ಬೆಂಗಳೂರು, ಜುಲೈ 03: ಕರ್ನಾಟಕದಾದ್ಯಂತ ಮತ್ತೊಮ್ಮೆ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ (caste survey) ನಡೆಯುತ್ತಿದೆ. ಆದರೆ ಅಧಿಕಾರಿಗಳು ಸಮೀಕ್ಷೆ ಮಾಡದೆ ಮನೆಗಳಿಗೆ ಕೇವಲ ಸ್ಟಿಕ್ಕರ್ ಅಂಟಿಸಿ ಹೋಗುತ್ತಿರುವುದಾಗಿ ಸ್ವತಃ ಜನರೇ ದೂರಿದ್ದರು. ಇದೀಗ ಈ ವಿಚಾರವಾಗಿ ಬಿಬಿಎಂಪಿ (bbmp) ಸ್ಪಷ್ಟೀಕರಣ ನೀಡಿದೆ. ಸಮೀಕ್ಷಾ ತಂಡಗಳು ಪ್ರತಿ ಮನೆಗೆ ಭೇಟಿ ನೀಡಿರುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ದೃಢೀಕರಿಸುವ ಉದ್ದೇಶದಿಂದ ಮನೆ-ಮನೆಗೆ ಸ್ಟಿಕ್ಕರ್‌ಗಳನ್ನು ಅಂಟಿಸುವುದು ಸಮೀಕ್ಷಾ ಪ್ರಕ್ರಿಯೆಯ ಒಂದು ಭಾಗವಾಗಿದೆ. ಇದರಿಂದ ಯಾವುದೇ ಪರಿಶಿಷ್ಟ ಜಾತಿ ಕುಟುಂಬವು ಸಮೀಕ್ಷೆಯಿಂದ ಹೊರಗುಳಿಯದಂತೆ ಖಚಿತಪಡಿಸುತ್ತದೆ ಎಂದು ಬಿಬಿಎಂಪಿ ತಿಳಿಸಿದೆ.
ಈ ಕುರಿತಾಗಿ ಬಿಬಿಎಂಪಿ ಟ್ವೀಟ್ ಮಾಡಿದ್ದು, ಕರ್ನಾಟಕ ಸರ್ಕಾರವು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ, ಬೆಂಗಳೂರು ನಗರದಾದ್ಯಂತ ಪರಿಶಿಷ್ಟ ಜಾತಿ(SC) ಸಮಗ್ರ ಸಮೀಕ್ಷೆಯನ್ನು ನಡೆಸುತ್ತಿದೆ. ಈ ಸಮೀಕ್ಷೆಯು ಪ್ರತಿ ಅರ್ಹ ಕುಟುಂಬವನ್ನು ಒಳಗೊಂಡಿದೆಯೇ ಎಂದು ಖಚಿತಪಡಿಸಿಕೊಳ್ಳುವ ಗುರಿ ಹೊಂದಿದೆ. ಸಮೀಕ್ಷಾ ತಂಡಗಳು ನಿವಾಸಿಗಳೊಂದಿಗೆ ಸಂವಹನ ನಡೆಸದೆ ಮನೆಗಳ ಮೇಲೆ ಸಮೀಕ್ಷೆಯ ಸ್ಟಿಕ್ಕರ್‌ಗಳನ್ನು ಅಂಟಿಸಿವೆ ಎಂದು ಕೆಲವು ನಿವಾಸಿಗಳು, ಸಾಮಾಜಿಕ ಮಾಧ್ಯಮ, ಟಿವಿ ಸುದ್ದಿ ವಾಹಿನಿಗಳು ಮತ್ತು ನಮ್ಮ ಸಹಾಯವಾಣಿಯಲ್ಲಿ ಕಳವಳ ವ್ಯಕ್ತಪಡಿಸಿರುವುದನ್ನು ಗಮನಿಸಲಾಗಿದೆ.
ಬಿಬಿಎಂಪಿ ವ್ಯಾಪ್ತಿಯ ನಾಗರಿಕರಿಗೆ ಪರಿಶಿಷ್ಟ ಜಾತಿ ಸಮೀಕ್ಷೆ ಕುರಿತು ಸ್ಪಷ್ಟೀಕರಣ:
ಕರ್ನಾಟಕ ಸರ್ಕಾರವು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ, ಬೆಂಗಳೂರು ನಗರದಾದ್ಯಂತ ಪರಿಶಿಷ್ಟ ಜಾತಿ(SC) ಸಮಗ್ರ ಸಮೀಕ್ಷೆಯನ್ನು ನಡೆಸುತ್ತಿದೆ. ಈ ಸಮೀಕ್ಷೆಯು ಪ್ರತಿ ಅರ್ಹ ಕುಟುಂಬವನ್ನು ಒಳಗೊಂಡಿದೆಯೇ ಎಂದು ಖಚಿತಪಡಿಸಿಕೊಳ್ಳುವ ಗುರಿ…
— Bruhat Bengaluru Mahanagara Palike (@BBMPofficial) July 2, 2025
ಈ ಕಳವಳಗಳನ್ನು ನಿವಾರಿಸಲು ಮತ್ತು ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಈ ಕೆಳಗಿನ ಅಂಶಗಳ ಮೂಲಕ ಸ್ಪಷ್ಟನೆ ನೀಡಿದೆ.
ಇದನ್ನೂ ಓದಿ: ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರದ ಢೋಂಗಿ ಸಮೀಕ್ಷೆ: ಮನೆ ಬಾಗಿಲಿಗೆ ಸ್ಟಿಕ್ಕರ್ ಅಂಟಿಸುವುದರ ವಿರುದ್ಧ ಜೆಡಿಎಸ್ ವಾಗ್ದಾಳಿ
ಇದನ್ನೂ ಓದಿ: ಜಾತಿ ಸಮೀಕ್ಷೆ: ಸರ್ವೆ ಮಾಡದೆ ಮನೆಗಳಿಗೆ ಸ್ಟಿಕ್ಕರ್ ಅಂಟಿಸಿದ ಅಧಿಕಾರಿಗಳು!
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.