ಬೆಂಗಳೂರು: ಈ ಬಾರಿ ಸುಂಕ ರಹಿತ ಕಡಲೆಕಾಯಿ ಪರಿಷೆ

ಬಸವನಗುಡಿ ಮತ್ತು ಮಲ್ಲೇಶ್ವರಂ ಕಡಲೆಕಾಯಿ ಪರಿಷೆಗಳ ದಿನಾಂಕಗಳನ್ನು ಘೋಷಿಸಲಾಗಿದೆ. ಬಸವನಗುಡಿ ಪರಿಷೆ ನವೆಂಬರ್ 25 ಮತ್ತು 26 ರಂದು ಎರಡು ದಿನಗಳ ಕಾಲ ಸುಂಕ ರಹಿತವಾಗಿ ನಡೆಯಲಿದೆ. ಮಲ್ಲೇಶ್ವರಂ ಪರಿಷೆ ನವೆಂಬರ್ 15 ರಿಂದ ಮೂರು ದಿನಗಳ ಕಾಲ ಪ್ಲಾಸ್ಟಿಕ್ ಮುಕ್ತವಾಗಿ ನಡೆಯಲಿದೆ. ಎರಡೂ ಪರಿಷೆಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಒಳಗೊಂಡಿವೆ.

ಬೆಂಗಳೂರು: ಈ ಬಾರಿ ಸುಂಕ ರಹಿತ ಕಡಲೆಕಾಯಿ ಪರಿಷೆ
ಬಸವನಗುಡಿ ಕಡಲೆಕಾಯಿ ಪರಿಷೆ
Follow us
Poornima Agali Nagaraj
| Updated By: ವಿವೇಕ ಬಿರಾದಾರ

Updated on:Nov 14, 2024 | 1:55 PM

ಬೆಂಗಳೂರು, ನವೆಂಬರ್​ 14: ರಾಜಧಾನಿ ಬೆಂಗಳೂರಿನ (Bengaluru) ಪ್ರಸಿದ್ಧ ಬಸವನಗುಡಿ ಕಡಲೆಕಾಯಿ ಪರಿಷೆ (Basavanagudi Kadalekai Parishe) ದಿನಾಂಕವನ್ನು ಮುಜರಾಯಿ ಇಲಾಖೆ ಘೋಷಣೆ ಮಾಡಿದೆ. ಜೊತೆಗೆ ವ್ಯಾಪಾರಿಗಳಿಗೆ ಸಿಹಿ ಸುದ್ದಿ ನೀಡಿದೆ. ಬಸವನಗುಡಿ ಕಡಲೆಕಾಯಿ ಪರಿಷೆಯು ಪ್ರತಿವರ್ಷವೂ ಕಾರ್ತಿಕ ಮಾಸದ ಕೊನೆಯ ಸೋಮವಾರ ನಡೆಯುತ್ತದೆ. ಅದರಂತೆ ಈ ಬಾರಿ ಮುಜರಾಯಿ ಇಲಾಖೆ ನವೆಂಬರ್​ 25 ಮತ್ತು 26ರಂದು ಎರಡು ದಿನಗಳ ಕಾಲ ಕಡಲೆಕಾಯಿ ಪರಿಷೆ ನಡೆಸಲು ನಿರ್ಧರಿಸಿದೆ.

ಧಾರ್ಮಿಕ ದತ್ತಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ನಡೆದ ಧಾರ್ಮಿಕ ದತ್ತಿ ಪರಿಷತ್ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೇ, ಎರಡು ದಿನಗಳ ಕಾಲ ನಡೆಯಲಿರುವ ಪರಿಷೆಗೆ ವ್ಯಾಪಾರಿಗಳಿಂದ ಸುಂಕ ವಸೂಲಾತಿಗೆ ಬ್ರೇಕ್​ ಹಾಕಲು ನಿರ್ಧರಿಸಲಾಗಿದೆ. ಸುಂಕ ರಹಿತ ಕಡಲೆಕಾಯಿ ಪರಿಷೆ ನಡೆಸಲು ನಿರ್ಧರಿಸಲಾಗಿದೆ. ಹಾಗೇ, ಈ ಬಾರಿ ಯಾವುದೇ ರೀತಿಯ ಟೆಂಡರ್ ಪಕ್ರಿಯೆ ಕೂಡ ಇರುವುದಿಲ್ಲ ಎಂದು ಸಚಿವರು ಆದೇಶಿಸಿದ್ದಾರೆ.

ಮಲ್ಲೇಶ್ವರಂ ಕಡಲೆಕಾಯಿ ಪರಿಷೆ

ಇನ್ನು, ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ನವೆಂಬರ್​ 15 ರಿಂದ ಮೂರು ದಿನಗಳ ಕಾಲ ನಡೆಯಲಿದೆ. ಪರಿಷೆಯನ್ನು ಪ್ಲಾಸ್ಟಿಕ್​ ಮುಕ್ತವಾಗಿ ಮಾಡಲು ನಿರ್ಧರಿಸಲಾಗಿದೆ. ಪರಿಷೆಗೆ ಬರುವವರು ಮತ್ತು ವ್ಯಾಪಾರಸ್ಥರು ಪ್ಲಾಸ್ಟಿಕ್​ ಚೀಲವನ್ನು ಬಿಟ್ಟು, ಬಟ್ಟೆ ಚೀಲವನ್ನು ಬಳಸಬೇಕು ಎಂದು ನಿಯಮ ಜಾರಿ ಮಾಡಲಾಗುತ್ತದೆ. ಇನ್ನು, ಪರಿಷೆಯಲ್ಲಿ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಈ ಬಾರಿ ಮೂರು ಲಕ್ಷಕ್ಕೂ ಅಧಿಕ ಜನ ಭಾಗವಹಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಇ ಖಾತಾ ಹಂಚಿಕೆಯಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಜಂಟಿ ಕಾರ್ಯಪಡೆ ರಚನೆ

ಪರಿಷೆ ವಿಶೇಷತೆ

ಬಡವರ ಬಾದಾಮಿಯೆಂದೇ ಹೆಸರಾದ ಕಡಲೆಕಾಯಿಯನ್ನು ತಿನ್ನುತ್ತಾ, ಚುಮು-ಚುಮು ಚಳಿಯಲ್ಲಿ ಪರಿವಾರದೊಂದಿಗೆ, ಗೆಳೆಯರ ಸಹಿತ, ಬಸವನಗುಡಿಯಲ್ಲಿ ಅಲೆಯುವುದೇ ಈ ಪರಿಷೆಯ ಒಂದು ಅನನ್ಯ ವಿಧಿಗಳಲ್ಲೊಂದು. ಬೆಳೆಗಾರ ಹಾಗೂ ಗ್ರಾಹಕನನ್ನು ಒಂದು ಗೂಡಿಸುವುದು ಕೂಡ ಈ ಜಾತ್ರೆಯ ವಿಶೇಷ. ರಾಮಕೃಷ್ಣ ಆಶ್ರಮದಿಂದ ಆರಂಭವಾಗಿ ಕಾಮತ್ ಬ್ಯೂಗಲ್‌ರಾಕ್ ಹೋಟೆಲ್ ತನಕ ರಸ್ತೆ ಅಂಚಲ್ಲಿ ಹರಡಿದ ರಾಶಿರಾಶಿ ಹಸಿ, ಹುರದಿದ್ದು, ಎರಡು ಬೀಜ, ಮೂರು ಬೀಜ ಅಷ್ಟೆ ಅಲ್ಲ ಬೇಯಿಸಿದ ಕಡಲೆಕಾಯಿ ರುಚಿ ಸವಿ ಸವಿಯಬಹುದು.

ಬೆಂಗಳೂರಿನ ಸುತ್ತಮುತ್ತಲ ಕಡಲೆಕಾಯಿ ಬೆಳೆಗಾರರು ತಮ್ಮ ಬೆಳೆಯನ್ನು ಬಸವಣ್ಣನಿಗೆ ಅರ್ಪಿಸಿ ಬೆಳೆದ ಶ್ರಮಕ್ಕೆ ಪ್ರತಿಫಲ ಪಡೆಯಲು ರಸ್ತೆ ಅಂಚಲ್ಲಿ ಕಡಲೆಕಾಯಿ ರಾಶಿ ಸುರಿದು ಗ್ರಾಹಕರ ನೀರಿಕ್ಷೆಯಲ್ಲಿರುತ್ತಾರೆ. ಚಿಂತಾಮಣಿ, ಶ್ರೀನಿವಾಸಪುರ, ಕೋಲಾರ, ಚಿಕ್ಕಬಳ್ಳಾಪುರ, ಮಾಗಡಿ, ಮಂಡ್ಯ, ಮೈಸೂರು, ತುಮಕೂರು, ಕುಣಿಗಲ್ ಹೀಗೆ ನಾನಾ ಭಾಗಗಳಿಂದ ಕಾಯಿಗಳನ್ನು ಹೊತ್ತು ರೈತರು ತರುತ್ತಾರೆ. ಅಷ್ಟೇ ಅಲ್ಲದೆ, ನೆರೆಯ ಆಂಧ್ರಪ್ರದೇಶ, ತಮಿಳುನಾಡಿನ ರೈತರು ಹಾಗೂ ವ್ಯಾಪಾರಿಗಳು ಕೂಡ ಪರಿಷೆಯಲ್ಲಿ ಭಾಗವಹಿಸುತ್ತಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:55 pm, Thu, 14 November 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ