ಬೆಂಗಳೂರು, (ಸೆಪ್ಟೆಂಬರ್ 26): ತಮಿಳುನಾಡಿಗೆ (Tamil Nadu) ಕಾವೇರಿ ನೀರು (Cauvery Water Dispute) ಹರಿಸುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ ಭುಗಿಲೆದ್ದಿದೆ. ಇಂದು(ಸೆ.26) ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಬೆಂಗಳೂರು ಬಂದ್ (Bengaluru Bandh) ಆಚರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಮಿಳುನಾಡು ಬಸ್ಗಳು (Tamil Nadu Buses)ರಸ್ತೆಗೆ ಇಳಿದಿಲ್ಲ. ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ನಿತ್ಯ ತಮಿಳುನಾಡು ಕಡೆ ಓಡಾಡುತ್ತಿದ್ದ ಐನೂರಕ್ಕು ಹೆಚ್ಚು ಬಸ್ಗಳು ಇಂದು ನಿಲ್ದಾಣದಲ್ಲಿ ಒಂದೇ ಬಂದು ಬಸ್ ಕೂಡಾ ಇಲ್ಲ. ನಿತ್ಯ ಸಂಚರಿಸುತ್ತಿದ್ದ ತಮಿಳುನಾಡು ಬಸ್ಗಳು ಬೆಂಗಳೂರು ಬಿಟ್ಟು ಸುರಕ್ಷಿತ ಪ್ರದೇಶಕ್ಕೆ ತೆರಳಿವೆ.
ಇನ್ನು ಬೆಂಗಳೂರು ಬಂದ್ ನಡುವೆಯೇ ಎಂದಿನಂತೆ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಸಂಚಾರ ನಡೆಸಿವೆ. ನಗರದ ಹೃದಯ ಭಾಗ ಮೆಜೆಸ್ಟಿಕ್ನಿಂದ ಬಿಎಂಟಿಸಿ ಬಸ್ಗಳು ಸಂಚರಿಸುತ್ತಿದ್ದರೆ, ಕೆಎಸ್ಆರ್ಟಿಸಿ ಬಸ್ಗಳು ರಾಜ್ಯದ ವಿವಿಧ ಪ್ರದೇಶಗಳಿಗೆ ಸಂಚಾರ ನಡೆಸುತ್ತಿವೆ. ಇನ್ನು ಆಟೋ ಹಾಗೂ ಕ್ಯಾಬ್ಗಳು ಓಡಾಡುತ್ತಿವೆ.
ಇನ್ನು ಬೆಂಗಳೂರಿನಲ್ಲಿ ಎಲ್ಲೆಲ್ಲಿ ತಮಿಳು ಭಾಷಿಕರು ಭಾಷಿಕರು ವಾಸುತ್ತಿದ್ದಾರೆಯೋ ಆ ಪ್ರದೇಶಗಳಲ್ಲಿ ಪೊಲೀಸ್ ಹದ್ದಿನನ ಕಣ್ಣಿಟ್ಟಿದೆ. ಪ್ರತಿ ಏರಿಯಾದಲ್ಲಿ ನಿಗಾ ವಹಿಸಿ ಗಸ್ತು ಮಾಡಲು ಹಿರಿಯ ಪೊಲೀಸ್ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಅಲ್ಲದೇ ಸಣ್ಣ ಪುಟ್ಟ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸಿ ಕ್ರಮಕೈಗೊಳ್ಳಲು ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ತಡರಾತ್ರಿ ರಾತ್ರಿ 12 ಗಂಟೆಯಿಂದಲೇ ಹೊಯ್ಸಳ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾರೆ.
ತಮಿಳುನಾಡು ಗಡಿ ಗೋಪುರದ ಬಳಿ ಹೆಚ್ಚಿನ ಸಂಖ್ಯೆಯ ಪೋಲೀಸರ ನಿಯೋಜನೆ ಮಾಡಲಾಗಿದೆ. ಮೊನ್ನೆ ಇದೇ ಸ್ಥಳದಲ್ಲಿ ಕರವೇ ಕಾರ್ಯಕರ್ತರು ರಸ್ತೆ ತಡೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ಕ್ರಮಕ್ಕೆ ಮುಂದಾಗಿರೋ ಪೋಲೀಸರು, ಬಿಗಿ ಭದ್ರತೆ ಕೈಗೊಂಡಿದ್ದಾರೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ