AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಏರ್​ಪೋರ್ಟ್​ನಲ್ಲಿ ಸಿಕ್ತು 3 ಕೋಟಿ ರೂ. ಮೌಲ್ಯದ ಗಾಂಜಾ! ಮೂವರು ಆರೋಪಿಗಳು ವಶಕ್ಕೆ

ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬೃಹತ್ ಕಾರ್ಯಾಚರಣೆ ನಡೆಸಿ, ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 2.97 ಕೋಟಿ ರೂ. ಮೌಲ್ಯದ 8.5 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಥಾಯ್ಲೆಂಡ್ ಮತ್ತು ಮಲೇಶಿಯಾದಿಂದ ಬಂದ ಮೂವರು ಪ್ರಯಾಣಿಕರನ್ನು NDPS ಕಾಯ್ದೆಯಡಿ ಬಂಧಿಸಲಾಗಿದ್ದು, ಮಾದಕವಸ್ತು ಕಳ್ಳಸಾಗಣೆ ಜಾಲದ ಕುರಿತು ತೀವ್ರ ತನಿಖೆ ಮುಂದುವರಿದಿದೆ.

ಬೆಂಗಳೂರು ಏರ್​ಪೋರ್ಟ್​ನಲ್ಲಿ ಸಿಕ್ತು 3 ಕೋಟಿ ರೂ. ಮೌಲ್ಯದ ಗಾಂಜಾ! ಮೂವರು ಆರೋಪಿಗಳು ವಶಕ್ಕೆ
ಬೆಂಗಳೂರು ಏರ್​ಪೋರ್ಟ್​ನಲ್ಲಿ ಸಿಕ್ತು 3 ಕೋಟಿ ರೂ. ಮೌಲ್ಯದ ಗಾಂಜಾ!
ನವೀನ್ ಕುಮಾರ್ ಟಿ.
| Edited By: |

Updated on:Feb 07, 2026 | 2:39 PM

Share

ಬೆಂಗಳೂರು, ಫೆಬ್ರವರಿ 07: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (International Airport) ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 2.97 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಎಂಟೂ ವರೆ ಕೆಜಿ ಹೈಡ್ರೋ ಗಾಂಜಾ ಪತ್ತೆ

ಥಾಯ್ಲೆಂಡ್‌ನ ಪುಕೆಟ್ ಹಾಗೂ ಮಲೇಶಿಯಾದಿಂದ ಕೆಐಎಬಿಗೆ ಆಗಮಿಸಿದ್ದ ಮೂವರು ಪ್ರಯಾಣಿಕರ ಲಗೇಜ್ ಬ್ಯಾಗ್‌ಗಳನ್ನು ಇಮಿಗ್ರೇಷನ್ ವಿಭಾಗದಲ್ಲಿ ಪರಿಶೀಲಿಸಿದ ವೇಳೆ, ಪ್ಯಾಕೆಟ್‌ಗಳಾಗಿ ಅಡಗಿಸಿಟ್ಟಿದ್ದ ಒಟ್ಟು 8.5 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ. ವಶಪಡಿಸಿಕೊಳ್ಳಲಾದ ಮಾದಕ ವಸ್ತುವಿನ ಮೌಲ್ಯವನ್ನು ಸುಮಾರು 2.97 ಕೋಟಿ ರೂ. ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ ಚಿನ್ನಾಭರಣ ಕದ್ದಿದ್ದ ನೇಪಾಳಿ ಜೋಡಿ ಮಹಾರಾಷ್ಟ್ರಕ್ಕೆ ಎಸ್ಕೇಪ್!

ಮೂವರನ್ನು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು!

ಗಾಂಜಾ ಸಮೇತ ಆರೋಪಿಗಳನ್ನು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು, ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಈ ಪ್ರಕರಣದ ಹಿಂದೆ ಇರುವ ಜಾಲ ಹಾಗೂ ವಿದೇಶಿ ಸಂಪರ್ಕಗಳ ಕುರಿತು ಅಧಿಕಾರಿಗಳು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:38 pm, Sat, 7 February 26

Follow Us
ನವೀನ್ ಕುಮಾರ್ ಟಿ.
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ