AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕನ್ನಡದಲ್ಲೇ ಪ್ರಕಟಣೆ: ನವೆಂಬರ್​ 1ರಿಂದ ಜಾರಿಗೆ ಸಿದ್ಧತೆ

ಬೆಂಗಳೂರಿನಲ್ಲಿ ಲ್ಯಾಂಡಿಂಗ್ ಅಥವಾ ಟೇಕ್ ಆಫ್ ಆಗುವ ಪ್ರತಿಯೊಂದು ವಿಮಾನದಲ್ಲಿ ಕನ್ನಡದಲ್ಲೇ ಮೊದಲ ಅನೌನ್ಸ್ಮೆಂಟ್ ಮಾಡಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ಒತ್ತಾಯಿಸಿದ್ದಾರೆ. ನವೆಂಬರ್​ 01ರ ಕನ್ನಡ ರಾಜ್ಯೋತ್ಸವ ದಿನದಿಂದ ವಿಮಾನಗಳಲ್ಲಿ ಕನ್ನಡ ಪ್ರಕಟಣೆಗಳು ಶುರುವಾಗುವ ಸಾಧ್ಯತೆ ಹೆಚ್ಚಿದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕನ್ನಡದಲ್ಲೇ ಪ್ರಕಟಣೆ: ನವೆಂಬರ್​ 1ರಿಂದ ಜಾರಿಗೆ ಸಿದ್ಧತೆ
ವಿಮಾನ ನಿಲ್ದಾಣ
ಆಯೇಷಾ ಬಾನು
|

Updated on: Sep 17, 2024 | 9:03 AM

Share

ಬೆಂಗಳೂರು, ಸೆ.17: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (KIA) ನಿರ್ವಹಿಸುತ್ತಿರುವ ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್ (BIAL)ಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ (Mahesh Joshi) ಅವರು ಸೋಮವಾರ ಮನವಿಯೊಂದನ್ನು ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಲ್ಯಾಂಡಿಂಗ್ ಅಥವಾ ಟೇಕ್ ಆಫ್ ಆಗುವ ಪ್ರತಿಯೊಂದು ವಿಮಾನದಲ್ಲಿ ಕನ್ನಡದಲ್ಲೇ ಮೊದಲ ಅನೌನ್ಸ್ಮೆಂಟ್ ಮಾಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಸಂಬಂಧ ಮಹೇಶ್ ಜೋಶಿ ಅವರು ನಾಗರಿಕ ವಿಮಾನಯಾನ ಸಚಿವಾಲಯಕ್ಕೆ (MoCA) ಪತ್ರ ಬರೆದು ಮನವಿ ಮಾಡಲು ಮುಂದಾಗಿದ್ದಾರೆ.

ಜೋಶಿ ಅವರು ಬಿಐಎಎಲ್‌ನ ಎಂಡಿ ಮತ್ತು ಸಿಇಒ ಹರಿ ಮರಾರ್ ಅವರನ್ನು ಭೇಟಿ ಮಾಡಿ ವಿಮಾನ ನಿಲ್ದಾಣದಲ್ಲಿ ಕನ್ನಡವನ್ನು ಉತ್ತೇಜಿಸುವ ಹಾಗೂ ವಿಮಾನ ಲ್ಯಾಂಡಿಂಗ್ ಅಥವಾ ಟೇಕ್ ಆಫ್ ಸಮಯದಲ್ಲಿ ಕನ್ನಡವನ್ನು ಬಳಸುವ ಬಗ್ಗೆ ಚರ್ಚಿಸಿದರು. ಚರ್ಚೆ ಬಳಿಕ ಮಾತನಾಡಿದ ಜೋಶಿ, ಕನ್ನಡ ರಾಜ್ಯೋತ್ಸವ ದಿನದಿಂದ (ನವೆಂಬರ್ 1) ವಿಮಾನಗಳಲ್ಲಿ ಕನ್ನಡದಲ್ಲೇ ಅನೌನ್ಸ್ಮೆಂಟ್ ಮಾಡುವುದನ್ನು ಪ್ರಾರಂಭಿಸಲು ನಾನು ಅವರನ್ನು ಕೇಳಿದ್ದೇನೆ. ಏಕೆಂದರೆ ಈ ವ್ಯವಸ್ಥೆಯನ್ನು ವಿಮಾನಗಳಲ್ಲಿ ಅಳವಡಿಸಿಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ವಿಮಾನಗಳಲ್ಲಿ ಮೊದಲ ಪ್ರಕಟಣೆಯು ಕನ್ನಡದಲ್ಲಿರಬೇಕು, ನಂತರ ಇತರ ಭಾಷೆಗಳನ್ನು ಅನುಸರಿಸಬೇಕು. ಬ್ರಿಟಿಷ್ ಏರ್ವೇಸ್ ಮತ್ತು ಸಿಂಗಾಪುರ್ ಏರ್ಲೈನ್ಸ್ ಈಗಾಗಲೇ ಇದನ್ನು ಕಾರ್ಯಗತಗೊಳಿಸಲು ಪ್ರಾರಂಭಿಸಿವೆ ಎಂದು ತಿಳಿಸಿದರು.

MoCA ಯಿಂದ ಒಪ್ಪಿಗೆ ಬೇಕೆಂದು ವಿಮಾನ ನಿಲ್ದಾಣದ ಅಧಿಕಾರಿಗಳು ಪ್ರಸ್ತಾಪಿಸಿದ್ದಾರೆ. ಹೀಗಾಗಿ ನಾನು ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ತಕ್ಷಣ ಪತ್ರ ಬರೆಯುತ್ತೇನೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಭಾರತೀಯ ರೈಲ್ವೆಯೊಂದಿಗೆ ವಿಲೀನವಾಗಲಿದೆ ಕೊಂಕಣ ರೈಲ್ವೆ: ಸಚಿವ ಸೋಮಣ್ಣ ಕೊಟ್ಟ ಕಾರಣ ಇಲ್ಲಿದೆ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್ 20 ರಿಂದ 22 ರವರೆಗೆ ನಡೆಸಲಾಗುತ್ತಿದೆ. ಈ ಹಿನ್ನೆಲೆ ಜೋಶಿ ಅವರು ಕನ್ನಡದಲ್ಲಿ ದೊಡ್ಡ ಸ್ವಾಗತ ಫಲಕಗಳನ್ನು ಅಳವಡಿಸಲು ಮತ್ತು ಕರ್ನಾಟಕದ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ವಾತಾವರಣವನ್ನು ನಿರ್ಮಿಸಲು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ವಿನಂತಿಸಿದ್ದಾರೆ.

ಅಮೆರಿಕ ಮತ್ತು ಯುರೋಪ್‌ನಿಂದ ಅನೇಕ ಅನಿವಾಸಿ ಕನ್ನಡಿಗರು ಸೇರಿದಂತೆ ಲಕ್ಷಾಂತರ ಜನರು ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ಅವರು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಕ್ಷಣದಲ್ಲಿ ಅವರು ಕರ್ನಾಟಕದಲ್ಲಿದ್ದಂತೆ ಭಾಸವಾಗಬೇಕು. ಹೀಗಾಗಿ ಬೆಂಗಳೂರು ವಿಮಾನದಲ್ಲಿ ಕನ್ನಡ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ವಾತಾವರಣವನ್ನು ನಿರ್ಮಿಸುವುದು ಅಗತ್ಯ. ಈ ಪ್ರಸ್ತಾವನೆಗೆ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಜೋಶಿ ತಿಳಿಸಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ