AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮಹಿಳೆ ಜೊತೆ ಅಸಭ್ಯ ವರ್ತನೆ, ಲೈಂಗಿಕ ದೌರ್ಜನ್ಯ ಆರೋಪ; ಆರೋಪಿ ಅರೆಸ್ಟ್​​

ನಿನ್ನೆ ನಗರದ ಒರಾಯನ್ ಮಾಲ್​ಗೆ ಕರೆಸಿಕೊಂಡಿದ್ದ ಆರೋಪಿ ಸತೀಶ್​ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ಥ ಮಹಿಳೆ ಪೊಲೀಸ್​ ಠಾಣೆಗೆ ದೂರು ನೀಡಿದ್ದಾಳೆ.

ಬೆಂಗಳೂರು: ಮಹಿಳೆ ಜೊತೆ ಅಸಭ್ಯ ವರ್ತನೆ, ಲೈಂಗಿಕ ದೌರ್ಜನ್ಯ ಆರೋಪ; ಆರೋಪಿ ಅರೆಸ್ಟ್​​
ಸಾಂದರ್ಭಿಕ ಚಿತ್ರ
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on:Feb 05, 2023 | 9:24 AM

Share

ಬೆಂಗಳೂರು: ಮಹಿಳೆ ಜೊತೆ ಅಸಭ್ಯ ವರ್ತನೆ, ಲೈಂಗಿಕ ದೌರ್ಜನ್ಯ ಮಾಡಿದ್ದಾನೆ ಎಂದು ಸುಬ್ರಹ್ಮಣ್ಯ ನಗರ ಠಾಣೆಗೆ ಸಂತ್ರಸ್ತ ಮಹಿಳೆ ದೂರು ನೀಡಿದ್ದು, ಇದೀಗ ಆರೋಪಿ ಸತೀಶ್ ಎಂಬಾತನನ್ನ ವಶಕ್ಕೆ ಪಡೆಯಲಾಗಿದೆ. ನಿನ್ನೆ(ಫೆ.4) ಒರಾಯನ್ ಮಾಲ್ ಬಳಿಗೆ ಕರೆದಿದ್ದ ಆರೋಪಿ ಸತೀಶ್, ಈ ವೇಳೆ ಮಹಿಳೆಯ ಜೊತೆ ಅಸಭ್ಯ ವರ್ತನೆ ಹಾಗೂ ತನ್ನ ಮೈ ಕೈ ಮುಟ್ಟಿ ಲೈಂಗಿಕ ದೌರ್ಜನ್ಯ ಮಾಡಿದ್ದು, ಮಹಿಳೆಯ ಕೆಲ ಫೋಟೋ, ವಿಡಿಯೋಗಳು ಆರೋಪಿ ಮೊಬೈಲ್​ನಲ್ಲಿ ಇದೆ. ಅದನ್ನ ಡಿಲೀಟ್ ಮಾಡಿಸುವಂತೆ ಜೊತೆಗೆ ನನ್ನ ಬಳಿ ಚಿನ್ನ, ಹಣ ಪಡೆದಿದ್ದು ವಾಪಸ್​ ಕೊಡಿಸುವಂತೆ ದೂರು ಸುಬ್ರಹ್ಮಣ್ಯ ನಗರ ಠಾಣೆಗೆ ದೂರು ನೀಡಿದ್ದಾಳೆ. ಮಹಿಳೆ ದೂರಿನ ಮೇರೆಗೆ ಆರೋಪಿ ಸತೀಶ್ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

ವಿದ್ಯುತ್​ ಪ್ರವಹಿಸಿ ಇಬ್ಬರು ಕಾರ್ಮಿಕರು ದುರ್ಮರಣ

ಬೆಂಗಳೂರು: ವಿದ್ಯುತ್​ ಪ್ರವಹಿಸಿ ತುಮಕೂರು ಜಿಲ್ಲೆಯ ಮಧುಗಿರಿ ಮೂಲದ ರಘು ಮತ್ತು ಅಸ್ಸಾಂ ಮೂಲದ ದಿಲೀಪ್ ಮೃತ ಪಟ್ಟಿರುವ ಘಟನೆ ನಗರದ ಕೋಣನಕುಂಟೆ ಬಳಿಯಿರುವ ಪ್ರೆಸ್ಟೀಜ್​ ಗ್ರೂಪ್ ಅಪಾರ್ಟ್​ಮೆಂಟ್​​ನಲ್ಲಿ ನಡೆದಿದೆ. ಅಪಾರ್ಟ್​ಮೆಂಟ್​​​ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು, ರಾತ್ರಿ ಪಾಳಿಯಲ್ಲಿ ಚರಂಡಿ ಒಳಗೆ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ತಗುಲಿದ್ದು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಸದ್ಯ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರ ಶವಗಳನ್ನುಇರಿಸಲಾಗಿದ್ದು, ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಲುವೆಯಲ್ಲಿ ತೇಲಿಕೊಂಡು ಬಂದ ಅಪರಿಚಿತ ಮಹಿಳೆ ಶವ

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಚಿಗರಳ್ಳಿ ಬಳಿಯಿರುವ ನೀರಾವರಿ ಕಾಲುವೆಯಲ್ಲಿ ನಿನ್ನೆ(ಫೆ.4) ಸಂಜೆ ಅಪರಿಚಿತ ಮಹಿಳೆಯ ಶವ ತೇಲಿಕೊಂಡು ಬಂದಿದೆ. ಅಂದಾಜು 30 ವರ್ಷದ ಮಹಿಳೆಯನ್ನು ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ ಮಾಡಲಾಗಿದ್ದು, ಕೊಲೆಯಾದ ಮಹಿಳೆಯ ಗುರುತು ಇನ್ನು ಪತ್ತೆಯಾಗಿಲ್ಲ. ಈ ಕುರಿತು ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬೆಂಗಳೂರು: ವಾಂತಿ ಭೇದಿಯಿಂದ ಆಸ್ಪತ್ರೆ ಸೇರಿದ್ದ ಜ್ಯೂನಿಯರ್​ ಡ್ಯಾನ್ಸರ್, ಸಹಕಲಾವಿದೆ ಸಾವು; ವೈದ್ಯರ ವಿರುದ್ಧ ಕುಟುಂಬಸ್ಥರ ಗಂಭೀರ ಆರೋಪ

ಮನೆಗಳ್ಳನ ಕೃತ್ಯಕ್ಕೆ ಸಾಥ್ ನೀಡಿದ್ದ ಗಿರವಿ ಅಂಗಡಿ ಮಾಲೀಕನ ಬಂಧನ

ಬೆಂಗಳೂರು: ಮನೆಗಳ್ಳತನ ಮಾಡುತಿದ್ದ ಆರೋಪಿ ಶ್ರೀನಿವಾಸ್ ಅಲಿಯಾಸ್ ಅಪ್ಪು ಎಂಬಾತನನ್ನು ಬಂಧಿಸಿದ್ದ ಪೊಲೀಸರು. ಈ ವೇಳೆ ಆರೋಪಿ 15 ಮನೆಗಳ್ಳತನ ಮಾಡಿರುವ ಬಗ್ಗೆ ಗೊತ್ತಾಗಿದೆ. ಬಳಿಕ ಆತ ಕದ್ದ ಚಿನ್ನ ಮಾರಿದ ಮೂಲವನ್ನ ಪೊಲೀಸರು ಹುಡುಕಿದ್ದು, ಚಿನ್ನದ ಅಂಗಡಿ ಹೊಂದಿದ್ದ ಭವರ್ ಲಾಲ್ ಎಂಬಾತನ ಬಳಿ ಕಳ್ಳ ಕದ್ದ ಚಿನ್ನವನ್ನ ಮಾರುತ್ತಿದ್ದನಂತೆ. ಈ ಕುರಿತು ತನಿಖೆಗೆ ಸಹಕರಿಸುವಂತೆ ಭವರ್ ಲಾಲ್​ಗೆ ವಿವೇಕನಗರ ಪೊಲೀಸರು ಸೂಚಿಸಿದ್ದಾರೆ. ಆದರೆ ಪೊಲೀಸರ ವಿಚಾರಣೆಗೆ ಸ್ಪಂದಿಸದ ಭವರ್ ಲಾಲ್​ನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:23 am, Sun, 5 February 23

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?