AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗಡಿಗೆ ತೆರಳುತ್ತಿದ್ದ ಯುವತಿಗೆ ಲೈಂಗಿಕ ದೌರ್ಜನ್ಯ: ಸಾಲದಕ್ಕೆ ಮನೆ ಬಳಿ ಹೋಗಿ ಗಲಾಟೆ

ದಿನಸಿ ಖರೀದಿಸಲು ಹೋಗುತ್ತಿದ್ದ ಯುವತಿಯ ಮೇಲೆ ಐದಾರು ಯುವಕರು ಲೈಂಗಿಕ ದೌರ್ಜನ್ಯ ಮತ್ತು ಹಲ್ಲೆ ನಡೆಸಿದ್ದಾರೆ. ಯುವತಿಯನ್ನು ರಕ್ಷಿಸಲು ಸ್ಥಳೀಯರು ನೆರವಿಗೆ ಧಾವಿಸಿದ್ದಾರೆ. ಹಲ್ಲೆಗೀಡಾದ ಯುವತಿ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಘಟನೆ ಸಂಬಂಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ರಾಮು, ಆನೇಕಲ್​
| Edited By: ವಿವೇಕ ಬಿರಾದಾರ|

Updated on:Jun 23, 2025 | 4:48 PM

Share

ಆನೇಕಲ್, ಜೂನ್​ 23: ದಿನಸಿ ತರಲು ಅಂಗಡಿಗೆ ತೆರಳುತ್ತಿದ್ದ ಯುವತಿಯ ಮೈ ಕೈ ಮುಟ್ಟಿ ಲೈಂಗಿಕ ದೌರ್ಜನ್ಯ ನೀಡಿದ್ದಲ್ಲದೇ, ಆಕೆಯ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರು (Bengaluru) ನಗರ ಜಿಲ್ಲೆಯ ಆನೇಕಲ್ (Anekal) ತಾಲೂಕಿನ ಮೈಲಸಂದ್ರ ಬಳಿಯ ರೇಣುಕಾ ಯಲ್ಲಮ್ಮ ಬಡಾವಣೆಯಲ್ಲಿ ನಡೆದಿದೆ.

ರೇಣುಕಾ ಯಲ್ಲಮ್ಮ ಬಡಾವಣೆ ನಿವಾಸಿಯಾಗಿರುವ ಯುವತಿ ರವಿವಾರ (ಜೂ. 23) ಸಂಜೆ 4 ಗಂಟೆ ಸುಮಾರಿಗೆ ದಿನಸಿ ತರಲು ಅಂಗಡಿಗೆ ಹೊರಟಿದ್ದಳು. ಈ ವೇಳೆ ಐದಾರು ಜನರು ಯುವಕರು ನಡುರಸ್ತೆಯಲ್ಲಿ ಯುವತಿಯನ್ನು ಅಡ್ಡ ಹಾಕಿದ್ದಾರೆ. ಬಳಿಕ, ಓರ್ವ ಯುವಕ ಯುವತಿಯ ಮೈಕೈ ಮುಟ್ಟಿ ಎಳೆದಾಡಿದ್ದಾರೆ. ಇದಕ್ಕೆ ಯುವತಿ ಪ್ರತಿರೋಧ ತೋರಿದ್ದಾಳೆ. ಆಗ, ಓರ್ವ ಯುವಕ ಯುವತಿ ಮೇಲೆ ಹಲ್ಲೆ ಮಾಡಿದ್ದಾನೆ.

ಈ ವೇಳೆ ಸ್ಥಳೀಯರು ಯುವತಿಯ ನೆರವಿಗೆ ಧಾವಿಸಿದ್ದಾರೆ. ನೆರವಿಗೆ ಧಾವಿಸಿದ ಸ್ಥಳೀಯರ ಮೇಲೂ ಯುವಕರು ಹಲ್ಲೆ ಮಾಡಿದ್ದಾರೆ. ಯುವತಿಯನ್ನು ಬಚಾವ್​ ಮಾಡಿ ಸ್ಥಳೀಯರು ಮನೆ ಬಳಿ ಕರೆದುಕೊಂಡು ಬಂದರೂ ಬಿಡದ ಯುವಕರು, ಆಕೆಯ ಮನೆ ಬಳಿ ಬಂದು ಗಲಾಟೆ ಮಾಡಿದ್ದಾರೆ. ಯುವತಿ ಮೇಲೆ ಹಲ್ಲೆ ಮಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬನ್ನೇರುಘಟ್ಟ ‌ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ
Image
ತನ್ನ ಪ್ರೇಯಸಿಯ ಮಗಳ ಮೇಲೆ ಅತ್ಯಾಚಾರ ಮಾಡಿದ ವ್ಯಕ್ತಿ
Image
ಪ್ರೀತಿಸಿದ ಯುವತಿ‌‌ಯಿಂದ ಕಿರುಕುಳ: ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆ
Image
ಪ್ರೀತಿಯ ನಾಟಕ, ಅಶ್ಲೀಲ ವಿಡಿಯೋ: ಆಂಧ್ರದ ಮಹಿಳೆಯ ವಂಚಿಸಿದವ ಅರೆಸ್ಟ್
Image
ವಿಚ್ಛೇದಿತ ಮಹಿಳೆಯನ್ನ ಬಲೆಗೆ ಬೀಳಿಸಿಕೊಂಡು ದೋಖಾ: ಆರೋಪಿ ಅರೆಸ್ಟ್

ಯುವತಿ ಹೇಳಿದ್ದೇನು?

ಪ್ರಕರಣ ಸಂಬಂಧ ಸಂತ್ರಸ್ತ ಯುವತಿ ಮಾತನಾಡಿ, ನಾನು (ಯುವತಿ) ಅಂಗಡಿ ಹೋಗುವ ಸಂದರ್ಭದಲ್ಲಿ ಯುವಕರು ರಸ್ತೆಯಲ್ಲಿ ಗಲಾಟೆ ಮಾಡುತ್ತಿದ್ದರು. ಎಲ್ಲರೂ ಕುಡಿದಿದ್ದರು, ಗಾಂಜಾ ಹೊಡೆದಿದ್ದರು.  ಆಗ, ಅವರು ನನ್ನ ಅಡ್ಡಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಹೊಡೆಯಲು ಮತ್ತು ಮುಟ್ಟಲು ಬಂದರು. ಈ ವೇಳೆ ಸ್ಥಳೀಯರು ನನ್ನ ರಕ್ಷಿಸಿದರು ಎಂದು ಹೇಳಿದರು.

ಸ್ಥಳೀಯರು ಯುವಕರಿಗೆ ಹೊಡೆದರು. ನಾನೂ ಕೂಡ ಯುವಕರಿಗೆ ಹೊಡೆದೆ. ಸಾರ್ವಜನಿಕರಿಗೂ ಯುವಕರು ಹೊಡೆದರು. ಅಲ್ಲದೇ, ನನ್ನ ಮನೆ ಗೇಟ್​ ಎಗರಿ ಒಳ ನುಗ್ಗಿದರು. ಏಳೆಂಟು ಜನ ಯುವಕರಿದ್ದರು. ಯುವಕರು ನಮ್ಮ ಮನೆ ಹಿಂದುಗಡೆ ವಾಸವಾಗಿದ್ದಾರಂತೆ. ಕಳೆದ ಒಂದು ವಾರದಿಂದ ಈ ಬಡವಾಣೆಯಲ್ಲಿ ವಾಸಿಸುತ್ತಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ಬೆಂಗಳೂರಲ್ಲಿ ಡ್ಯಾನ್ಸ್ ಕಾರ್ಯಕ್ರಮದ ಹೆಸರಲ್ಲಿ ವಂಚನೆ: ಸಾವಿರಾರು ರೂ ಪಡೆದು ಅವಕಾಶ ನೀಡಿದ ಮಹಿಳೆ

ಹಲ್ಲೆ ಮತ್ತು ದೌರ್ಜನ್ಯ ನಡೆಸಿದ ಯುವಕರು ಯಾರೆಂದು ಗೊತ್ತಿಲ್ಲ. ಈ ಸಂಬಂಧ ಬನ್ನೇರುಘಟ್ಟ ‌ಪೊಲೀಸ್ ಠಾಣೆಗೆ ನಾನು ದೂರು ನೀಡಿದ್ದೇನೆ. ನಾನು ನೀಡಿದ ದೂರು ಆಧರಿಸಿ ಎಫ್‌ಐಆರ್ ದಾಖಲಿಸಲಾಗಿದೆ. ವಾರದ ಹಿಂದೆ ರೇಣುಕಾ ಯಲ್ಲಮ್ಮ ಬಡಾವಣೆ ಮನೆಗೆ ಶಿಫ್ಟ್‌ ಆಗಿದ್ದೆವು ರೇಣುಕಾ ಯಲ್ಲಮ್ಮ ಬಡಾವಣೆಯಲ್ಲಿ ಮಕ್ಕಳ ಜೊತೆ ವಾಸವಿದ್ದೇನೆ ಎಂದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:44 pm, Mon, 23 June 25

Follow Us
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ