AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KMF And Amul: ಕೆಎಂಎಫ್​​, ಅಮುಲ್​ ವಿಲೀನ ಬಗ್ಗೆ ಅಮಿತ್ ಶಾ ಎಲ್ಲೂ ಹೇಳಿಲ್ಲ; ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್ಟನೆ

ಕೆಎಂಎಫ್​​ ಮತ್ತು ಅಮುಲ್​ ವಿಲೀನ ಬಗ್ಗೆ ಅಮಿತ್ ಶಾ ಎಲ್ಲೂ ಹೇಳಿಲ್ಲ ಎಂದು ಬೆಂಗಳೂರಿನಲ್ಲಿ ಸಹಕಾರ ಸಚಿವ ಎಸ್​.ಟಿ.ಸೋಮಶೇಖರ್ ಅವರು ಹೇಳಿದ್ದಾರೆ.

KMF And Amul: ಕೆಎಂಎಫ್​​, ಅಮುಲ್​ ವಿಲೀನ ಬಗ್ಗೆ ಅಮಿತ್ ಶಾ ಎಲ್ಲೂ ಹೇಳಿಲ್ಲ; ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್ಟನೆ
ಸಚಿವ ಎಸ್.ಟಿ.ಸೋಮಶೇಖರ್, ಕೆಎಂಎಫ್ ನಂದಿನಿ ಹಾಲು ಮತ್ತು ಅಮುಲ್ ಹಾಲು
TV9 Web
| Updated By: Rakesh Nayak Manchi|

Updated on:Jan 01, 2023 | 6:32 PM

Share

ಬೆಂಗಳೂರು: ಕೆಎಂಎಫ್​​ ಮತ್ತು ಅಮುಲ್ ವಿಲೀನ (KMF And Amul Merge)​ ಆಗಲಿದೆ ಎಂಬ ಸುದ್ದಿಯನ್ನು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ (S.T.Somashekhar) ಅವರು ಅಲ್ಲಗಳೆದಿದ್ದಾರೆ. ಕೆಎಂಎಫ್​​ ಮತ್ತು ಅಮುಲ್​ ವಿಲೀನ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಎಲ್ಲೂ ಹೇಳಿಲ್ಲ. ಕೆಎಂಎಫ್ ಒಂದು ಬಲಿಷ್ಠವಾದ ಸಂಸ್ಥೆ. ಸಾವಿರಾರು ವಹಿವಾಟು ನಡೆಸುವ ಸಂಸ್ಥೆಯಾಗಿದೆ. ಗುಜರಾತ್ ಅಮೂಲ್ ಜೊತೆ ನಮ್ಮ ಕೆಎಂಎಫ್ ವಿಲೀನ ಮಾಡುವ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದು ಸ್ಪಷ್ಟನೆ ನೀಡಿದರು.

ಗುಜರಾತ್​​ನಲ್ಲಿ ಡೈರಿ ಮೊದಲ ಸ್ಥಾನದಲ್ಲಿ ಇದೆ, ಇಲ್ಲಿ (ಕರ್ನಾಟಕ) ಕೂಡ ಬಲಿಷ್ಠ ಇದೆ ಅಂದಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಯವರು ಕೂಡ ಸ್ಪಷ್ಟನೆ ನೀಡಿದ್ದಾರೆ. ಆದರೆ ಯಾಕೆ ಕಾಂಗ್ರೆಸ್​ ಮತ್ತು ಜೆಡಿಎಸ್​​ಗೆ ಈ ಪ್ರಶ್ನೆ ಹುಟ್ಟಿಕೊಳ್ಳುತ್ತದೆಯೋ ಗೊತ್ತಿಲ್ಲ ಎಂದರು. ಅಲ್ಲದೆ, ಸೊಸೈಟಿ ಅಭಿವೃದ್ಧಿ ಬಗ್ಗೆ ಮಾತಾಡಿದ್ದಾರೆ. ಆದರೆ ಎರಡು ಕಂಪನಿಗಳನ್ನು ವಿಲೀನ ಮಾಡುವ ಬಗ್ಗೆ ಎಲ್ಲಿಯೂ ಚರ್ಚೆ ಆಗಿಲ್ಲ. ಕರ್ನಾಟಕಕ್ಕೆ ಅನ್ಯಾಯ ಆಗುವ ರೀತಿ ಅವರು ಹೇಳಿಲ್ಲ. ವಿರೋಧ ಪಕ್ಷಗಳು ಚುನಾವಣೆ ಗಿಮಿಕ್​ಗಾಗಿ ಹಾಗೆ ಹೇಳುತ್ತಿದ್ದಾರೆ ಅಷ್ಟೇ ಎಂದರು.

ಇದನ್ನೂ ಓದಿ: ಅಮುಲ್ ಜತೆ ನಂದಿನಿ ವಿಲೀನ ಎನ್ನುವ ಅಮಿತ್ ಶಾ ಹೇಳಿಕೆ ಸುದ್ದಿಗೆ ಸ್ಪಷ್ಟನೆ ನೀಡಿದ ಸಿಎಂ ಬೊಮ್ಮಾಯಿ

ಅನ್ಯಪಕ್ಷದವರ ಸೇರ್ಪಡೆ ಬಗ್ಗೆ ಒಂದು ಚರ್ಚೆ ಆಗಿದೆ. ಪಕ್ಷ ಬಲಪಡಿಸಲು ಏನೇನು ಮಾಡಬೇಕು ಎಂಬಿತ್ಯಾದಿ ಚರ್ಚೆಗಳು ನಡೆದಿವೆ. ಮೈಸೂರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬರುತ್ತಿದ್ದಾರೆ. ಮತ್ತೊಮ್ಮೆ ಮಂಡ್ಯಕ್ಕೂ ಬರುತ್ತೇನೆ ಅಂತ ಹೇಳಿದ್ದಾರೆ. ನಾಳೆಯಿಂದ ಅವರು ಹಾಕಿಕೊಟ್ಟ ಕಾರ್ಯಕ್ರಮಗಳ ಮೂಲಕ ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಕೆಲಸ ಆಗಲಿದೆ ಎಂದರು.

ಅಮಿತ್ ಶಾ ಹೇಳಿಕೆ ಗಮನಿಸಿ ಎಂದ ಪ್ರಹ್ಲಾದ್ ಜೋಶಿ

ಅಮುಲ್​ ಮತ್ತು ಕೆಎಂಎಫ್​ ವಿಲೀನ ಬಗ್ಗೆ ಅಮಿತ್ ಶಾ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮೊದಲು ಅಮಿತ್ ಶಾ ಏನು ಹೇಳಿಕೆ ಕೊಟ್ಟಿದ್ದಾರೆ ಸರಿಯಾಗಿ ನೋಡಿ. ಒಟ್ಟಿಗೆ ಮಾರುಕಟ್ಟೆ ಮಾಡಿದರೆ ನಿಮ್ಮ ವ್ಯಾಪ್ತಿ ದೊಡ್ಡದಾಗುತ್ತದೆ ಎಂದಿದ್ದಾರೆ. ನಿಮ್ಮ ಬ್ರ್ಯಾಂಡ್​​ ವಿಲೀನ ಮಾಡಬೇಕು ಅಂತಾ ಎಲ್ಲೂ ಹೇಳಿಲ್ಲ ಎಂದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕೆಎಂಎಫ್ ಅಥವಾ ನಂದಿನಿ​​ ಅತ್ಯಂತ ಗಟ್ಟಿಮುಟ್ಟಾಗಿ ಮುಂದುವರಿಯುತ್ತದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:30 pm, Sun, 1 January 23

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​