ಅಪಾರ್ಟ್ಮೆಂಟ್​ನಲ್ಲಿ ಅಗ್ನಿ ಅವಘಡ; ಮೂರು ದಿನಗಳ ನಂತರ ಫ್ಲ್ಯಾಟ್​ಗಳಿಗೆ ವಾಪಸ್ ಆದ ನಿವಾಸಿಗಳು

Bengaluru Fire Accident: ಫ್ಲ್ಯಾಟ್ಗಳಲ್ಲಿ 2 ದಿನಗಳಿಂದ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿತ್ತು. ರಾತ್ರಿಯಿಂದ ಫ್ಲ್ಯಾಟ್ಗಳಿಗೆ ವಿದ್ಯುತ್ ಸಂಪರ್ಕ ನೀಡಲಾಗಿದೆ. ಹೀಗಾಗಿ ತಮ್ಮ ಫ್ಲ್ಯಾಟ್‌ಗಳಿಗೆ ನಿವಾಸಿಗಳು ವಾಪಸಾಗುತ್ತಿದ್ದಾರೆ. ಅಗ್ನಿ ದುರಂತಕ್ಕೆ ಕಾರಣವೇನೆಂಬುವುದು ಇನ್ನೂ ನಿಗೂಢವಾಗಿದೆ.

ಅಪಾರ್ಟ್ಮೆಂಟ್​ನಲ್ಲಿ ಅಗ್ನಿ ಅವಘಡ; ಮೂರು ದಿನಗಳ ನಂತರ ಫ್ಲ್ಯಾಟ್​ಗಳಿಗೆ ವಾಪಸ್ ಆದ ನಿವಾಸಿಗಳು
ಬೆಂಗಳೂರು ಅಪಾರ್ಟ್​ಮೆಂಟ್​ ಅಗ್ನಿ ಅವಘಡ
Follow us
TV9 Web
| Updated By: Digi Tech Desk

Updated on:Sep 23, 2021 | 12:25 PM

ಬೆಂಗಳೂರು: ನಗರದ ದೇವರಚಿಕ್ಕನಹಳ್ಳಿಯ ಆಶ್ರಿತ್ ಅಪಾರ್ಟ್ಮೆಂಟ್ನಲ್ಲಿ ಸಂಭವಿಸಿದ ಅಗ್ನಿ ಅನಾಹುತಕ್ಕೆ ಇಡೀ ಫ್ಲ್ಯಾಟ್ ಸಂಪೂರ್ಣ ಕರಕಲಾಗಿ ಹೋಗಿದೆ. ಮನೆಯಲ್ಲಿದ್ದ ಪ್ರತಿ ವಸ್ತುಗಳು ಸುಟ್ಟು ಭಸ್ಮವಾಗಿದೆ. ಈ ಹಿನ್ನೆಲೆಯಲ್ಲಿ ಅಪಾರ್ಟ್ಮೆಂಟ್ ಜನರನ್ನು ಬೇರೆ ಕಡೆ ಶಿಫ್ಟ್ ಮಾಡಲಾಗಿತ್ತು. ಸದ್ಯ ಈಗ ಮೂರು ದಿನಗಳ ನಂತರ ಫ್ಲ್ಯಾಟ್ಗಳಿಗೆ ನಿವಾಸಿಗಳು ವಾಪಸ್ ಆಗಿದ್ದಾರೆ. ಫ್ಲ್ಯಾಟ್ಗಳಲ್ಲಿ 2 ದಿನಗಳಿಂದ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿತ್ತು. ರಾತ್ರಿಯಿಂದ ಫ್ಲ್ಯಾಟ್ಗಳಿಗೆ ವಿದ್ಯುತ್ ಸಂಪರ್ಕ ನೀಡಲಾಗಿದೆ. ಹೀಗಾಗಿ ತಮ್ಮ ಫ್ಲ್ಯಾಟ್‌ಗಳಿಗೆ ನಿವಾಸಿಗಳು ವಾಪಸಾಗುತ್ತಿದ್ದಾರೆ. ಅಗ್ನಿ ದುರಂತಕ್ಕೆ ಕಾರಣವೇನೆಂಬುವುದು ಇನ್ನೂ ನಿಗೂಢವಾಗಿದೆ. ಸದ್ಯ ಎಫ್ಎಸ್ಎಲ್ ಘಟನಾ ಸ್ಥಳ ಪರಿಶೀಲನೆ ನಡೆಸಿದ್ದು ಪೊಲೀಸರು ಎಫ್ಎಸ್ಎಲ್ ವರದಿಗಾಗಿ ಕಾಯುತ್ತಿದ್ದಾರೆ.

ಕಾನೂನು ಪ್ರಕಾರವೇ ಅಪಾರ್ಟ್‌ಮೆಂಟ್ ನಿರ್ಮಿಸಲಾಗಿದೆ ದುರಂತದ ಬಗ್ಗೆ ಮಾತನಾಡಿದ ಅಪಾರ್ಟ್ಮೆಂಟ್ ನಿರ್ಮಿಸಿದ್ದ ಆಸ್ಪೈರ್ ಬಿಲ್ಡರ್ಸ್ ಸಂಸ್ಥೆಯ ಶ್ರೀನಿವಾಸ್‌ರೆಡ್ಡಿ, ನಾನು ಎಲ್ಲಿಯೂ ಓಡಿ ಹೋಗಿಲ್ಲ, ಬೆಂಗಳೂರಿನಲ್ಲೇ ಇದ್ದೇನೆ. ಕಾನೂನು ಪ್ರಕಾರವೇ ಅಪಾರ್ಟ್‌ಮೆಂಟ್ ನಿರ್ಮಿಸಲಾಗಿದೆ. ಈ ಕಟ್ಟಡಕ್ಕೆ ಅಗ್ನಿಶಾಮಕ ನಿಯಮಗಳು ಅನ್ವಯವಾಗಲ್ಲ. ಸೆಟ್ಬ್ಯಾಕ್ ಬಿಟ್ಟು ಅಪಾರ್ಟ್‌ಮೆಂಟ್ ನಿರ್ಮಿಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಘಟನೆ ಹಿನ್ನೆಲೆ ಬೆಂಗಳೂರಿನ ಬೊಮ್ಮನಹಳ್ಳಿಯ ದೇವರಚಿಕ್ಕನಹಳ್ಳಿಯಲ್ಲಿರುವ ಅಪಾರ್ಟ್​ಮೆಂಟ್​ನಲ್ಲಿ (Bangalore Apartment) ಸೆಪ್ಟೆಂಬರ್ 21ರ ಸಂಜೆ ಭಾರೀ ಬೆಂಕಿ ಅವಘಡ (Fire Accident) ಸಂಭವಿಸಿತ್ತು. ಅಪಾರ್ಟ್​ಮೆಂಟ್​ನ ಫ್ಲಾಟ್​ ಧಗಧಗನೆ ಹೊತ್ತಿ ಉರಿದ ಪರಿಣಾಮ ಅಮೆರಿಕದಿಂದ ವಾಪಾಸ್ ಬಂದಿದ್ದ ತಾಯಿ-ಮಗಳು ಸಜೀವ ದಹನವಾಗಿದ್ದರು. ಈ ದುರಂತಕ್ಕೆ ಇಡೀ ರಾಜ್ಯವೇ ಬೆಚ್ಚಿಬಿದ್ದಿತ್ತು. ಸಿಲಿಂಡರ್ ಸ್ಫೋಟದಿಂದ (Cylinder Blast) ಅಪಾರ್ಟ್​ಮೆಂಟ್​ನಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿತ್ತು. ಅಲ್ಲದೆ, ಅಪಾರ್ಟ್​ಮೆಂಟ್​ನಲ್ಲಿ ಅಗ್ನಿ ಸುರಕ್ಷತಾ ನಿಯಮಗಳನ್ನು ಅನುಸರಿಸದೆ ಇದ್ದುದು ಈ ದುರಂತ ನಡೆಯಲು ಮುಖ್ಯ ಕಾರಣವಾಗಿತ್ತು.

ಇದನ್ನೂ ಓದಿ: Bengaluru Fire Accident: ಬೆಂಗಳೂರು ಅಪಾರ್ಟ್​ಮೆಂಟ್​ನಲ್ಲಿ ನಡೆದ ಬೆಂಕಿ ದುರಂತಕ್ಕೆ ದೇವರ ದೀಪವೇ ಕಾರಣವಾ?

Published On - 10:31 am, Thu, 23 September 21

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ