AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕನ್ನಡದಲ್ಲಿ ಮಾತನಾಡು ಎಂದಿದ್ದಕ್ಕೆ ಹಿಂದಿ ಭಾಷಿಕನಿಂದ ಕನ್ನಡಿಗನ ಮೇಲೆ ಹಲ್ಲೆ

ಜನವರಿ‌ 31 ರಂದು ಭುವನೇಶ್ವರಿ ನಗರದಲ್ಲಿರುವ ತಾಜಾ ಜ್ಯೂಸ್ ಶಾಪ್​ಗೆ ತೆರಳಿದ್ದ ದೀಪಕ್ ಎನ್ನುವ ಯುವಕ, ಬಿಹಾರ್ ಮೂಲದ ಶಬ್ಬೀರ್​ ಎಂಬಾತನಿಗೆ ಕನ್ನಡದಲ್ಲಿ ಮಾತನಾಡು ಎಂದು ಹೇಳಿದ್ದಾನೆ. ಇದೇ ಕಾರಣಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಆತನ ಮೇಲೆ ಹಲ್ಲೆ ಮಾಡಿದ್ದಾನೆ.

ಬೆಂಗಳೂರು: ಕನ್ನಡದಲ್ಲಿ ಮಾತನಾಡು ಎಂದಿದ್ದಕ್ಕೆ ಹಿಂದಿ ಭಾಷಿಕನಿಂದ ಕನ್ನಡಿಗನ ಮೇಲೆ ಹಲ್ಲೆ
ಹಲ್ಲೆ ಮಾಡಿದ ಯುವಕ
TV9 Web
| Edited By: |

Updated on:Feb 06, 2023 | 3:50 PM

Share

ಬೆಂಗಳೂರು: ಕನ್ನಡದಲ್ಲಿ ಮಾತನಾಡಲು ಹೇಳಿದಕ್ಕೆ ಬಿಹಾರ್ ಮೂಲದ ಯುವಕ ಶಬ್ಬೀರ್ ಎಂಬಾತ ದೀಪಕ್​ ಎನ್ನುವವರಿಗೆ ಪೆಪ್ಸಿ ಬಾಟಲಿನಿಂದ ತಲೆಗೆ ಹೊಡೆದು ಹಲ್ಲೆ ಮಾಡಿರುವ ಘಟನೆ ಜನವರಿ‌ 31 ರಂದು ಚೆನ್ನಮ್ಮನ ಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿರುವ ತಾಜಾ ಜ್ಯೂಸ್ ಶಾಪ್​ನಲ್ಲಿ ನಡೆದಿದೆ. ರಾತ್ರಿ 7:30 ರ ಸುಮಾರಿಗೆ ಐಸ್ ಕ್ರೀಂ ತಿನ್ನಲು ದೀಪಕ್ ಅಂಗಡಿಗೆ ಹೋಗಿದ್ದಾನೆ. ನಂತರ ಐಸ್ ಕ್ರೀಂ ಗೆ ಹಣ ಎಷ್ಟು ಅಂತ ಕೇಳಿದ್ದಾನೆ. ಯುವಕ ಶಬ್ಬೀರ್ ಹಿಂದಿಯಲ್ಲಿ ಐಸ್ ಕ್ರೀಂ ಬೆಲೆ ತಿಳಿಸಿದ್ದು, ಆದರೆ ದೀಪಕ್​ಗೆ ಹಿಂದಿ ಬರದ ಕಾರಣ ಕನ್ನಡದಲ್ಲಿ ಹೇಳಪ್ಪ ಎಂದು ಹೇಳಿದ್ದಾನೆ.

ಈ ವೇಳೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಜ್ಯೂಸ್ ಅಂಗಡಿಯ ಯುವಕ ಶಬ್ಬೀರ್, ದೀಪಕ್​ನೊಂದಿಗೆ ಗಲಾಟೆ ಮಾಡಿದ್ದಾನೆ. ನಂತರ ದೀಪಕ್ ಮುಖಕ್ಕೆ ಪೆಪ್ಸಿ ಬಾಟಲಿನಿಂದ ಹಲ್ಲೆ ನಡೆಸಿದ್ದು, ಹಲ್ಲೆಯಿಂದ ಪ್ರಜ್ಞೆ ತಪ್ಪಿದ್ದ ದೀಪಕ್ ನನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಸದ್ಯ ಘಟನೆ ಸಂಬಂಧ ಚೆನ್ನಮ್ಮನ ಕೆರೆ ಪೊಲೀಸ್ ಠಾಣೆಗೆ ದೂರು ನೀಡಿರುವ ದೀಪಕ್ ಪೋಷಕರು, ಹಲ್ಲೆ ನಡೆಸಿದ್ದ ಆರೋಪಿಯನ್ನ ವಶಕ್ಕೆ ಪಡೆದಿದ್ದಾರೆ.

ತೆಂಗಿನ ಮರದಲ್ಲಿ ಪ್ರಜ್ಞೆ ತಪ್ಪಿ ಸಿಲುಕಿದ್ದವನ ರಕ್ಷಣೆ

ಬೆಂಗಳೂರು: ಮರ ಹತ್ತಿದ್ದ ಬಳಿಕ ಪ್ರಜ್ಞೆ ತಪ್ಪಿ ಮರದಲ್ಲಿ ಸಿಲುಕಿದ್ದ ಅಪರಿಚಿತ ವ್ಯಕ್ತಿಯನ್ನ ರಕ್ಷಣೆ ಮಾಡಿದ ಘಟನೆ ಮೈಲಸಂದ್ರ ಬಳಿ ನಡೆದಿದೆ. ಮಾನಸಿಕ ಅಸ್ವಸ್ಥನಂತೆ ಕಾಣುತ್ತಿರುವ ವ್ಯಕ್ತಿ ಮರದಲ್ಲಿ ಸಿಕ್ಕಿಬಿದ್ದಿದ್ದಾನೆ. ಇದನ್ನು ನೋಡಿದ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಸಿವಿಲ್ ಡಿಫೆನ್ಸ್ ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕಾಗಮಿಸಿ, ಮೂವತ್ತು ನಿಮಿಷಗಳ ಕಾಲ ಕಾರ್ಯಾಚರಣೆ ನಡೆಸಿ ವ್ಯಕ್ತಿಯನ್ನ ರಕ್ಷಣೆ ಮಾಡಿದ್ದಾರೆ. ಸದ್ಯ ಪ್ರಜ್ಞೆ ಕಳೆದುಕೊಡ ವ್ಯಕ್ತಿಯನ್ನ ಆಸ್ಪತ್ರೆಗೆ ದಾಖಲಿಸಲಾಗಿಸದ್ದು, ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:48 pm, Mon, 6 February 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು