ಪ್ರಯಾಣಿಕರ ಗಮನಕ್ಕೆ: ಮಾ.20ರಂದು ಬೆಂಗಳೂರಲ್ಲಿ ಆಟೋ ಸಂಚಾರ ಸಂಪೂರ್ಣ ಬಂದ್
Bengaluru Auto Drivers Strike: ರ್ಯಾಪಿಡೋ ಬೈಕ್ ಟ್ಯಾಕ್ಸಿಯನ್ನು ನಿಷೇಧಿಸುವಂತೆ ಬೆಂಗಳೂರಿನ 21 ಆಟೋ ಚಾಲಕರ ಸಂಘಟನೆಗಳು ರಾಜ್ಯ ಸರ್ಕಾರಕ್ಕೆ ಎರಡು ದಿನಗಳ ಗಡುವು ನೀಡಿವೆ. ಅಲ್ಲದೆ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಮನೆಗೆ ಮುತ್ತಿಗೆ ಹಾಕಲು ನಿರ್ಧರಿಸಿವೆ.
ಬೆಂಗಳೂರು: ರಾಜಧಾನಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ರ್ಯಾಪಿಡೋ ಬೈಕ್ ಟ್ಯಾಕ್ಸಿಯನ್ನು (Rapido bike taxi) ನಿಷೇಧಿಸಿ ಎಂದು ಆಟೋ ಚಾಲಕರು (Auto Drivers) ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುತ್ತಲೇ ಇದ್ದಾರೆ. ಈಗ ಮತ್ತೆ ರ್ಯಾಪಿಡೋ ಬೈಕ್ ಟ್ಯಾಕ್ಸಿಯನ್ನು ನಿಷೇಧಿಸುವಂತೆ ನಗರದ 21 ಆಟೋ ಚಾಲಕರ ಸಂಘಟನೆಗಳು ರಾಜ್ಯ ಸರ್ಕಾರಕ್ಕೆ (Karnataka Government) ಒತ್ತಾಯ ಮಾಡಿವೆ. ಈ ಹಿನ್ನಲೆ ಸೋಮವಾರ (ಮಾ.20) ರಂದು ಬೆಂಗಳೂರಲ್ಲಿ ಆಟೋ ಸಂಚಾರವನ್ನು ಸಂಪೂರ್ಣ ಬಂದ್ ಮಾಡಲು ನಿರ್ಧರಿಸಿದೆ ಎಂದು ಆದರ್ಶ ಆಟೋ ಯೂನಿಯನ್ ಅಧ್ಯಕ್ಷ ಮಂಜುನಾಥ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆದರ್ಶ ಆಟೋ ಯೂನಿಯನ್ ಅಧ್ಯಕ್ಷ ಮಂಜುನಾಥ್ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದ್ದನ್ನು ಖಂಡಿಸಿ ಪ್ರತಿಭಟನೆ ಮಾಡಲು ನಿರ್ಧರಿಸಿದ್ದೇವೆ. ಸಾರಿಗೆ ಇಲಾಖೆ ಓಲಾ, ಉಬರ್ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದೆ. ಇದರಿಂದ ಆಟೋ ಚಾಲಕರ ಆದಾಯಕ್ಕೆ ಹೊಡೆತ ಬಿದ್ದಿದೆ. ಕೂಡಲೇ ಱಪಿಡೋ ಬೈಕ್ ಟ್ಯಾಕ್ಸಿ ಅನುಮತಿ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ವೈಟ್‌ಫೀಲ್ಡ್-ಕೆಆರ್ ಪುರಂ ಮೆಟ್ರೋ ಮಾರ್ಗ ಮಾರ್ಚ್ 25 ರಂದು ಉದ್ಘಾಟನೆ ಸಾಧ್ಯತೆ
ಬೆಂಗಳೂರಲ್ಲಿ 21 ಆಟೋ ಚಾಲಕರ ಸಂಘಟನೆಗಳಿಂದ, ನಾಳೆ (ಮಾ.16) ರಿಂದ ಆಟೋಗಳಲ್ಲಿ ಕಪ್ಪು ಬಾವುಟ ಕಟ್ಟಿಕೊಂಡು ಪ್ರತಿಭಟನೆ ಮಾಡುತ್ತೇವೆ. 2 ದಿನಗಳ ಕಾಲ ಪ್ರತಿಭಟನೆ ಮೂಲಕ ಸರ್ಕಾರಕ್ಕೆ ಗಡುವು ನೀಡುತ್ತೇವೆ. ಸೋಮವಾರ ನಗರದಲ್ಲಿ ಸಾರ್ವಜನಿಕರಿಗೆ ಆಟೋ ಸೇವೆ ಇರಲ್ಲ. ಅಂದು ಪ್ರತಿಭಟನೆ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಮನಗೆ ಮುತ್ತಿಗೆ ಹಾಕುತ್ತೇವೆ. ಸೋಮವಾರ ಪ್ರತಿಭಟನೆ ವೇಳೆ 2.10 ಲಕ್ಷ ಆಟೋಗಳ ಸಂಚಾರ ಬಂದ್ ಆಗುತ್ತೆ ಎಂದು ತಿಳಿಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:28 pm, Wed, 15 March 23