ಬೆಂಗಳೂರಿನ ಸೈನಿಕ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್: ಬಾಂಬ್ ನಿಷ್ಕ್ರಿಯ ದಳ ದೌಡು!

ಬೆಂಗಳೂರಿನ ಅಶೋಕ ನಗರದಲ್ಲಿರುವ ಆರ್ಮಿ ಶಾಲೆಗೆ ಬಾಂಬ್ ಇಟ್ಟಿರುವುದಾಗಿ ಇಮೇಲ್ ಸಂದೇಶವನ್ನು ಮಾಡಲಾಗಿದ್ದು. ಕೂಡಲೇ ಸ್ಥಳಕ್ಕೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಸೇರಿದಂತೆ ಶ್ವಾನದಳ ಪರಿಶೀಲನೆ ನಡೆಸಿದೆ.

ಬೆಂಗಳೂರಿನ ಸೈನಿಕ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್: ಬಾಂಬ್ ನಿಷ್ಕ್ರಿಯ ದಳ ದೌಡು!
ಆರ್ಮಿ ಶಾಲೆ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Sep 18, 2024 | 4:41 PM

ಬೆಂಗಳೂರು (ಸೆಪ್ಟೆಂಬರ್.18): ಬೆಂಗಳೂರಿನ ಅಶೋಕ್ ನಗರದಲ್ಲಿರುವ ಸೈನಿಕ ಶಾಲೆಗೆ ಇಂದು (ಸೆ.18) ಬಾಂಬ್ ಬೆದರಿಕೆ ಕರೆ ಬಂದಿದ್ದು, ಶಾಲೆಗೆ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಇ-ಮೇಲ್ ಮೂಲಕ ಸಂದೇಶ ರವಾನಿಸಲಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಆದ್ರೆ, ಯಾವುದೇ ಬಾಂಬ್ ಪತ್ತೆಯಾಗಿಲ್ಲ. ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಂದು (ಬುಧವಾರ) ಆಶೋಕ ನಗರದ ಆರ್ಮಿ ಸ್ಕೂಲ್ ಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಬಾಂಬ್ ಇಟ್ಟು ಬ್ಲಾಸ್ಟ್ ಮಾಡುವುದಾಗಿ ಇಮೇಲ್‌ನಲ್ಲಿ ಬರೆಯಲಾಗಿದೆ. ಶಾಲೆಯ ಇ ಮೇಲ್ ಖಾತೆಗೆ ಬೆದರಿಕೆ ಮೇಲ್ ಬಂದಿದ್ದು, ಇದನ್ನು ನೋಡಿದ ಸಿಬ್ಬಂದಿ ಕೂಡಲೇ ಕ ಆಶೋಕ ನಗರ ಪೊಲೀಸ್ ಠಾಣೆ ಗೆ ಮಾಹಿತಿ ನೀಡಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಬಾಂಬ್ ನಿಷ್ಕ್ರೀಯ ದಳ, ಶ್ವಾನ ದಳ ಸಮೇತ ಶಾಲೆಗೆ ತೆರಳಿ ಪರಿಶೀಲನೆ ಮಾಡಿದ್ದಾರೆ. ಆದರೆ, ಪರಿಶೀಲನೆ ವೇಳೆ ಯಾವುದೇ ಬಾಂಬ್ ಪತ್ತೆಯಾಗಿಲ್ಲ.

ಇದೊಂದು ಸುಳ್ಳು ಬೆದರಿಕೆ ಇ ಮೇಲ್ ಎಂಬುದು ಬೆಳಕಿಗೆ ಬಂದಿದೆ. ಇ ಮೇಲ್ ಬೆದರಿಕೆ ಸಂಬಂಧಿಸಿದಂತೆ ಆಶೋಕ್ ನಗರ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ. ಇದೇನು ಮೊದಲಲ್ಲ. ಈ ಹಿಂದೆ ನಗರದ ಹಲವು ಶಾಲೆಗಳಿಗೆ ಬಾಂಬ್ ಇಟ್ಟಿರುವ ಬೆದರಿಕೆ ಇಮೇಲ್​ಗಳು ಬಂದಿರುವ ಪ್ರಕರಣ ಇವೆ. ಕೆಲವು ಬಾರಿ ಶಾಲೆಗಳು, ಹೋಟೆಲ್‌ಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆಗಳು ಬರುತ್ತಿದ್ದು, ಪೊಲೀಸರು ಹೆಚ್ಚು ಅಲರ್ಟ್ ಆಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 4:35 pm, Wed, 18 September 24

ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ