ಬಿಬಿಎಂಪಿ ಕಸ ಸಾಗಣೆ ಲಾರಿ ಹರಿದು ಸಹೋದರಿಯರ ಸಾವು

| Updated By: ವಿವೇಕ ಬಿರಾದಾರ

Updated on: Jan 04, 2025 | 3:08 PM

ಬೆಂಗಳೂರಿನ ಸಾರಾಯಿಪಾಳ್ಯದಲ್ಲಿ ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರು ಮೃತಪಟ್ಟಿದ್ದಾರೆ. ಬೈಕ್‌ನಲ್ಲಿದ್ದ ನಾಜಿಯಾ ಸುಲ್ತಾನ ಮತ್ತು ನಾಜಿಯಾ ಇರ್ಫಾನ್ ಮೃತರು. ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತೊಂದು ಪ್ರತ್ಯೇಕ ಘಟನೆಯಲ್ಲಿ, ಹೆಬ್ಬಾಳ ಪ್ಲೈಓವರ್‌ನಲ್ಲಿ ಸಂಭವಿಸಿದ ದ್ವಿಚಕ್ರ ವಾಹನ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ.

ಬಿಬಿಎಂಪಿ ಕಸ ಸಾಗಣೆ ಲಾರಿ ಹರಿದು ಸಹೋದರಿಯರ ಸಾವು
ಬಿಬಿಎಂಪಿ ಕಸ ಸಾಗಾಣೆ ಲಾರಿ
Follow us on

ಬೆಂಗಳೂರು, ಜನವರಿ 04: ಬಿಬಿಎಂಪಿ (BBMP) ಕಸ ಸಾಗಣೆ ಲಾರಿ ಹರಿದು ಸಹೋದರಿಯರು ಮೃತಪಟ್ಟಿರುವ ಘಟನೆ ಬೆಂಗಳೂರಿನ (Bengaluru) ಥಣಿಸಂದ್ರ ಮುಖ್ಯ ರಸ್ತೆಯ ಸಾರಾಯಿಪಾಳ್ಯ ಬಳಿ ನಡೆದಿದೆ. ಗೋವಿಂದಪುರದ ನಾಜಿಯಾ ಸುಲ್ತಾನ (30), ನಾಜಿಯಾ ಇರ್ಫಾನ (32) ಮೃತ ಸಹೋದರಿಯರು. ಲಾರಿ ಚಾಲಕ ಗಡಿಲಿಂಗನನ್ನು ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶನಿವಾರ ಮಧ್ಯಾಹ್ನ 12:20ರ ಸುಮಾರಿಗೆ ಥಣಿಸಂದ್ರ ಮುಖ್ಯ ರಸ್ತೆಯ ಸರಾಯಿಪಾಳ್ಯದ ಬಳಿ ಬಿಬಿಎಂಪಿ ಕಸದ ಲಾರಿ ತೆರಳುತ್ತಿತ್ತು. ಈ ವೇಳೆ ಬೈಕ್​ನಲ್ಲಿ ಬಂದಿದ್ದ ಮಹಿಳೆಯರು ಕಸದ ಲಾರಿಯನ್ನು ಎಡಗಡೆಯಿಂದ ಓವರ್ ಟೇಕ್ ಮಾಡಲು ಮುಂದಾಗಿದ್ದಾರೆ. ಇದೇ ವೇಳೆ, ಎದುರಿಗೆ ಬೈಕ್​ವೊಂದು ಬಂದಿದೆ.

ಬೈಕ್​ನಿಂದ ತಪ್ಪಿಸಿಕೊಳ್ಳುವ ಬರದಲ್ಲಿ ಗಾಡಿಯನ್ನು ಬಲಕ್ಕೆ ತಿರುಗಿದ್ದಾರೆ. ಪಕ್ಕದಲ್ಲಿದ್ದ ಲಾರಿಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದು, ಲಾರಿ ಕೆಳಗೆ ಸಿಕ್ಕು ಮಹಿಳೆಯರು ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಹೆಣ್ಣೂರು ಸಂಚಾರಿ ಠಾಣೆ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ನ್ಯೂ ಇಯರ್​ ಎಫೆಕ್ಟ್: 15 ಮೆಟ್ರಿಕ್ ಟನ್ ಕಸ ಸಂಗ್ರಹ, ಬಿಎಂಟಿಸಿಗೆ 5 ಕೋಟಿ ಆದಾಯ

ಹೆಬ್ಬಾಳ ಪ್ಲೈಓವರ್ ಮೇಲಿನ ಡಿವೈಡರ್​ಗೆ ಡಿಕ್ಕಿಯಾಗಿ ದ್ವಿಚಕ್ರ ವಾಹನ ಡಿಕ್ಕಿಯಾಗಿ, ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸವರಾ ವೇಗವಾಗಿ ಬರುತ್ತಿದ್ದನು ಎಂದು ತಿಳಿದುಬಂದಿದೆ. ಸವಾರ ದ್ವಿಚಕ್ರ ವಾಹನದಲ್ಲಿ ವೇಗವಾಗಿ ಬಂದು ಡಿವೈಡರ್​ಗೆ ಡಿಕ್ಕಿ ಹೊಡೆದಿದ್ದಾನೆ. ಹೆಬ್ಬಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಿವೈಡರ್​ಗೆ ಕಾರು ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ  ಗದಗ ತಾಲೂಕಿನ ಹುಲಕೋಟಿ ಗ್ರಾಮದ ಬಳಿ ನಡೆದಿದೆ. ಮೊಹಮ್ಮದ್ ಜಾಯಿದ್ (18), ಸಂಜೀವ್ ಗಿರಡ್ಡಿ (15) ಮೃತರು ಎಂದು ಗುರುತಿಸಲಾಗಿದೆ. ಇನ್ನು, ಅಪಘಾತದಲ್ಲಿ ಗಾಯಗೊಂಡ ಆಶೀಸ್ ಗೂಡುರ್, ಸಪ್ತಗಿರಿಯನ್ನು ಜಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಲಕೋಟಿಯಿಂದ ಗದಗಕ್ಕೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ