Chikungunya: ಬೆಂಗಳೂರು: ಡೆಂಗ್ಯೂ ಜತೆಗೆ ಚಿಕುನ್ ಗುನ್ಯಾ ಪ್ರಕರಣಗಳೂ ಏರಿಕೆ

ಬೆಂಗಳೂರು ನಗರದಲ್ಲಿ ಈಗಾಲೇ ಜನರನ್ನು ಡೆಂಗ್ಯೂ ಕಾಡುತ್ತಿದೆ. ಇಡೀ ರಾಜ್ಯಕ್ಕೆ ಹೋಲಿಸಿದರೆ ಡೆಂಗ್ಯೂ ಪ್ರಕರಣಗಳಲ್ಲಿ ಸಿಂಹಪಾಲು ಬೆಂಗಳೂರಿನದ್ದಾಗಿದೆ. ಹೀಗಿರುವಾಗ ನಗರಕ್ಕೆ ಮತ್ತೊಂದು ಭೀತಿ ಶುರುವಾಗಿದೆ. ಚಿಕುನ್ ಗುನ್ಯಾ ಪ್ರಕರಣಗಳ ಸಂಖ್ಯೆಯೂ ಗಣನೀಯವಾಗಿ ಏರಿಕೆಯಾಗುತ್ತಿರುವುದು ತಿಳಿದು ಬಂದಿದೆ. ಇದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.

Chikungunya: ಬೆಂಗಳೂರು: ಡೆಂಗ್ಯೂ ಜತೆಗೆ ಚಿಕುನ್ ಗುನ್ಯಾ ಪ್ರಕರಣಗಳೂ ಏರಿಕೆ
ಬೆಂಗಳೂರು: ಡೆಂಗ್ಯೂ ಜತೆಗೆ ಚಿಕುನ್ ಗುನ್ಯಾ ಪ್ರಕರಣಗಳೂ ಏರಿಕೆ
Follow us
Vinay Kashappanavar
| Updated By: Ganapathi Sharma

Updated on:Jul 17, 2024 | 7:00 AM

ಬೆಂಗಳೂರು, ಜುಲೈ 17: ರಾಜ್ಯದಲ್ಲಿ ಈಗಾಗಲೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಮಿತಿ ಮೀರಿದೆ. ಅದರಲ್ಲೂ ಬೆಂಗಳೂರಿನಲ್ಲಿ ಅತಿ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದ್ದು, ಇದನ್ನ ತಡೆಗಟ್ಟಲು ಆರೋಗ್ಯ ಇಲಾಖೆ ಹರಸಾಹಸ ಪಡುತ್ತಿದೆ. ಆದರೂ ಡೆಂಗ್ಯೂ ಹತೋಟಿಗೆ ಬರುತ್ತಿಲ್ಲ. ಇದೆಲ್ಲದರ ಆತಂಕದ ಮಧ್ಯೆ ನಗರದಲ್ಲಿ ಚಿಕುನ್ ಗುನ್ಯಾ ಕೂಡಾ ಹೆಚ್ಚಾಗಲು ಶುರುವಾಗಿದೆ. ಬೆಂಗಳೂರಿನ ಆಸ್ಪತ್ರೆಗಳಲ್ಲಿ ಚಿಕುನ್ ಗುನ್ಯಾ ಪ್ರಕರಣ ಏರಿಕೆಯಾಗುತ್ತಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ತಿಂಗಳಲ್ಲಿ 300 ಪ್ರಕರಣ

ಕಳೆದ ತಿಂಗಳ 15 ರಂದು ರಾಜ್ಯದಲ್ಲಿ ಸುಮಾರು 687 ಪ್ರಕರಣಗಳು ದಾಖಲಾಗಿದ್ದವು. ಬಿಬಿಎಂಪಿ ವ್ಯಾಪ್ತಿಯಲ್ಲಿ 123 ಕೇಸ್ ದಾಖಲಾಗಿತ್ತು. ಡೆಂಗ್ಯೂ ನಡುವೆ ಇದೀಗ 15 ದಿನಗಳಲ್ಲೇ ಚಿಕುನ್ ಗುನ್ಯಾ ಕೇಸ್‌ಗಳು ಹೆಚ್ಚಾಗಿವೆ. ಸೋಮವಾರದ ವರೆಗೆ ರಾಜ್ಯದಲ್ಲಿ 810 ಪ್ರಕರಣ ಕಂಡುಬಂದರೆ, ಬಿಬಿಎಂಪಿ ವ್ಯಾಪ್ತಿಯಲ್ಲಿ 176 ಚಿಕುನ್ ಗುನ್ಯಾ ಪಾಸಿಟಿವ್ ಕೇಸ್‌ಗಳು ಪತ್ತೆಯಾಗಿವೆ. ಇದುವರೆಗೂ ಒಂದು ತಿಂಗಳಲ್ಲಿ 303 ಪ್ರಕರಣ ದಾಖಲಾಗಿದೆ.

ನಗರದ ಜನರು ಎಚ್ಚರಿಕೆ ವಹಿಸಬೇಕಾಗಿದೆ.‌ ಸಂಧಿಗಳಲ್ಲಿ ನೋವು, ಜ್ವರ ಕಂಡು ಬಂದಲ್ಲಿ ವೈದ್ಯರನ್ನ ಸಂಪರ್ಕಿಸಿ ಎಂದು ತಜ್ಞರು ಸಲಹೆ ನೀಡಿದ್ದಾರೆ. ಲಕ್ಷಣಗಳು ಕಂಡುಬಂದಲ್ಲಿ ಚಿಕುನ್ ಗುನ್ಯಾ ಪರೀಕ್ಷೆ ಮಾಡಿಸಿದರೆ ಉತ್ತಮ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಜುಲೈ 15ರ ಅಂಕಿಅಂಶ ಪ್ರಕಾರ ರಾಜ್ಯದಲ್ಲಿ 937 ಪ್ರಕರಣಗಳು ವರದಿಯಾಗಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 176 ಪ್ರಕರಣಗಳು ಪತ್ತೆಯಾಗಿದ್ದು, ಈವರೆಗಿನ ಒಟ್ಟು ಪ್ರಕರಣಗಳ ಸಂಖ್ಯೆ 1,113 ಆಗಿದೆ.

ಇದರ ಜೊತೆಗೆ ಈಗಾಗಲೇ ನಗರದ ಕೆಸಿ ಜನರಲ್, ವಿಕ್ಟೋರಿಯಾ, ಜಯನಗರ ಜನರಲ್ ಆಸ್ಪತ್ರೆಯಲ್ಲಿ ಡೆಂಗ್ಯೂಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಇದೀಗ ಚಿಕುನ್ ಗುನ್ಯಾದಂತಹ ಪ್ರಕರಣಗಳ ಗುಣಲಕ್ಷಣಗಳು ಕಂಡು ಬಂದಲ್ಲಿ, ಅಂತಹವರನ್ನ ಪರೀಕ್ಷೆಗೆ ಒಳಪಡಿಸಲಾಗ್ತಿದೆ. ಪಾಸಿಟಿವ್ ಬಂದವರಿಗೆ ಚಿಕಿತ್ಸೆ ಹಾಗೂ ಮೆಡಿಸನ್ ನೀಡಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಡೆಂಗ್ಯೂ ಪ್ರಕರಣಗಳ ಸಂಖ್ಯೆ ಶೇ 200ರಷ್ಟು ಏರಿಕೆ

ರಾಜ್ಯದಲ್ಲಿ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದ್ರೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಶೇ 200 ಕ್ಕೂ ಹೆಚ್ಚು ಏರಿಕೆ ಕಂಡಿದೆ. ಕಳೆದ ವರ್ಷ ಜುಲೈ 14 ರವೇಳಗೆ ರಾಜ್ಯದಲ್ಲಿ ಒಟ್ಟು 1818 ಡೆಂಗ್ಯೂ ಕೇಸ್ ಪತ್ತೆಯಾಗಿದ್ದವು. ಬಿಬಿಎಂಪಿ ವ್ಯಾಪ್ತಿಯಲ್ಲಿ 905 ಡೆಂಗ್ಯೂ ಕೇಸ್ ಪತ್ತೆಯಾಗಿದ್ದವು. ಈ ಮೂಲಕ ಒಟ್ಟು 2723 ಕೇಸ್ ದಾಖಲಾಗಿದ್ದು ಯಾವುದೇ ಸಾವು ಕಂಡು ಬಂದಿರಲಿಲ್ಲ. ಆದರೆ ಈ ವರ್ಷ ಜುಲೈ ವೇಳೆಗೆ ದಾಖಲೆಯ 9527 ಕೇಸ್ ಪತ್ತೆಯಾಗಿವೆ.

ಇದನ್ನೂ ಓದಿ: ಹ್ಯಾಂಡ್​​ ಬ್ರೇಕ್ ಹಾಕದೇ ಇಳಿದ ಚಾಲಕ, ಕಾರು ಕಂದಕಕ್ಕೆ ಬಿದ್ದು ಬೆಂಗಳೂರಿನ ಮೂವರು ದುರ್ಮರಣ

ಒಟ್ಟಿನಲ್ಲಿ ನಗರದಲ್ಲಿ ವೈದ್ಯರು ನಡುವೆ ಚಿಕುನ್ ಗುನ್ಯಾ ಕೂಡಾ ಆತಂಕವನ್ನು ಹುಟ್ಟಿಸಿದ್ದು, ಪ್ರಕರಣಗಳು ಇನ್ನಷ್ಟು ಹೆಚ್ಚುವ ಮುನ್ನ ಆರೋಗ್ಯ ಇಲಾಖೆ ಮುಂಜಾಗ್ರತೆ ವಹಿಸಬೇಕಿದೆ. ಜನರು ಕೂಡಾ ತಮ್ಮ ಮನೆಗಳ ಬಳಿ ಸ್ವಚ್ಛತೆ ಕಾಪಾಡಿ ಡೆಂಗ್ಯೂ ಹಾಗೂ ಚಿಕುನ್ ಗುನ್ಯಾದಿಂದ ದೂರ ಉಳಿಯಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:00 am, Wed, 17 July 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ