ನಾಳೆ ಬೆಂಗಳೂರು ಬಂದ್: ಎಂದಿನಂತೆ ಸಂಚರಿಸಲಿದೆ ಮೆಟ್ರೋ, ಆದರೆ..
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ನಾಳೆ (ಸೆಪ್ಟೆಂಬರ್ 26) ರಾಜ್ಯ ರಾಜಧಾನಿ ಬೆಂಗಳೂರು ಬಂದ್ಗೆ ಕರೆ ನೀಡಲಾಗಿದೆ. ಆಟೋ, ಓಲಾ ಹಾಗೂ ಊಬರ್ ಸಂಘಟನೆಗಳು ಬೆಂಗಳೂರು ಬಂದ್ಗೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದುಕೊಂಡಿವೆ. ಉಳಿದಂತೆ ಬೆಂಗಳೂರು ಹೊಟೇಲ್ ಮಾಲೀಕರ ಸಂಘ ಸೇರಿದಂತೆ ಕೆಲವೊಂದು ಸಂಘಟನೆಗಳು ಬೆಂಬಲ ಸೂಚಿಸಿವೆ. ಆದರೆ ನಮ್ಮ ಮೆಟ್ರೋ ಎಂದಿನಂತೆ ಸಂಚರಿಸಲಿದೆ.
ಬೆಂಗಳೂರು, ಸೆ.25: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ನಾಳೆ (ಸೆಪ್ಟೆಂಬರ್ 26) ರಾಜ್ಯ ರಾಜಧಾನಿ ಬೆಂಗಳೂರು ಬಂದ್ಗೆ (Bangalore Bandh) ಕರೆ ನೀಡಲಾಗಿದೆ. ಹಲವು ಸಂಘಟನೆಗಳು ಬಂದ್ಗೆ ಬೆಂಬಲ ಸೂಚಿಸಿವೆ. ಬಿಎಂಟಿಸಿ ಬಸ್ಗಳು ಪರಿಸ್ಥಿತಿ ನೋಡಿಕೊಂಡು ಸಂಚಾರ ಆರಂಭಿಸಲಿವೆ. ಆದರೆ ನಾಳೆ ನಮ್ಮ ಮೆಟ್ರೋ ಸೇವೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಬಿಎಂಅರ್ಸಿಎಲ್ (BMRCL) ತಿಳಿಸಿದೆ.
ಈ ಬಗ್ಗೆ ಟಿವಿ9ಗೆ ಮಾಹಿತಿ ನೀಡಿದ ಬಿಎಂಆರ್ಸಿಎಲ್ ಅಧಿಕಾರಿಗಳು, ನಾಳೆ ನಮ್ಮ ಮೆಟ್ರೋ ಸೇವೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ದೈನಂದಿನಂತೆ ನಮ್ಮ ಮೇಟ್ರೋ ಸಂಚಾರ ಇರಲಿದೆ. ಸಂದರ್ಭಕ್ಕೆ ತಕ್ಕಂತೆ ಮೇಟ್ರೋ ಕಾರ್ಯಚರಣೆ ನಡೆಸಲಿದೆ. ಅದಾಗ್ಯೂ, ಸ್ಥಿತಿಗತಿಯ ಮೇಲೆ ಮೇಟ್ರೋ ಸಂಚಾರದ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದಿದ್ದಾರೆ.
ಇದನ್ನೂ ಓದಿ: ಬೆಂಗಳೂರು ಬಂದ್; ವಿಮಾನ, ರೈಲು ನಿಲ್ದಾಣಗಳಿಗೆ ಬಂದವರು ಗಮ್ಯ ತಲುಪಲು ಏನು ವ್ಯವಸ್ಥೆ? ಇಲ್ಲಿದೆ ವಿವರ
ಕಾವೇರಿ ನೀರಿಗಾಗಿ ಪ್ರತಿಭಟನೆ ಮತ್ತಷ್ಟು ತೀವ್ರಗೊಳಿಸಲು ವಿವಿಧ ಸಂಘಟನೆಗಳು ತೀರ್ಮಾನಿಸಿದ್ದು, ಸೆಪ್ಟೆಂಬರ್ 26 ರಂದು ಬೆಂಗಳೂರು ಬಂದ್ ಮಾಡಲು ನಿರ್ಧರಿಸಿವೆ. ಈ ಬಂದ್ಗೆ ಆಟೋ, ಓಲಾ, ಊಬರ್, ಖಾಸಗಿ ಬಸ್ ಮಾಲೀಕರ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿದ್ದವು. ಈ ಪೈಕಿ ಆಟೋ, ಓಲಾ, ಊಬರ್ ಸಂಘಟನೆಗಳು ಬೆಂಬಲ ವಾಪಸ್ ಪಡೆದಿದ್ದು, ಸೆ.29ರ ಕರ್ನಾಟಕ ಬಂದ್ಗೆ ಸಂಪೂರ್ಣ ಬೆಂಬಲ ನೀಡಲು ನಿರ್ಧರಿಸಿವೆ.
ಕನ್ನಡಪರ ಸಂಘಟನೆಗಳು ಸಹ ಬೆಂಗಳೂರು ಬಂದ್ಗೆ ಬೆಂಬಲ ಇಲ್ಲ ಎಂದು ಸ್ಪಷ್ಟಪಡಿಸಿದ್ದು, ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್ಗೆ ಬೆಂಬಲ ಇದೆ ಎಂದು ಘೋಷಿಸಿವೆ. ಅದಾಗ್ಯೂ ಕೆಲವೊಂದು ಸಂಘಟನೆಗಳು ಬೆಂಗಳೂರು ಬಂದ್ಗೆ ಬೆಂಬಲ ಸೂಚಿಸಿವೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:02 pm, Mon, 25 September 23