ಬೆಂಗಳೂರು (ಸೆಪ್ಟೆಂಬರ್.18): ಬೆಂಗಳೂರಿನ ಅಶೋಕ್ ನಗರದಲ್ಲಿರುವ ಸೈನಿಕ ಶಾಲೆಗೆ ಇಂದು (ಸೆ.18) ಬಾಂಬ್ ಬೆದರಿಕೆ ಕರೆ ಬಂದಿದ್ದು, ಶಾಲೆಗೆ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಇ-ಮೇಲ್ ಮೂಲಕ ಸಂದೇಶ ರವಾನಿಸಲಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಆದ್ರೆ, ಯಾವುದೇ ಬಾಂಬ್ ಪತ್ತೆಯಾಗಿಲ್ಲ. ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಂದು (ಬುಧವಾರ) ಆಶೋಕ ನಗರದ ಆರ್ಮಿ ಸ್ಕೂಲ್ ಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಬಾಂಬ್ ಇಟ್ಟು ಬ್ಲಾಸ್ಟ್ ಮಾಡುವುದಾಗಿ ಇಮೇಲ್‌ನಲ್ಲಿ ಬರೆಯಲಾಗಿದೆ. ಶಾಲೆಯ ಇ ಮೇಲ್ ಖಾತೆಗೆ ಬೆದರಿಕೆ ಮೇಲ್ ಬಂದಿದ್ದು, ಇದನ್ನು ನೋಡಿದ ಸಿಬ್ಬಂದಿ ಕೂಡಲೇ ಕ ಆಶೋಕ ನಗರ ಪೊಲೀಸ್ ಠಾಣೆ ಗೆ ಮಾಹಿತಿ ನೀಡಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಬಾಂಬ್ ನಿಷ್ಕ್ರೀಯ ದಳ, ಶ್ವಾನ ದಳ ಸಮೇತ ಶಾಲೆಗೆ ತೆರಳಿ ಪರಿಶೀಲನೆ ಮಾಡಿದ್ದಾರೆ. ಆದರೆ, ಪರಿಶೀಲನೆ ವೇಳೆ ಯಾವುದೇ ಬಾಂಬ್ ಪತ್ತೆಯಾಗಿಲ್ಲ.
ಇದೊಂದು ಸುಳ್ಳು ಬೆದರಿಕೆ ಇ ಮೇಲ್ ಎಂಬುದು ಬೆಳಕಿಗೆ ಬಂದಿದೆ. ಇ ಮೇಲ್ ಬೆದರಿಕೆ ಸಂಬಂಧಿಸಿದಂತೆ ಆಶೋಕ್ ನಗರ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ. ಇದೇನು ಮೊದಲಲ್ಲ. ಈ ಹಿಂದೆ ನಗರದ ಹಲವು ಶಾಲೆಗಳಿಗೆ ಬಾಂಬ್ ಇಟ್ಟಿರುವ ಬೆದರಿಕೆ ಇಮೇಲ್ಗಳು ಬಂದಿರುವ ಪ್ರಕರಣ ಇವೆ. ಕೆಲವು ಬಾರಿ ಶಾಲೆಗಳು, ಹೋಟೆಲ್‌ಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆಗಳು ಬರುತ್ತಿದ್ದು, ಪೊಲೀಸರು ಹೆಚ್ಚು ಅಲರ್ಟ್ ಆಗಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:35 pm, Wed, 18 September 24