AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಆಟೋ ಪ್ರಯಾಣಿಕರಿಗೆ ದರ ಏರಿಕೆ ಬಿಸಿ? ಎಲ್.ಪಿ.ಜಿ ದರ ಹೆಚ್ಚಳಕ್ಕೆ ಚಾಲಕರ ಆಕ್ರೋಶ!

ಬೆಂಗಳೂರಿನಲ್ಲಿ ಆಟೋ ಎಲ್‌ಪಿಜಿ ದರ ಪ್ರತಿ ಲೀಟರ್‌ಗೆ 5.73 ರೂ. ಏರಿಕೆಯಾಗಿದ್ದು, ಆಟೋ ಪ್ರಯಾಣದ ಕನಿಷ್ಠ ದರವನ್ನು 50 ರೂ.ಗೆ ಹೆಚ್ಚಿಸಲು ಚಾಲಕರು ಒತ್ತಾಯಿಸುತ್ತಿದ್ದಾರೆ. ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್ ಹಾಗೂ ಗ್ಯಾಸ್ ಕೊರತೆಯಿಂದ ಕಂಗಾಲಾಗಿರುವ ಚಾಲಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಸಾರಿಗೆ ಸಚಿವರ ಮಧ್ಯಸ್ಥಿಕೆಗೆ ಆಗ್ರಹಿಸಿದ್ದಾರೆ. ಸಾಮಾನ್ಯ ಜನರಿಗೂ ಆಟೋ ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಇದೆ.

ಬೆಂಗಳೂರು ಆಟೋ ಪ್ರಯಾಣಿಕರಿಗೆ ದರ ಏರಿಕೆ ಬಿಸಿ? ಎಲ್.ಪಿ.ಜಿ ದರ ಹೆಚ್ಚಳಕ್ಕೆ ಚಾಲಕರ ಆಕ್ರೋಶ!
ಬೆಂಗಳೂರು ಆಟೋ ಪ್ರಯಾಣಿಕರಿಗೆ ದರ ಏರಿಕೆ ಬಿಸಿ?
ಭಾವನಾ ಹೆಗಡೆ
|

Updated on: May 05, 2026 | 8:32 AM

Share

ಬೆಂಗಳೂರು, ಮೇ 05: ರಾಜಧಾನಿಯ ಜನತೆಗೆ ಈಗ ಮತ್ತೊಂದು ಬೆಲೆ ಏರಿಕೆಯ ಭೀತಿ ಎದುರಾಗಿದೆ. ಕೇಂದ್ರ ಸರ್ಕಾರವು ಆಟೋ ಎಲ್.ಪಿ.ಜಿ (LPG) ದರವನ್ನು ಪ್ರತಿ ಲೀಟರ್‌ಗೆ 5.73 ರೂಪಾಯಿ ಏರಿಕೆ ಮಾಡಿರುವುದನ್ನು ವಿರೋಧಿಸಿರುವ ಆಟೋ ಚಾಲಕರು, ಈಗ ಆಟೋ ಪ್ರಯಾಣ ದರವನ್ನು ಹೆಚ್ಚಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ. ಇದರಿಂದಾಗಿ ಬೆಂಗಳೂರಿಗರಿಗೆ ಆಟೋ ಚಾರ್ಜ್​ ಏರಿಕೆಯ ಬಿಸಿ ಮುಟ್ಟುವ ಸಾಧ್ಯತೆ ಇದೆ.

ಮಧ್ಯಪ್ರಾಚ್ಯದ ಯುದ್ಧದ ಪರಿಣಾಮವಾಗಿ ಕಳೆದ ಕೆಲವು ದಿನಗಳಿಂದ ಎಲ್.ಪಿ.ಜಿ ಕೊರತೆ ಎದುರಾಗಿತ್ತು. ಇದರಿಂದಾಗಿ ಚಾಲಕರು ಗಂಟೆಗಟ್ಟಲೆ ಕ್ಯೂ ನಿಂತು ಕಂಗಾಲಾಗಿದ್ದರು. ಈ ಸಂಕಷ್ಟದ ಬೆನ್ನಲ್ಲೇ ಸರ್ಕಾರಿ ಸ್ವಾಮ್ಯದ ಬಂಕ್‌ಗಳಲ್ಲಿ ಬೆಲೆ ಏರಿಕೆ ಮಾಡಿರುವುದು ಚಾಲಕರ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರಿ ಬಂಕ್​ಗಳೆ ಬೆಲೆ ಏರಿಕೆ ಮಾಡಿದಾಗ, ಇದನ್ನೇ ಬಂಡವಾಳ ಮಾಡಿಕೊಂಡಿರುವ ಖಾಸಗಿ ಬಂಕ್‌ಗಳು ಕೂಡ ದರವನ್ನು ದುಪ್ಪಟ್ಟುಗೊಳಿಸಿವೆ. ಇದರಿಂದ ಆಟೋ ಚಾಲಕರು ಕೆಂಡಾಮಂಡಲಾಗಿದ್ದಾರೆ.

ಬೇಡಿಕೆಗಳೇನು?

ಸದ್ಯ ಬೆಂಗಳೂರಿನಲ್ಲಿ ಆಟೋ ಕನಿಷ್ಠ ದರ (2 ಕಿ.ಮೀ ಗೆ) 36 ರೂ. ಹಾಗೂ ನಂತರದ ಪ್ರತಿ ಕಿ.ಮೀ ಗೆ 18 ರೂ. ಇದೆ. ಇದನ್ನು ಕ್ರಮವಾಗಿ 50 ರೂ. ಹಾಗೂ 25 ರೂ. ಏರಿಸಬೇಕೆಂದು ಆಟೋ ಸಂಘಟನೆಗಳು ಒತ್ತಾಯಿಸಿವೆ. ಗ್ಯಾಸ್ ಬೆಲೆ ಏರಿಕೆಯಿಂದ ಜೀವನ ನಡೆಸುವುದೇ ಕಷ್ಟವಾಗಿದೆ. ಸಾರಿಗೆ ಸಚಿವರು ಕೂಡಲೇ ಸಭೆ ನಡೆಸಿ ನಮ್ಮ ಕಷ್ಟ ಆಲಿಸಬೇಕು ಎಂದು ಸ್ನೇಹಜೀವಿ ಚಾಲಕರ ಟ್ರೇಡ್ ಯೂನಿಯನ್ ರಾಜ್ಯಾಧ್ಯಕ್ಷರಾದ ಸಂತೋಷ್ ಆಗ್ರಹಿಸಿದ್ದಾರೆ. ಒಟ್ಟಿನಲ್ಲಿ, ಚುನಾವಣೆ ಬೆನ್ನಲ್ಲೇ ಕೇಂದ್ರದ ಈ ಬೆಲೆ ಏರಿಕೆ ನಿರ್ಧಾರವು ಆಟೋ ಚಾಲಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದ್ದು, ಸಾಮಾನ್ಯ ಜನರಿಗೂ ಆಟೋ ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಹೆಚ್ಚಿದೆ.

ನಟರಾಜ್, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!