Bengaluru Airport: ಬೆಂಗಳೂರು ವಿಮಾನ ನಿಲ್ದಾಣ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ; ಇಲ್ಲಿದೆ ವಿವರ

|

Updated on: Apr 18, 2023 | 4:02 PM

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ 2022-23ನೇ ಸಾಲಿನಲ್ಲಿ 31.91 ದಶಲಕ್ಷ ಮಂದಿ ಪ್ರಯಾಣಿಸಿದ್ದಾರೆ. ಇದರೊಂದಿಗೆ 2022-23ನೇ ಸಾಲಿನಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ 96ರಷ್ಟು ಹೆಚ್ಚಳವಾಗಿದೆ ಎಂದು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆಡಳಿತ ಮಂಗಳವಾರ ತಿಳಿಸಿದೆ.

Bengaluru Airport: ಬೆಂಗಳೂರು ವಿಮಾನ ನಿಲ್ದಾಣ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ; ಇಲ್ಲಿದೆ ವಿವರ
ಬೆಂಗಳೂರು ವಿಮಾನ ನಿಲ್ದಾಣ
Image Credit source: freepressjournal.in
Follow us on

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಮೂಲಕ 2022-23ನೇ ಸಾಲಿನಲ್ಲಿ 31.91 ದಶಲಕ್ಷ ಮಂದಿ ಪ್ರಯಾಣಿಸಿದ್ದಾರೆ. ಇದರೊಂದಿಗೆ 2022-23ನೇ ಸಾಲಿನಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ 96ರಷ್ಟು ಹೆಚ್ಚಳವಾಗಿದೆ ಎಂದು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆಡಳಿತ (BIAL) ಮಂಗಳವಾರ ತಿಳಿಸಿದೆ. ಬಿಐಎಎಲ್​ ನೀಡಿರುವ ಮಾಹಿತಿ ಪ್ರಕಾರ, ಒಟ್ಟು ಪ್ರಯಾಣಿಕರ ಪೈಕಿ 28.12 ದಶಲಕ್ಷ ದೇಶೀಯ ಮತ್ತು 3.78 ದಶಲಕ್ಷ ಮಂದಿ ವಿದೇಶಿ ಪ್ರಯಾಣಿಕರು ಎಂಬುದು ತಿಳಿದುಬಂದಿದೆ.

22ನೇ ಹಣಕಾಸು ವರ್ಷದಲ್ಲಿ ದೇಶೀಯ ವಿಮಾನಯಾನ ಕ್ಷೇತ್ರ ಶೇ 85ರಷ್ಟು ಬೆಳವಣಿಗೆ ಸಾಧಿಸಿದ್ದರೆ ಅಂತರರಾಷ್ಟ್ರೀಯ ವಿಮಾನಯಾನ ಕ್ಷೇತ್ರ ಶೇ 245ರಷ್ಟು ಬೆಳವಣಿಗೆ ಸಾಧಿಸಿದೆ. ಕಾರ್ಗೊ ಸೇವೆ ವಿಚಾರದಲ್ಲಿ ಬೆಂಗಳೂರು ವಿಮಾನ ನಿಲ್ದಾಣ ಈಗಲೂ ನಂ. 1 ಆಗಿಯೇ ಉಳಿದಿದೆ ಎಂದು ಬಿಐಎಎಲ್​​ ತಿಳಿಸಿದೆ.

ಕೋವಿಡೋತ್ತರ ಕಾಲಘಟ್ಟದಲ್ಲಿ ವಿಮಾನ ಸಂಚಾರ ಪುನರಾರಂಭ, ಪ್ರಮುಖ ಮಾರ್ಗಗಳ ಮಧ್ಯೆ ವಿಮಾನ ಸೇವೆ ಪೂರ್ಣ ಪ್ರಮಾಣದಲ್ಲಿ ಮರು ಕಾರ್ಯಾಚರಣೆ ಆರಂಭ ಮಾಡಿರುವುದು, ಪ್ರಮುಖ ವ್ಯಾಪಾರ ಕೇಂದ್ರಗಳು ಮತ್ತು ಪ್ರಯಾಣದ ಸ್ಥಳಗಳನ್ನು ಸಂಪರ್ಕಿಸುವ ಹೊಸ ಮಾರ್ಗಗಳ ಪ್ರಾರಂಭದಿಂದಾಗಿ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಎಂದು ವಿಮಾನ ನಿಲ್ದಾಣ ನಿರ್ವಾಹಕರು ತಿಳಿಸಿದ್ದಾರೆ.

ಪ್ರಸ್ತುತ ಬೆಂಗಳೂರು ವಿಮಾನ ನಿಲ್ದಾಣವು 100 ನಿಲ್ದಾಣಗಳನ್ನು ಸಂಪರ್ಕಿಸುತ್ತಿದ್ದು, ಈ ಪೈಕಿ 75 ಭಾರತದ ಹಾಗೂ 25 ಇತರ ದೇಶಗಳ ನಿಲ್ದಾಣಗಳಾಗಿವೆ ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: Bengaluru Airport: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ರಜಾ ದಿನ ಪ್ರಯಾಣದ ಅವ್ಯವಸ್ಥೆ, 2 ಗಂಟೆ ಮೊದಲು ಬಂದರೂ ವಿಮಾನ ಮಿಸ್

ಪ್ರಯಾಣಿಕರ ದೃಷ್ಟಿಕೋನದಿಂದ ಆಕಾಸ ಏರ್ ಉತ್ತಮ ಬೆಳವಣಿಗೆ ಸಾಧಿಸಿದೆ ಎಂದು ಪ್ರಕಟಣೆ ತಿಳಿಸಿದೆ. ಈ ವರ್ಷ ಫೆಬ್ರವರಿ 26ರಂದು ದಿನವೊಂದರ ಅತ್ಯಧಿಕ ಪ್ರಯಾಣಿಕರು ವಿಮಾನ ನಿಲ್ದಾಣದ ಮೂಲಕ ಸಂಚರಿಸಿದ್ದಾರೆ. ಆ ದಿನ 1.14 ಲಕ್ಷ ಮಂದಿ ಪ್ರಯಾಣಿಸಿದ್ದಾರೆ. ಇದು 2008ರ ನಂತರ ದಿನವೊಂದರಲ್ಲಿ ಪ್ರಯಾಣಿಸಿದವರ ಅತಿಹೆಚ್ಚಿನ ಸಂಖ್ಯೆಯಾಗಿದೆ.

ಅಗ್ರ ಸ್ಥಾನದಲ್ಲಿ ಇಂಡಿಗೋ

ಶೇ 57 ರಷ್ಟು ಮಾರುಕಟ್ಟೆ ಪಾಲನ್ನು ಹೊಂದಿರುವ ಇಂಡಿಗೋ ಹೆಚ್ಚು ಆದ್ಯತೆಯ ದೇಶೀಯ ವಿಮಾನಯಾನ ಸಂಸ್ಥೆಯಾಗಿ ಮುಂದುವರೆದಿದೆ ಎಂದು ಪ್ರಕಟಣೆ ಹೇಳಿದೆ. ಶೇ 27 ರಷ್ಟು ಮಾರುಕಟ್ಟೆ ಪಾಲನ್ನು ಹೊಂದಿರುವ ಟಾಟಾ ಗ್ರೂಪ್ ನಂತರದ ಸ್ಥಾನದಲ್ಲಿದೆ. ಆಕಾಸ ಏರ್ ಕಾರ್ಯಾಚರಣೆ ಪ್ರಾರಂಭಿಸಿದ ಕೇವಲ ಎಂಟು ತಿಂಗಳಲ್ಲಿ ವಿಮಾನ ನಿಲ್ದಾಣದ ದೇಶೀಯ ಕಾರ್ಯಾಚರಣೆಗಳಲ್ಲಿ ಶೇ 10 ರ ಪಾಲನ್ನು ಹೊಂದುವಲ್ಲಿ ಯಶಸ್ವಿಯಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬೆಂಗಳೂರಿಗೆ ಸಂಬಂಧಿಸಿ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ