ನಾಳೆ ಬೆಂಗಳೂರು ಬಂದ್​: ಎಂದಿನಂತೆ ಸಂಚರಿಸಲಿದೆ ಮೆಟ್ರೋ, ಆದರೆ..

| Updated By: Rakesh Nayak Manchi

Updated on: Sep 25, 2023 | 4:16 PM

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ನಾಳೆ (ಸೆಪ್ಟೆಂಬರ್ 26) ರಾಜ್ಯ ರಾಜಧಾನಿ ಬೆಂಗಳೂರು ಬಂದ್​ಗೆ ಕರೆ ನೀಡಲಾಗಿದೆ. ಆಟೋ, ಓಲಾ ಹಾಗೂ ಊಬರ್ ಸಂಘಟನೆಗಳು ಬೆಂಗಳೂರು ಬಂದ್​ಗೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದುಕೊಂಡಿವೆ. ಉಳಿದಂತೆ ಬೆಂಗಳೂರು ಹೊಟೇಲ್ ಮಾಲೀಕರ ಸಂಘ ಸೇರಿದಂತೆ ಕೆಲವೊಂದು ಸಂಘಟನೆಗಳು ಬೆಂಬಲ ಸೂಚಿಸಿವೆ. ಆದರೆ ನಮ್ಮ ಮೆಟ್ರೋ ಎಂದಿನಂತೆ ಸಂಚರಿಸಲಿದೆ.

ನಾಳೆ ಬೆಂಗಳೂರು ಬಂದ್​: ಎಂದಿನಂತೆ ಸಂಚರಿಸಲಿದೆ ಮೆಟ್ರೋ, ಆದರೆ..
ನಮ್ಮ ಮೆಟ್ರೋ
Image Credit source: ANI
Follow us on

ಬೆಂಗಳೂರು, ಸೆ.25: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ನಾಳೆ (ಸೆಪ್ಟೆಂಬರ್ 26) ರಾಜ್ಯ ರಾಜಧಾನಿ ಬೆಂಗಳೂರು ಬಂದ್​ಗೆ (Bangalore Bandh) ಕರೆ ನೀಡಲಾಗಿದೆ. ಹಲವು ಸಂಘಟನೆಗಳು ಬಂದ್​ಗೆ ಬೆಂಬಲ ಸೂಚಿಸಿವೆ. ಬಿಎಂಟಿಸಿ ಬಸ್​ಗಳು ಪರಿಸ್ಥಿತಿ ನೋಡಿಕೊಂಡು ಸಂಚಾರ ಆರಂಭಿಸಲಿವೆ. ಆದರೆ ನಾಳೆ ನಮ್ಮ ಮೆಟ್ರೋ ಸೇವೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಬಿಎಂಅರ್​ಸಿಎಲ್ (BMRCL) ತಿಳಿಸಿದೆ.

ಈ ಬಗ್ಗೆ ಟಿವಿ9ಗೆ ಮಾಹಿತಿ ನೀಡಿದ ಬಿಎಂಆರ್​ಸಿಎಲ್ ಅಧಿಕಾರಿಗಳು, ನಾಳೆ ನಮ್ಮ ಮೆಟ್ರೋ ಸೇವೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ದೈನಂದಿನಂತೆ ನಮ್ಮ ಮೇಟ್ರೋ ಸಂಚಾರ ಇರಲಿದೆ. ಸಂದರ್ಭಕ್ಕೆ ತಕ್ಕಂತೆ ಮೇಟ್ರೋ ಕಾರ್ಯಚರಣೆ ನಡೆಸಲಿದೆ. ಅದಾಗ್ಯೂ, ಸ್ಥಿತಿಗತಿಯ ಮೇಲೆ ಮೇಟ್ರೋ ಸಂಚಾರದ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಬಂದ್; ವಿಮಾನ, ರೈಲು ನಿಲ್ದಾಣಗಳಿಗೆ ಬಂದವರು ಗಮ್ಯ ತಲುಪಲು ಏನು ವ್ಯವಸ್ಥೆ? ಇಲ್ಲಿದೆ ವಿವರ

ಕಾವೇರಿ ನೀರಿಗಾಗಿ ಪ್ರತಿಭಟನೆ ಮತ್ತಷ್ಟು ತೀವ್ರಗೊಳಿಸಲು ವಿವಿಧ ಸಂಘಟನೆಗಳು ತೀರ್ಮಾನಿಸಿದ್ದು, ಸೆಪ್ಟೆಂಬರ್ 26 ರಂದು ಬೆಂಗಳೂರು ಬಂದ್ ಮಾಡಲು ನಿರ್ಧರಿಸಿವೆ. ಈ ಬಂದ್​ಗೆ ಆಟೋ, ಓಲಾ, ಊಬರ್, ಖಾಸಗಿ ಬಸ್​ ಮಾಲೀಕರ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿದ್ದವು. ಈ ಪೈಕಿ ಆಟೋ, ಓಲಾ, ಊಬರ್ ಸಂಘಟನೆಗಳು ಬೆಂಬಲ ವಾಪಸ್ ಪಡೆದಿದ್ದು, ಸೆ.29ರ ಕರ್ನಾಟಕ ಬಂದ್​ಗೆ ಸಂಪೂರ್ಣ ಬೆಂಬಲ ನೀಡಲು ನಿರ್ಧರಿಸಿವೆ.

ಕನ್ನಡಪರ ಸಂಘಟನೆಗಳು ಸಹ ಬೆಂಗಳೂರು ಬಂದ್​ಗೆ ಬೆಂಬಲ ಇಲ್ಲ ಎಂದು ಸ್ಪಷ್ಟಪಡಿಸಿದ್ದು, ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್​ಗೆ ಬೆಂಬಲ ಇದೆ ಎಂದು ಘೋಷಿಸಿವೆ. ಅದಾಗ್ಯೂ ಕೆಲವೊಂದು ಸಂಘಟನೆಗಳು ಬೆಂಗಳೂರು ಬಂದ್​ಗೆ ಬೆಂಬಲ ಸೂಚಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:02 pm, Mon, 25 September 23