Bengaluru auto price: ಬೆಂಗಳೂರಿನಲ್ಲಿ ಆಟೋ ಪ್ರಯಾಣ ದರ ಏರಿಕೆ ಖಚಿತ, ಮೇ 13ಕ್ಕೆ ಆದೇಶ ಸಾಧ್ಯತೆ

ಬೆಂಗಳೂರು ಆಟೋ ದರ ಏರಿಕೆ: ದುಬಾರಿ ದುನಿಯಾದಲ್ಲಿ ಬೆಂಗಳೂರಿಗರಿಗೆ ಮತ್ತೊಂದು ಬೆಲೆ ಏರಿಕೆ ಬಿಸಿ ತಟ್ಟಲಿದೆ. ಆಟೋ ದರ ಏರಿಕೆ ಮಾಡಲು ಜಿಲ್ಲಾಡಳಿತ ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಇನ್ನು ಅಧಿಕೃತ ಆದೇಶ ಹೊರ ಬೀಳುವುದು ಮಾತ್ರ ಬಾಕಿ ಇದೆ. ಮೇ 13 ರಂದು ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆಯಿದೆ.

Bengaluru auto price: ಬೆಂಗಳೂರಿನಲ್ಲಿ ಆಟೋ ಪ್ರಯಾಣ ದರ ಏರಿಕೆ ಖಚಿತ, ಮೇ 13ಕ್ಕೆ ಆದೇಶ ಸಾಧ್ಯತೆ
ಸಾಂದರ್ಭಿಕ ಚಿತ್ರ
Updated By: Ganapathi Sharma

Updated on: May 01, 2025 | 7:24 AM

ಬೆಂಗಳೂರು, ಮೇ 1: ಬೆಂಗಳೂರು (Bengaluru) ನಗರದಲ್ಲಿ ಆಟೋ ಮೀಟರ್ ದರ ಏರಿಕೆ (Auto Fare Hike) ಮಾಡುವಂತೆ ಕಳೆದ ಮೂರು ವರ್ಷಗಳಿಂದ ಆಟೋ ಚಾಲಕ ಹಾಗೂ ಮಾಲೀಕರ ಸಂಘಟನೆಗಳು ನಿರಂತರ ಹೋರಾಟ ಮಾಡುತ್ತಾ ಬಂದಿತ್ತು. ಇದೀಗ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ ಆಟೋ ಚಾಲಕರ ಮನವಿಯನ್ನು ಪುರಸ್ಕರಿಸಿ, ಆಟೋ ದರ ಏರಿಕೆ ಮಾಡಲು ಮನಸ್ಸು ಮಾಡಿದೆ. ಅಧಿಕೃತ ಆದೇಶ ಹೊರಬೀಳುವುದಷ್ಟೇ ಬಾಕಿ ಎಂಬ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ.

ಈಗಾಗಲೇ ಅನೇಕ ಅಗತ್ಯ ವಸ್ತುಗಳ ದರ ಏರಿಕೆ ಆಗಿದೆ. ಹೀಗಾಗಿ ಆಟೋ ಮೀಟರ್ ದರ ಏರಿಕೆ ಮಾಡಲು ಜಿಲ್ಲಾಧಿಕಾರಿ ಕೂಡಲೇ ಗ್ರೀನ್ ಸಿಗ್ನಲ್ ನೀಡಬೇಕು ಎಂದು ಆಟೋ ಚಾಲಕರು ಆಗ್ರಹಿಸಿದ್ದಾರೆ.

ಈಗೆಷ್ಟಿದೆ ಆಟೋ ಪ್ರಯಾಣ ದರ?

ಸದ್ಯ ಬೆಂಗಳೂರಿನಲ್ಲಿ ಕನಿಷ್ಠ ದರ 30 ರೂಪಾಯಿ ಹಾಗೂ ನಂತರ ಪ್ರತಿ ಕಿಲೋ ಮೀಟರ್ ಗೆ 15 ರೂಪಾಯಿ ದರ ಇದೆ. ಇದೀಗ ಪರಿಷ್ಕೃತ ದರ ಪಟ್ಟಿ ಪ್ರಕಾರ ಕನಿಷ್ಠ ದರ 30 ರಿಂದ 35 ರೂಪಾಯಿಗೆ, ಅಂದರೆ ಐದು ರೂಪಾಯಿ ಏರಿಕೆಯಾಗುವ ಸಾಧ್ಯತೆಯಿದೆ. ನಂತರದ ಪ್ರತಿ ಕಿಲೋ ಮೀಟರ್​ ದರ 15 ರಿಂದ 18 ರೂಪಾಯಿಗೆ, ಅಂದರೆ ಮೂರು ರೂಪಾಯಿ ಏರಿಕೆ ಆಗಲಿದೆ.

ಇದನ್ನೂ ಓದಿ
ಮುಸ್ಲಿಂ ವ್ಯಕ್ತಿ ಹತ್ಯೆಯ ಕಾರಣ ನಿಗೂಢ: ಬೂದಿಮುಚ್ಚಿದ ಕೆಂಡವಾದ ಕರಾವಳಿ..!
ಕ್ರಿಕೆಟ್ ಪಂದ್ಯದ ವೇಳೆ ಪಾಕಿಸ್ತಾನ್ ಜಿಂದಾಬಾದ್ಎಂದಿದ್ದಕ್ಕೆ ನಡೀತಾ ಕೊಲೆ?
ಬೇರೆ ಜಾತಿ ಹುಡುಗನ ಪ್ರೀತಿಸಿದ್ದಕ್ಕೆ ಮಗಳ ಕೊಲೆ ಮಾಡಿ ನದಿಗೆ ಎಸೆದ ತಂದೆ
ಇನ್ಸ್ಟಾಗ್ರಾಮ್​ನಲ್ಲಿ ರಾಯಚೂರು-ಚಾಮರಾಜನಗರ ನಂಟು: ಯುವತಿ ಕೊರಳಿಗೆ 3 ಗಂಟು!

ಆಟೋ ಮೀಟರ್ ದರ ಏರಿಕೆಗೆ ಜಿಲ್ಲಾಧಿಕಾರಿ ಗ್ರೀನ್​ ಸಿಗ್ನಲ್

ಮಾರ್ಚ್ 12ರಂದು ದರ ಏರಿಕೆ ಸಂಬಂಧ ನಡೆದಿದ್ದ ಸಭೆಯಲ್ಲಿ ಹಲವು ಆಟೋ ಸಂಘಟನೆಗಳು ಭಾಗಿಯಾಗಿದ್ದವು. ಸಭೆಯಲ್ಲಿ, ಆಟೋ ದರ ಪರಿಷ್ಕರಣೆ ಸಮಿತಿಯು ಆಟೋ ಚಾಲಕರ ಅಹವಾಲು ಕೇಳಿತ್ತು. ಅಲ್ಲದೆ ಸಭೆಯ ನಿರ್ಣಯವನ್ನು ಜಿಲ್ಲಾಧಿಕಾರಿಗಳಿಗೆ ಒಪ್ಪಿಸಿತ್ತು.ಇದೀಗ ವರದಿ ಪರಿಶೀಲಿಸಿ ಜಿಲ್ಲಾಧಿಕಾರಿಗಳು ದರ ಏರಿಕೆಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಆಟೋ ದರ ಏರಿಕೆಗೆ ಗ್ರೀನ್ ಸಿಗ್ನಲ್, ಎಷ್ಟು ಹೆಚ್ಚಾಗಲಿದೆ? ಇಲ್ಲಿದೆ ವಿವರ

ಬಿಎಂಟಿಸಿ,ನಮ್ಮ ಮೆಟ್ರೋ ಸೇರಿದಂತೆ ಎಲ್ಲಾ ಸಾರಿಗೆಗಳ ದರ‌ ಏರಿಕೆ ಆಗಿದೆ. ಆಟೋ ಮೀಟರ್ ದರ ಏರಿಕೆಗೆ ಅನುಮತಿ ನೀಡಲಿ. ಆಟೋ ಚಾಲಕರಿಗೂ ಜೀವನ ಮಾಡಬೇಕಲ್ಲವೇ ಎಂದು ಪ್ರಯಾಣಿಕ ರಾಜಶೇಖರ ಎಂಬವರು ಅಭಿಪ್ರಾಯಪಟ್ಟಿದ್ದಾರೆ.

ಒಟ್ಟಿನಲ್ಲಿ ಈಗಾಗಲೇ ದರ ಏರಿಕೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಎಲ್ಲಾ ಆಟೋ ಚಾಲಕ ಸಂಘಟನೆಗಳು ದರ ಏರಿಕೆಗೆ ಒಪ್ಪಿಗೆ ಸೂಚಿಸಿವೆ. ಮೇ 13 ರಂದು ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ