ಬೆಂಗಳೂರು: ಬಳೇಪೇಟೆ ರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನ ಹತ್ಯೆ

ಆಟೋ ಚಾಲಕ ಸುರೇಶ್ ಹಲವು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದ. ನಿನ್ನೆ ಗೆಳೆಯರ ಜೊತೆ ಕುಳಿತು ಎಣ್ಣೆ ಪಾರ್ಟಿ ಮಾಡುತಿದ್ದ. ಈ ವೇಳೆ ಶುರುವಾದ ಗಲಾಟೆಯಲ್ಲಿ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಇಂದು ಗುರುವಾರ ಬೆಳಗ್ಗೆ ೮ ಗಂಟೆ ಸುಮಾರಿಗೆ ಕೃತ್ಯ ಬಯಲಾಗಿದೆ.

ಬೆಂಗಳೂರು: ಬಳೇಪೇಟೆ ರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನ ಹತ್ಯೆ
ಸಾಂದರ್ಭಿಕ ಚಿತ್ರ
Edited By: ಸಾಧು ಶ್ರೀನಾಥ್​

Updated on: Sep 07, 2023 | 11:08 AM

ರಾಜಧಾನಿ ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕ (Bengaluru Auto driver) ಸುರೇಶ್ ಎಂಬಾತನನ್ನು ಹತ್ಯೆ (Murder) ಮಾಡಲಾಗಿದೆ. ಬಳೇಪೇಟೆ ರಸ್ತೆಯ (Balepet) ರಾಜ್ ಕುಮಾರ್ ಪ್ರತಿಮೆ ಬಳಿ ಬುಧವಾರ ರಾತ್ರಿ ಘಟನೆ ನಡೆದಿದ್ದು, ದುಷ್ಕರ್ಮಿಗಳು ಕುಡಿದ ಅಮಲಿನಲ್ಲಿ ಸುರೇಶ್​​ ಹತ್ಯೆಗೈದಿದ್ದಾರೆ. ಸುರೇಶ್ ತುಮಕೂರು ಜಿಲ್ಲೆ ಹುಲಿಯೂರುದುರ್ಗ ಮೂಲದವರು. ಸ್ಥಳಕ್ಕೆ ಉಪ್ಪಾರಪೇಟೆ ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ ( Bangalore Police).

ಆಟೋ ಚಾಲಕ ಸುರೇಶ್ ಹಲವು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದ. ನಿನ್ನೆ ಗೆಳೆಯರ ಜೊತೆ ಕುಳಿತು ಎಣ್ಣೆ ಪಾರ್ಟಿ ಮಾಡುತಿದ್ದ. ಈ ವೇಳೆ ಶುರುವಾದ ಗಲಾಟೆಯಲ್ಲಿ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಇಂದು ಬೆಳಗ್ಗೆ ೮ ಗಂಟೆ ಸುಮಾರಿಗೆ ಕೃತ್ಯ ಬಯಲಾಗಿದೆ.

ಹಾಸನ ಜಿಲ್ಲೆ ಕಂತೇನಹಳ್ಳಿಯಲ್ಲಿ ಕುಡಿದ ಮತ್ತಿನಲ್ಲಿ ಇಬ್ಬರಿಗೆ ಚಾಕು ಇರಿತ:

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಕಂತೆನಹಳ್ಳಿಯಲ್ಲಿ ಕುಡಿದ ಮತ್ತಿನಲ್ಲಿ ಇಬ್ಬರಿಗೆ ಚಾಕು ಇರಿಯಲಾಗಿದೆ. ಮೂವರು ಸ್ನೇಹಿತರು ಮದ್ಯಪಾನ ಪಾರ್ಟಿ ಮಾಡಲು ಹೋಗಿದ್ದರು. ಪಾರ್ಟಿ ಮಾಡುತ್ತಿದ್ದ ವೇಳೆ ಸ್ನೇಹಿತನಿಂದಲೇ ಚಾಕು ಇರಿತ ಘಟನೆ ನಡೆದಿದೆ. ಗಾಯಗೊಂಡ ಇಬ್ಬರಿಗೆ ಹಾಸನದ ಹಿಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More
Loading...
Unable to load recommendations.
Follow Us