AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪತ್ನಿಗೆ ಡೆತ್ ನೋಟ್​​ ಕಳುಹಿಸಿ, ರೈಲಿಗೆ ತಲೆಕೊಟ್ಟು ಐಟಿ ಇನ್ಸ್​ಪೆಕ್ಟರ್ ಆತ್ಮಹತ್ಯೆ​

ಐಟಿ ಇನ್ಸ್​ಪೆಕ್ಟರ್​ ದೇವೇಂದ್ರ ದುಬೆ ಎಂಬಾತ ಪತ್ನಿ ಜೊತೆ ಜಗಳ ಮಾಡಿಕೊಂಡು ಹೋಗಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೆಂಗಳೂರು: ಪತ್ನಿಗೆ ಡೆತ್ ನೋಟ್​​ ಕಳುಹಿಸಿ, ರೈಲಿಗೆ ತಲೆಕೊಟ್ಟು ಐಟಿ ಇನ್ಸ್​ಪೆಕ್ಟರ್ ಆತ್ಮಹತ್ಯೆ​
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Feb 11, 2023 | 11:24 AM

Share

ಬೆಂಗಳೂರು: ಐಟಿ ಇನ್ಸ್​ಪೆಕ್ಟರ್​ ದೇವೇಂದ್ರ ದುಬೆ ಎಂಬಾತ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಶವಂತಪುರದಲ್ಲಿ ನಡೆದಿದೆ. ಜ.20ರಂದು ಪತ್ನಿ ಜತೆ ಜಗಳ ಮಾಡಿಕೊಂಡು ಹೋಗಿದ್ದ ದೇವೇಂದ್ರ, ಬಳಿಕ ನನ್ನ ಸಾವಿಗೆ ನಾನೇ ಕಾರಣ ಎಂದು ಪತ್ನಿಗೆ ಡೆತ್​ನೋಟ್​​ ಕಳಿಸಿದ್ದನು. ಪತಿ ಸಂಪರ್ಕಕ್ಕೆ ಸಿಗದ ಕಾರಣ ಯಶವಂತಪುರ ಪೊಲೀಸ್ ಠಾಣೆಗೆ ಬಂದು ಜನವರಿ 23ರಂದು ಮಿಸ್ಸಿಂಗ್ ಕೇಸ್ ದಾಖಲು ಮಾಡಲಾಗಿತ್ತು. ಆದರೀಗ ದೇವೇಂದ್ರ ರೈಲಿಗೆ ತಲೆಕೊಟ್ಟು ಸಾವನ್ನಪ್ಪಿದ್ದಾನೆ.

ಹಣಕಾಸಿನ ವಿಚಾರಕ್ಕೆ ಇಬ್ಬರ ನಡುವೆ ಜಗಳ, ಕೊಲೆಯಲ್ಲಿ ಅಂತ್ಯ

ಬೆಂಗಳೂರು: ಹಳೇ ದ್ವೇಷಕ್ಕೆ ಚಾಕು ಇರಿದು ಸ್ನೇಹಿತ ಶರತ್​(25) ಎಂಬಾತನನ್ನ ಕೊಲೆ ಮಾಡಿರುವ ಘಟನೆ ಕುಮಾರಸ್ವಾಮಿ ಲೇಔಟ್​ನಲ್ಲಿ ನಡೆದಿದೆ. ಶರತ್ ಕುಮಾರ್ ಮತ್ತು ಲೋಕೇಶ್ ಇಬ್ಬರು ಸ್ನೇಹಿತಾಗಿದ್ರು, ಹಣಕಾಸಿನ ವಿಚಾರಕ್ಕೆ ಇಬ್ಬರು ಗಲಾಟೆ ಮಾಡ್ಕೊಂಡು ಬೇರೆಯಾಗಿದ್ರು. ಇದೇ ವಿಚಾರ ಸಂಬಂಧ ಇಬ್ಬರ ನಡುವೆ ಗಲಾಟೆ ನಡೆದಿದೆ. ಮೊದಲು ಲೋಕೇಶ್​ಗೆ ಚಾಕು ಇರಿಯಲು ಮುಂದಾಗಿದ್ದ ಶರತ್ ಕುಮಾರ್. ಈ ವೇಳೆ ಶರತ್ ಕುಮಾರ್ ಬಳಿಯ ಚಾಕು ಕಸಿದುಕೊಂಡು ಲೋಕೇಶ್ ಅವನಿಗೆ ಚಾಕು ಇರಿದು ಕೊಲೆ ಮಾಡಿದ್ದಾನೆ. ತಕ್ಷಣವೇ ಗಾಯಾಳುಗಳನ್ನು ದಯಾನಂದ ಸಾಗರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಶರತ್​(25) ಸಾವನ್ನಪ್ಪಿದ್ದು, ಕುಮಾರಸ್ವಾಮಿ ಲೇಔಟ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಡಿದ ಮತ್ತಿನಲ್ಲಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

ಬೆಂಗಳೂರು: ಕುಡಿದ ಮತ್ತಿನಲ್ಲಿ ನಿನ್ನೆ ರಾತ್ರಿ ಶ್ರೀಧರ್ ಎಂಬಾತ ಮುನಿಯಪ್ಪ(45) ಎಂಬಾತನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಅಲಸಹಳ್ಳಿ ಮುಖ್ಯ ರಸ್ತೆಯ ಬಾರ್ ಬಳಿ ನಡೆದಿದೆ. ಒಂದೇ ಏರಿಯಾದಲ್ಲಿ ವಾಸವಿದ್ದ ಶ್ರೀಧರ್ ಹಾಗೂ ಮುನಿಯಪ್ಪ ರಾತ್ರಿ ಕುಡಿದ ನಂತ್ರ ಗಲಾಟೆ ಮಾಡಿಕೊಂಡಿದ್ದಾರೆ. ಈ ವೇಳೆ ಶ್ರೀಧರ್​ ಮಚ್ಚಿನಿಂದ ಹೊಡೆದು ಕೊಲೆ ಮಾಡಿದ್ದಾನೆ. ಈ ಕುರಿತು ವರ್ತೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಶ್ರೀಧರ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:Hassan: ಮೊದಲು ಮಿಸ್ಸಿಂಗ್, ಆ ಮೇಲೆ ಕಿಡ್ನಾಪ್, ಕೊನೆಗೆ ಕೊಲೆ ಕೇಸ್: ಇದು ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಗೆಳೆಯರಿಂದಲೇ ನವವಿವಾಹಿತ ಹತ್ಯೆಯಾದ ಕತೆ

ಮದ್ದೂರು ಬಳಿ ಕಾರು ಡಿಕ್ಕಿಯಾಗಿ ಜಿಂಕೆ‌ಮರಿ ಸಾವು

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಮದ್ದೂರು ಬಳಿ ಕಾರು ಡಿಕ್ಕಿಯಾಗಿ ಜಿಂಕೆ‌ಮರಿ ಸಾವನ್ನಪ್ಪಿದೆ. ರಾ.ಹೆ. 66 ರಲ್ಲಿ ರಸ್ತೆ ದಾಟುತ್ತಿದ್ದ ಜಿಂಕೆಗೆ ಕಾರು ಡಿಕ್ಕಿಯಾಗಿದೆ. ಈ ಕುರಿತು ಮದ್ದೂರು ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಪ್ರಕರಣ ದಾಖಲಾಗಿದ್ದು, ಆಂಧ್ರಪ್ರದೇಶದ ಚಿತ್ತೂರು ಮೂಲದ ಚಾಲಕ ಸಬೀರ್​ನನ್ನು ಬಂಧಿಸಲಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ