ಬೆಂಗಳೂರಿನ ಎಪಿಎಸ್ ಕಾಲೇಜು ಅಧ್ಯಕ್ಷರಾಗಿದ್ದ ಟಿ.ವಿ ಮಾರುತಿ ನಿಧನ

ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದ ಟಿ.ವಿ. ಮಾರುತಿ ಅವರು ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತ, ನಾಯಕರಾಗಿ ಗುರುತಿಸಿಕೊಂಡಿದ್ದರು. ಕಾಂಗ್ರೆಸ್ ಪಕ್ಷದಿಂದ ವಿಧಾನ ಪರಿಷತ್, ರಾಜ್ಯಸಭಾ ಚುನಾವಣೆಗೂ ಸ್ಪರ್ಧಿಸಿದ್ದರು.‌

ಬೆಂಗಳೂರಿನ ಎಪಿಎಸ್ ಕಾಲೇಜು ಅಧ್ಯಕ್ಷರಾಗಿದ್ದ ಟಿ.ವಿ ಮಾರುತಿ ನಿಧನ
ಟಿ.ವಿ ಮಾರುತಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jan 22, 2022 | 5:25 PM

ಬೆಂಗಳೂರು: ಬೆಂಗಳೂರಿನ ಬಸವನಗುಡಿ ಹಾಗೂ ಸೋಮನಹಳ್ಳಿಯಲ್ಲಿರುವ ಆಚಾರ್ಯ ಪಾಠಶಾಲಾ ಶಿಕ್ಷಣ ಸಂಸ್ಥೆ (APS College) ಅಧ್ಯಕ್ಷರಾಗಿದ್ದ ಟಿ.ವಿ. ಮಾರುತಿ‌ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಶಿಕ್ಷಣ, ಸಮಾಜಸೇವೆ, ರಾಜಕೀಯ, ಉದ್ಯಮ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಟಿ.ವಿ. ಮಾರುತಿ ಸಕ್ರಿಯರಾಗಿದ್ದರು. ರೇಷ್ಮೆ ಉದ್ದಿಮೆದಾರರೂ ಆಗಿದ್ದ ಟಿ.ವಿ. ಮಾರುತಿ ಅವರು ಬೆಂಗಳೂರಿನ (Bengaluru) ಮೆಜೆಸ್ಟಿಕ್ ಬಳಿ ಇರುವ ಶಾಂತಲಾ ಸಿಲ್ಕ್ ಹೌಸ್ ಮಾಲೀಕರೂ ಕೂಡ ಹೌದು.

ಟಿ.ವಿ ಮಾರುತಿ ಅವರು ಬೆಂಗಳೂರಿನ ವಸಂತ ನಗರದಲ್ಲಿರುವ ಕುಂಚುಟಿಗ ಸಾರ್ವಜನಿಕ ವಿದ್ಯಾರ್ಥಿ ನಿಲಯದ ಅಧ್ಯಕ್ಷರಾಗಿ ಗ್ರಾಮೀಣಾ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಉಚಿತ ಹಾಸ್ಟೆಲ್ ಸೌಲಭ್ಯ ಒದಗಿಸಿ ಅದನ್ನು ಅಧ್ಯಕ್ಷರಾಗಿ ಮುನ್ನಡೆಸಿದ್ದರು.‌ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದ ಟಿ.ವಿ. ಮಾರುತಿ ಅವರು ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತ, ನಾಯಕರಾಗಿ ಗುರುತಿಸಿಕೊಂಡಿದ್ದರು. ಕಾಂಗ್ರೆಸ್ ಪಕ್ಷದಿಂದ ವಿಧಾನ ಪರಿಷತ್, ರಾಜ್ಯಸಭಾ ಚುನಾವಣೆಗೂ ಸ್ಪರ್ಧಿಸಿದ್ದರು.‌

ಟಿ.ವಿ. ಮಾರುತಿ ಅವರ ನಿಧನಕ್ಕೆ ಕುಂಚುಟಿಗ ಸಾರ್ವಜನಿಕ ವಿದ್ಯಾರ್ಥಿ ನಿಲಯದ ಹಳೆಯ ವಿದ್ಯಾರ್ಥಿಗಳು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಬಂಧು ಬಳಗ ಕಂಬನಿ ಮಿಡಿದಿದ್ದಾರೆ.‌

ಇದನ್ನೂ ಓದಿ: ಬೆಂಗಳೂರಿನ ಹೆಣ್ಣೂರು ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ಮತ್ತೊಂದು ಗಂಭೀರ ಆರೋಪ; ದೂರು ನೀಡಲು ಕಮಿಷನರ್ ಕಚೇರಿಗೆ ಹೋದ ಮಹಿಳೆ

ಗೇಟ್ ವೇ ಆಫ್ ಬೆಂಗಳೂರಿನ ಫ್ಲೈಓವರ್ ದುರಸ್ತಿ ಕಾರ್ಯ ಇನ್ನೂ ಒಂದು ವಾರ ವಿಳಂಬ; ವಾಹನ ಸಂಚಾರಕ್ಕೆ ಸಮಸ್ಯೆ

Published On - 4:20 pm, Sat, 22 January 22

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು