಸಲು ಹೋಗುತ್ತಿರುವ ವಿಚಾರ ತಿಳಿದಿದ್ದ ಪರಿಚಯಸ್ಥರೇ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ದರೋಡೆಕೋರರ ಪತ್ತೆಗೆ ಜಾಲ ಬೀಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us