ಬೆಂಗಳೂರು: 3 ಪ್ರತ್ಯೇಕ ಪ್ರಕರಣಗಳಲ್ಲಿ 1 ಕೋಟಿಗೂ ಅಧಿಕ ಮೌಲ್ಯದ ಚಿನ್ನ ವಶ

ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಒಂದು ಕೋಟಿಗೂ ಅಧಿಕ ಮೌಲ್ಯದ ಚಿನ್ನವನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್​​ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬ್ಯಾಂಕಾಕ್, ಕೊಲಂಬೋ ಮತ್ತು ಮಸ್ಕಟ್​​ನಿಂದ ಅಕ್ರಮವಾಗಿ ಚಿನ್ನ ಸಾಗಿಸಲಾಗುತ್ತಿತ್ತು.

ಬೆಂಗಳೂರು: 3 ಪ್ರತ್ಯೇಕ ಪ್ರಕರಣಗಳಲ್ಲಿ 1 ಕೋಟಿಗೂ ಅಧಿಕ ಮೌಲ್ಯದ ಚಿನ್ನ ವಶ
ಜಪ್ತಿ ಮಾಡಲಾದ ಚಿನ್ನ
Edited By: ವಿವೇಕ ಬಿರಾದಾರ

Updated on: Nov 18, 2023 | 10:08 AM

ದೇವನಹಳ್ಳಿ .18: ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಒಂದು ಕೋಟಿಗೂ ಅಧಿಕ ಮೌಲ್ಯದ ಚಿನ್ನವನ್ನು (Gold) ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (Kempegowda International Airport) ಕಸ್ಟಮ್ಸ್​​ ಅಧಿಕಾರಿಗಳು (Customs officers) ವಶಪಡಿಸಿಕೊಂಡಿದ್ದಾರೆ. ಬ್ಯಾಂಕಾಕ್, ಕೊಲಂಬೋ ಮತ್ತು ಮಸ್ಕಟ್​​ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಎರಡು ಕೆಜಿಗೂ ಅಧಿಕ‌‌ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಬ್ಯಾಂಕಾಕ್​ನಿಂದ ಮೂವರು ಪುರುಷರು, ಕೊಲಂಬೋದ ಇಬ್ಬರು ಮಹಿಳೆಯರು ಮತ್ತು ಮಸ್ಕಟ್​ನ ಒರ್ವ ಪ್ರಯಾಣಿಕ ಶರ್ಟ್ ಮತ್ತು ಒಳ ಉಡುಪಿನಲ್ಲಿ ಚಿನ್ನದ ಕಟ್ ಫಿಸ್​​ಗಳನ್ನು ಅಡಗಿಸಿಟ್ಟುಕೊಂಡು ತಂದಿದ್ದರು.

‌ಕಸ್ಟಮ್ಸ್​​ ಅಧಿಕಾರಿಗಳ ತಪಾಸಣೆ ವೇಳೆ ಮೂರು ಪ್ರಕರಣಗಳಿಂದ 1,26,58, 618 ರೂ. ಮೌಲ್ಯದ 2 ಕೆಜಿ 79 ಗ್ರಾಂ ತೂಕದ ಚಿನ್ನ ಪತ್ತೆಯಾಗಿದೆ. ಮೂರು ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಅಧಿಕಾರಿಗಳು ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಗಣೇಶ ಹಬ್ಬಕ್ಕೆಂದು ಊರಿಗೆ ಹೋದಾಗ ಕಳ್ಳರ ಕೈ ಚಳಕ; ನಗದು ಸೇರಿ 2 ಲಕ್ಷ ಬೆಲೆ ಬಾಳುವ ಚಿನ್ನಾಭರಣ ಕಳವು 

ಟಿಕ್ಕಿಯ ಗಮನ ಬೇರೆಡೆ ಸೆಳೆದು 20 ತೊಲೆ ಚಿನ್ನಾಭರಣ ಕಳವು

ರಾಯಚೂರು: ಟಿಕ್ಕಿಯ ಗಮನ ಬೇರೆಡೆ ಸೆಳೆದು 20 ತೊಲೆ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಮಾನ್ವಿ ಪಟ್ಟಣದಲ್ಲಿರುವ ಸೂಪರ್ ಮಾರ್ಕೆಟ್ ಎದುರು ನಡೆದಿದೆ. ಮೂವರು ಐನಾತಿ ಕಳ್ಳರು ಹಾಡುಹಗಲೇ ಕೃತ್ಯ ಎಸಗಿದ್ದಾರೆ.  ಸಾಫ್ಟವೇರ್ ಇಂಜಿನಿಯರ್ ನವೀನ್ ಕುಮಾರ್ ಎಂಬುವರು ಪತ್ನಿಯ ಸೀಮಂತ ಕಾರ್ಯಕ್ರಮಕ್ಕಾಗಿ ಖಾಸಗಿ ಬ್ಯಾಂಕ್ ಲಾಕರ್ ನಲ್ಲಿದ್ದ ಚಿನ್ನಾಭರಣವನ್ನು ತೆಗೆದುಕೊಂಡು ಮನೆಗೆ ಹೊರಟಿದ್ದರು

ಇದನ್ನು ಗಮನಿಸಿದ ದುಷ್ಕರ್ಮಿಗಳು ನವೀನ್​ ಕುಮಾರ್​ ಅವರ ಕಾರಿನ ಬಾನೆಟ್ ಮೇಲೆ ಆಯಿಲ್ ಹಾಕಿದ್ದಾರೆ.  ನವೀನ್​ ಅವರ ಗಮನ ಅತ್ತ ಕಡೆ ಹರಿಯುತ್ತಿದ್ದಂತೆ ಓರ್ವ ಕಾರಿನಲ್ಲಿದ್ದ ಚಿನ್ನಾಭರಣ ಕದ್ದಿದ್ದಾನೆ. ಬಳಿಕ ಮೂವರು ಬೈಕ್​ನಲ್ಲಿ ಪರಾರಿಯಾಗಿದ್ದಾರೆ. ಕಳ್ಳರ ಕೈಚಳಕ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:06 am, Sat, 18 November 23

ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
Loading...
Unable to load recommendations.
Follow Us