ಬೆಂಗಳೂರು ಬಂದ್: ಬಿಎಂಟಿಸಿಗೆ ಡಿಮಾಂಡಪ್ಪೋ ಡಿಮಾಂಡ್

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಖಾಸಗಿ ಸಾರಿಗೆ ಸಂಘಟನೆಗಳು ಇಂದು ಬೆಂಗಳೂರು ಬಂದ್​ಗೆ ಕರೆ ಕೊಟ್ಟಿವೆ. ಇದರಿಂದಾಗಿ ಖಾಸಗಿ ಸಾರಿಗೆಗಳನ್ನು ಅವಲಂಬಿಸುತ್ತಿದ್ದವರು ಇಂದು ಸಾರಿಗೆ ಬಸ್​ಗಳನ್ನು ಅವಲಂಬಿಸುವಂತಾಗಿದೆ. ಹೀಗಾಗಿ ಬಿಎಂಟಿಸಿ ಬಸ್​ಗಳಿಗೆ ಡಿಮಾಂಡ್ ಹೆಚ್ಚಾಗಿದೆ.

ಬೆಂಗಳೂರು ಬಂದ್: ಬಿಎಂಟಿಸಿಗೆ ಡಿಮಾಂಡಪ್ಪೋ ಡಿಮಾಂಡ್
ಬೆಂಗಳೂರು ಖಾಸಗಿ ಸಾರಿಗೆಗಳು ಬಂದ್ ಹಿನ್ನೆಲೆ ಬಿಎಂಟಿಸಿಗೆ ಹೆಚ್ಚಿದ ಡಿಮಾಂಡ್ (ಸಾಂದರ್ಭಿಕ ಚಿತ್ರ)
Follow us
| Updated By: Rakesh Nayak Manchi

Updated on:Sep 11, 2023 | 8:02 AM

ಬೆಂಗಳೂರು, ಸೆ.11: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಖಾಸಗಿ ಸಾರಿಗೆ ಸಂಘಟನೆಗಳು ಇಂದು ಬೆಂಗಳೂರು ಬಂದ್​ಗೆ (Bengaluru Bandh) ಕರೆ ಕೊಟ್ಟಿವೆ. ಇದರಿಂದಾಗಿ ಖಾಸಗಿ ಸಾರಿಗೆಗಳನ್ನು ಅವಲಂಬಿಸುತ್ತಿದ್ದವರು ಇಂದು ಸಾರಿಗೆ ಬಸ್​ಗಳನ್ನು ಅವಲಂಬಿಸುವಂತಾಗಿದೆ. ಹೀಗಾಗಿ ಬಿಎಂಟಿಸಿ ಬಸ್​ಗಳಿಗೆ ಡಿಮಾಂಡ್ ಹೆಚ್ಚಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಬಿಎಂಟಿಸಿ ಕಡೆ ಮುಖ ಮಾಡಿದ್ದಾರೆ.

ಭಾರೀ ಸಂಖ್ಯೆಯಲ್ಲಿ ಪ್ರಯಾಣಿಕರು ಆಗಮಿಸುವ ಹಿನ್ನೆಲೆ ಬಿಎಂಟಿಸಿ ಅಧಿಕಾರಿಗಳು ಫುಲ್ ಅಲರ್ಟ್ ಆಗಿದ್ದಾರೆ. ಪ್ರಯಾಣಿಕರಿಗೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಬಿಎಂಟಿಸಿ ಅಧಿಕಾರಿಗಳು ಫುಲ್ ಅಲರ್ಟ್ ಆಗಿದ್ದಾರೆ. ಈಗಾಗಲೇ ಹೆಚ್ಚುವರಿ ಬಸ್​ಗಳನ್ನು ರಸ್ತೆಗೆ ಇಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚಿಸಿದ್ದಾರೆ.

ಹೀಗಾಗಿ ಪ್ರಯಾಣಿಕರಿಗೆ ತೊಂದರೆ ಆಗದಂತೆ ಹೆಚ್ಚುವರಿ ಬಿಎಂಟಿಸಿ ಬಸ್ ವ್ಯವಸ್ಥೆ ಮಾಡಲಾಗಿದೆ. ನಗರದಲ್ಲಿ 500 ಶೆಡ್ಯೂಲ್​​, 4 ಸಾವಿರ ಹೆಚ್ಚುವರಿ ಬಸ್​ ಟ್ರಿಪ್​ಗೆ ವ್ಯವಸ್ಥೆ ಮಾಡಲಾಗಿದೆ. ಮೆಜೆಸ್ಟಿಕ್​​​ನಿಂದ ಏರ್​​ಪೋರ್ಟ್, ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ವಿವಿಧೆಡೆ ಬಸ್ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ನಮ್ಮ ಮೆಟ್ರೋದಲ್ಲೂ ಹೆಚ್ಚುವರಿ ಟ್ರಿಪ್​​ ಓಡಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ.

ಹೆಬ್ಬಾಳದಲ್ಲಿ ಪ್ರಯಾಣಿಕರ ಆಕ್ರೋಶ

ಹೆಚ್ಚುವರಿ ಬಸ್​ಗಳನ್ನು ರಸ್ತೆಗೆ ಇಳಿಸಲು ಸೂಚನೆ ನೀಡಿದ್ದರೂ ಹೆಬ್ಬಾಳದಲ್ಲಿ ಬಸ್​ಗಳಿಲ್ಲದೆ ಪ್ರಯಾಣಿಕರು ಪರದಾಟ ನಡೆಸುವಂತಾಗಿದೆ. ಅರ್ಧಗಂಟೆಯಿಂದ ಬಸ್ಸಿಗೆ ಕಾಯುತ್ತಿದ್ದೇವೆ, ಆದರೂ ಬಸ್ ಬರುತ್ತಿಲ್ಲ. ಆಟೋಗಳು ಕೂಡ ಇಲ್ಲ. ಕೆಲವೊಂದು ಆಟೋಗಳಲ್ಲಿ ಹೆಚ್ಚಿನ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ಮಕ್ಕಳು ಶಾಲೆಗೆ ಹೋಗಲು ಸಮಸ್ಯೆ ಆಗುತ್ತಿದೆ. ಕಚೇರಿಗೆ ಹೋಗಲು ಸಮಸ್ಯೆ ಆಗುತ್ತಿದೆ ಎಂದು ಮಹಿಳಾ ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ.

ಖಾಸಗಿ ಶಾಲಾ ವಾಹನಗಳಿಗೂ ಇಂದು ಬ್ರೇಕ್

ಮುಷ್ಕರಕ್ಕೆ ಕರೆ ನೀಡಿದ ಹಿನ್ನೆಲೆ ಖಾಸಗಿ ಶಾಲಾ ವಾಹನಗಳ ಸಂಚಾರ ಬಂದ್​ ಆಗಲಿವೆ. ಈ ಬಗ್ಗೆ ಮಾಹಿತಿ ನೀಡಿದ ಖಾಸಗಿ ಶಾಲಾ ಚಾಲಕರ ಒಕ್ಕೂಟದ ರಾಜ್ಯಾಧ್ಯಕ್ಷ ರವಿಕುಮಾರ್, ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇಂದು ಮುಷ್ಕರಕ್ಕೆ ಕರೆ ನೀಡಿದ್ದೇವೆ. ಬಂದ್​ಗೆ ಬೆಂಬಲಿಸುವಂತೆ ಖಾಸಗಿ ಶಾಲಾ ಆಡಳಿತ ಮಂಡಳಿಗೆ ಮನವಿ ಮಾಡಲಾಗಿದೆ. ಬಂದ್​ಗೆ ಸಹಕರಿಸುವಂತೆ ಮಕ್ಕಳ ಪೋಷಕರಿಗೂ ಪತ್ರ ಬರೆದಿದ್ದೇವೆ. ಇಂದು ಯಾವುದೇ ಖಾಸಗಿ ಶಾಲಾ ವಾಹನಗಳು ಸಂಚರಿಸುವುದಿಲ್ಲ ಎಂದರು.

ಇದನ್ನೂ ಓದಿ: ಬೆಂಗಳೂರು ಬಂದ್: ಖಾಸಗಿ ಸಾರಿಗೆ ಸಂಘಟನೆಗಳಿಂದ ಇಂದು ಸಪ್ತ ದಿಗ್ಬಂಧನ, ರ್ಯಾಲಿ ಸಾಗುವ ಮಾರ್ಗಗಳು ಹೀಗಿವೆ

ಖಾಸಗಿ ಶಾಲೆಗಳಿಗೆ ರಜೆ

ಒಂದೆಡೆ ಖಾಸಗಿ ಸಾರಿಗೆಗಳು ಬಹುತೇಕ ಬಂದ್ ಆಗಲಿದ್ದು, ಮುಷ್ಕರಲ್ಲಿ ಖಾಸಗಿ ಶಾಲಾ ವಾಹನ ಚಾಲಕರೂ ಭಾಗಿಯಾಗಲಿದ್ದಾರೆ. ಹೀಗಾಗಿ ನಗರದ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆರ್ಕಿಡ್​ ಶಾಲೆ ಸೇರಿದಂತೆ ಕೆಲವು ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಬಂದ್​ಗೆ ಬಿಜೆಪಿ ನೈತಿಕ ಬೆಂಬಲ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಖಾಸಗಿ ಸಾರಿಗೆ ಒಕ್ಕೂಟಗಳು ನೀಡಿದ ಬೆಂಗಳೂರು ಬಂದ್​ಗೆ ಬಿಜೆಪಿ ನೈತಿಕ ಬೆಂಬಲ ಸೂಚಿಸಿದೆ. ಖಾಸಗಿ ಸಾರಿಗೆ ಒಕ್ಕೂಟದ ಬಂದ್ ಬೆಂಬಲಿಸುವುದಾಗಿ ಬಿಜೆಪಿ ಘೋಷಣೆ ಮಾಡಿದೆ.

ಎಲ್ಲಾ ಟ್ಯಾಕ್ಸಿಗಳು ಬಂದ್

ಮುಷ್ಕರ ಹಿನ್ನೆಲೆ ನಗರದಲ್ಲಿ ಇಂದು ಓಲಾ, ಉಬರ್​ ಸೇರಿದಂತೆ ಎಲ್ಲಾ ಟ್ಯಾಕ್ಸಿಗಳು ಇಂದು ಮಧ್ಯರಾತ್ರಿ 12 ಗಂಟೆಯಿಂದಲೇ ಬಂದ್ ಆಗಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವೇನಹಳ್ಳಿ ಬಳಿಯಿರುವ ಕೆಂಪೇಗೌಡ ಏರ್​​ಪೋರ್ಟ್​ ಟ್ಯಾಕ್ಸಿ ಸಂಚಾರ ಕೂಡ ಸ್ಥಗಿತಗೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:09 am, Mon, 11 September 23

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು