Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಬಿಟ್ಟು ಸುರಕ್ಷಿತ ಸ್ಥಳಕ್ಕೆ ಹೋದ ತಮಿಳುನಾಡು ಬಸ್​ಗಳು, ಸ್ಯಾಟಲೈಟ್ ಬಸ್ ನಿಲ್ದಾಣ ಖಾಲಿ ಖಾಲಿ

Bengaluru Bandh: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಇಂದು(ಸೆ.26) ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಬೆಂಗಳೂರು ಬಂದ್ ಆಚರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಮಿಳುನಾಡು ಬಸ್​ಗಳು ರಸ್ತೆಗೆ ಇಳಿದಿಲ್ಲ. ಸ್ಯಾಟಲೈಟ್ ಬಸ್ ನಿಲ್ದಾಣದಿಂದ ನಿತ್ಯ ತಮಿಳುನಾಡು ಕಡೆ ಓಡಾಡುತ್ತಿದ್ದ ಐನೂರಕ್ಕು ಹೆಚ್ಚು ಬಸ್​ಗಳು ಇಂದು ನಿಲ್ದಾಣದಲ್ಲಿ ಒಂದೇ ಬಂದು ಬಸ್ ಕೂಡಾ ಇಲ್ಲ.

ಬೆಂಗಳೂರು ಬಿಟ್ಟು ಸುರಕ್ಷಿತ ಸ್ಥಳಕ್ಕೆ ಹೋದ ತಮಿಳುನಾಡು ಬಸ್​ಗಳು, ಸ್ಯಾಟಲೈಟ್ ಬಸ್ ನಿಲ್ದಾಣ ಖಾಲಿ ಖಾಲಿ
ಸ್ಯಾಟಲೈಟ್ ಬಸ್ ನಿಲ್ದಾಣ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Sep 26, 2023 | 7:47 AM

ಬೆಂಗಳೂರು, (ಸೆಪ್ಟೆಂಬರ್ 26): ತಮಿಳುನಾಡಿಗೆ (Tamil Nadu) ಕಾವೇರಿ ನೀರು (Cauvery Water Dispute) ಹರಿಸುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ ಭುಗಿಲೆದ್ದಿದೆ. ಇಂದು(ಸೆ.26) ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಬೆಂಗಳೂರು ಬಂದ್ (Bengaluru Bandh) ಆಚರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಮಿಳುನಾಡು ಬಸ್​ಗಳು (Tamil Nadu Buses)ರಸ್ತೆಗೆ ಇಳಿದಿಲ್ಲ. ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ನಿತ್ಯ ತಮಿಳುನಾಡು ಕಡೆ ಓಡಾಡುತ್ತಿದ್ದ ಐನೂರಕ್ಕು ಹೆಚ್ಚು ಬಸ್​ಗಳು ಇಂದು ನಿಲ್ದಾಣದಲ್ಲಿ ಒಂದೇ ಬಂದು ಬಸ್ ಕೂಡಾ ಇಲ್ಲ. ನಿತ್ಯ ಸಂಚರಿಸುತ್ತಿದ್ದ ತಮಿಳುನಾಡು ಬಸ್​ಗಳು ಬೆಂಗಳೂರು ಬಿಟ್ಟು ಸುರಕ್ಷಿತ ಪ್ರದೇಶಕ್ಕೆ ತೆರಳಿವೆ.

ಇನ್ನು ಬೆಂಗಳೂರು ಬಂದ್​​ ನಡುವೆಯೇ ಎಂದಿನಂತೆ ಬಿಎಂಟಿಸಿ ಮತ್ತು ಕೆಎಸ್​ಆರ್​​ಟಿಸಿ ಸಂಚಾರ ನಡೆಸಿವೆ. ನಗರದ ಹೃದಯ ಭಾಗ ಮೆಜೆಸ್ಟಿಕ್​ನಿಂದ ಬಿಎಂಟಿಸಿ ಬಸ್​ಗಳು ಸಂಚರಿಸುತ್ತಿದ್ದರೆ, ಕೆಎಸ್​ಆರ್​ಟಿಸಿ ಬಸ್​ಗಳು ರಾಜ್ಯದ ವಿವಿಧ ಪ್ರದೇಶಗಳಿಗೆ ಸಂಚಾರ ನಡೆಸುತ್ತಿವೆ. ಇನ್ನು ಆಟೋ ಹಾಗೂ ಕ್ಯಾಬ್​ಗಳು ಓಡಾಡುತ್ತಿವೆ.

ಇದನ್ನೂ ಓದಿ: Bengaluru Bandh News Live Updates: ಬೆಂಗಳೂರು ಬಂದ್‌, ಎಂದಿನಂತೆ ಕೆಎಸ್​​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ

ತಮಿಳು ಭಾಷಿಕರು ವಾಸಿಸುವ ಪ್ರದೇಶಗಳಲ್ಲಿ ನಿಗಾ

ಇನ್ನು ಬೆಂಗಳೂರಿನಲ್ಲಿ ಎಲ್ಲೆಲ್ಲಿ ತಮಿಳು ಭಾಷಿಕರು ಭಾಷಿಕರು ವಾಸುತ್ತಿದ್ದಾರೆಯೋ ಆ ಪ್ರದೇಶಗಳಲ್ಲಿ ಪೊಲೀಸ್ ಹದ್ದಿನನ ಕಣ್ಣಿಟ್ಟಿದೆ. ಪ್ರತಿ ಏರಿಯಾದಲ್ಲಿ ನಿಗಾ ವಹಿಸಿ ಗಸ್ತು ಮಾಡಲು ಹಿರಿಯ ಪೊಲೀಸ್ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಅಲ್ಲದೇ ಸಣ್ಣ ಪುಟ್ಟ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸಿ ಕ್ರಮಕೈಗೊಳ್ಳಲು ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ತಡರಾತ್ರಿ ರಾತ್ರಿ 12 ಗಂಟೆಯಿಂದಲೇ ಹೊಯ್ಸಳ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾರೆ.

ಅತ್ತಿಬೇಲೆ ಬಾರ್ಡರ್ ನಲ್ಲಿ ಖಾಕಿ ಸರ್ಪಗಾವಲು

ತಮಿಳುನಾಡು ಗಡಿ ಗೋಪುರದ ಬಳಿ ಹೆಚ್ಚಿನ ಸಂಖ್ಯೆಯ ಪೋಲೀಸರ‌ ನಿಯೋಜನೆ ಮಾಡಲಾಗಿದೆ. ಮೊನ್ನೆ ಇದೇ ಸ್ಥಳದಲ್ಲಿ ಕರವೇ ಕಾರ್ಯಕರ್ತರು ರಸ್ತೆ ತಡೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ಕ್ರಮಕ್ಕೆ ಮುಂದಾಗಿರೋ ಪೋಲೀಸರು, ಬಿಗಿ ಭದ್ರತೆ ಕೈಗೊಂಡಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್  ಮಾಡಿ

ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ