AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ತಿಬೆಲೆ ಪಟಾಕಿ ಅಗ್ನಿ ದುರಂತ ಪ್ರಕರಣ: ಗಾಯಗೊಂಡಿದ್ದ ಮತ್ತೋರ್ವ ಯುವಕ ಸಾವು, ಮೃತರ ಸಂಖ್ಯೆ 17ಕ್ಕೆ ಏರಿಕೆ

Attibele Fire incident : ಬೆಂಗಳೂರು ನಗರ ಜಿಲ್ಲೆಯ ಆನೇಕಲ್ (Anekal) ತಾಲೂಕಿನ ಅತ್ತಿಬೆಲೆಯಲ್ಲಿ (Attibele) ಪಟಾಕಿ ಗೋದಾಮಿನಲ್ಲಿ ಸಂಭವಿಸಿದ್ದ ಅಗ್ನಿ ದುರಂತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಯುವಕ ಮೃತಪಟ್ಟಿದ್ದಾನೆ. ಇದರೊಂದಿಗೆ ಸಾವಿನ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಇನ್ನು ಗಾಯಗೊಂಡವರ ಪೈಕಿ ಇಬ್ಬರು ಸಾವನ್ನಪ್ಪಿದ್ದು, ಇನೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅತ್ತಿಬೆಲೆ ಪಟಾಕಿ ಅಗ್ನಿ ದುರಂತ ಪ್ರಕರಣ: ಗಾಯಗೊಂಡಿದ್ದ ಮತ್ತೋರ್ವ ಯುವಕ ಸಾವು, ಮೃತರ ಸಂಖ್ಯೆ 17ಕ್ಕೆ ಏರಿಕೆ
ಅತ್ತಿಬೆಲೆ ಅಗ್ನಿ ದುರಂತ
ರಾಮು, ಆನೇಕಲ್​
| Edited By: |

Updated on: Oct 18, 2023 | 10:33 AM

Share

ಬೆಂಗಳೂರು, (ಅಕ್ಟೋಬರ್ 18): ಅತ್ತಿಬೆಲೆ ಪಟಾಕಿ ಅಗ್ನಿ ದುರಂತದಲ್ಲಿ(attibele fire incident) ಗಾಯಗೊಂಡಿದ್ದ ಮತ್ತೋರ್ವ ಯುವಕ ಸಾವನ್ನಪ್ಪಿದ್ದಾನೆ.  ರಾಜೇಶ್ ಎನ್ನುವ ಯುವಕ ಚಿಕಿತ್ಸೆ ಫಲಕಾರಿಯಾಗದೇ ಇಂದು (ಅಕ್ಟೋಬರ್ 18) ಬೆಂಗಳೂರಿನ (Bengaluru) ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಇದರೊಂದಿಗೆ ಸಾವಿನ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

ಇದೇ ಅಕ್ಟೋಬರ್ 07ರಂದು ಬೆಂಗಳೂರಿನ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಅಗ್ನಿ ದುರಂತ ಸಂಭವಿಸಿತ್ತು. ಪರಿಣಾಯಮ ಅಂದೇ 15 ಜನ ಸಜೀವ ದಹನವಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳ ಪೈಕಿ ಈಗಾಗಲೇ ವೆಂಕಟೇಶ್ ಎನ್ನುವಾತ ಮೃತಪಟ್ಟಿದ್ದ. ಇಂದು ಇನ್ನೋರ್ವ ಯುವಕ ರಾಜೇಶ್ ಸಾವನ್ನಪ್ಪಿದ್ದಾನೆ. ಈ ಮೂಲಕ ಗಾಯಗೊಂಡವರಲ್ಲಿ ಇಬ್ಬರು ಮೃತಪಟ್ಟಿದ್ದು, ಇನ್ನೋರ್ವ ಗಾಯಾಳು ಅಂಗಡಿ ಮಾಲೀಕ ನವೀನ್ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ:  ಅತ್ತಿಬೆಲೆ ಅಗ್ನಿ ದುರಂತ ಪ್ರಕರಣ: ಮ್ಯಾಜಿಸ್ಟೀರಿಯಲ್ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಈ ಅತ್ತಿಬೆಲೆ ಪಟಾಕಿ ದುರಂತ ಪ್ರಕರಣಕ್ಕೆ ಸಬಂಧಿಸಿದಂತೆ ಈಗಾಗಲೇ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಆನೇಕಲ್ ತಾಲೂಕಿನ ಹಿಂದಿನ ತಹಶೀಲ್ದಾರ್ ಶಶಿಧರ್ ಮಾಡ್ಯಾಳ್, ಉಪ ತಹಶೀಲ್ದಾರ್ ಶ್ರೀಧರ್, ರಾಜಸ್ವ ನಿರೀಕ್ಷಕ ಅತ್ತಿಬೆಲೆ, ಗ್ರಾಮ ಆಡಳಿತಾಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಕೃತ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಇಲಾಖಾ ತನಿಖೆಗೆ ಆದೇಶಿಸಲಾಗಿದೆ.

ಅಲ್ಲದೇ ಅತ್ತಿಬೆಲೆ ಪಟಾಕಿ ಗೋದಾಮಿಯಲ್ಲಿ ಅಗ್ನಿ ದುರಂತ ಪ್ರಕರಣವನ್ನು ಮ್ಯಾಜಿಸ್ಟೀರಿಯಲ್ ತನಿಖೆ ನಡೆಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಲ್ಲದೆ, ವಿಚಾರಣಾಧಿಕಾರಿಯನ್ನಾಗಿ ಹಿರಿಯ ಐಎಎಸ್ ಅಧಿಕಾರಿ, ಬೆಂಗಳೂರು ಪ್ರಾದೇಶಿಕ ಆಯುಕ್ತ ಅಮಲಾನ್​ ಆದಿತ್ಯಾ ಬಿಸ್ವಾಸ್ ಅವರನ್ನು ನೇಮಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ramu Ram
Ramu Ram

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು