2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಬಿಡಿಎ ಭ್ರಷ್ಟ ಅಧಿಕಾರಿಗಳಿಬ್ಬರು ಎಸಿಬಿ ಬಲೆಗೆ
Bengaluru News: ಮುಂಗಡವಾಗಿ 2 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಭ್ರಷ್ಟ ಅಧಿಕಾರುಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಎಇಇ ಮಂಜುನಾಥ್, ಸರ್ವೆಯರ್ ಜಯರಾಮ್ ಬಂಧನವಾಗಿದೆ. ಎಸಿಬಿ ಅಧಿಕಾರಿಗಳು ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರು: ಬಿಡಿಎ ಭ್ರಷ್ಟ ಅಧಿಕಾರಿಗಳಿಬ್ಬರು 2 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಎಇಇ ಮಂಜುನಾಥ್, ಸರ್ವೆಯರ್ ಜಯರಾಮ್ 2 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಸೆರೆ ಸಿಕ್ಕಿದ್ದಿದ್ದಾರೆ. ಆರ್.ಟಿ. ನಗರದಲ್ಲಿ ಹಳೇ ಕಟ್ಟಡ ಕೆಡವಿ ಹೊಸ ಕಟ್ಟಡ ನಿರ್ಮಾಣ ಮಾಡುವ ಸಂಬಂಧ ಘಟನೆ ನಡೆದಿತ್ತು. ಸ್ಥಳಕ್ಕೆ ತೆರಳಿ ಕಾಮಗಾರಿ ಸ್ಥಗಿತಕ್ಕೆ ಬಿಡಿಎ ಎಇಇ ಸೂಚಿಸಿದ್ದರು.
ಬಳಿಕ ಸರ್ವೆಯರ್ ಜಯರಾಮ್ ಸಂಪರ್ಕಿಸಲು ಹೇಳಿದ್ದರು. ಈ ಬಗ್ಗೆ ಕಟ್ಟಡ ಮಾಲೀಕರಿಗೆ ಬಿಡಿಎ ಎಇಇ ಮಂಜುನಾಥ್ ಹೇಳಿದ್ದರು. ಬಳಿಕ, ಸರ್ವೆಯರ್ ಜಯರಾಮ್‌ರನ್ನು ದೂರುದಾರ ಸಂಪರ್ಕಿಸಿದ್ದರು. 5 ಲಕ್ಷ ರೂಪಾಯಿ ಲಂಚ ನೀಡುವಂತೆ ಸರ್ವೆಯರ್ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 2 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಭ್ರಷ್ಟ ಅಧಿಕಾರುಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಎಇಇ ಮಂಜುನಾಥ್, ಸರ್ವೆಯರ್ ಜಯರಾಮ್ ಬಂಧನವಾಗಿದೆ. ಎಸಿಬಿ ಅಧಿಕಾರಿಗಳು ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಎಸಿಬಿ ಅಧಿಕಾರಿಗಳಿಂದ ದಾಖಲಾತಿಗಳು, ಲಂಚದ ಹಣ ಜಪ್ತಿ ಮಾಡಲಾಗಿದೆ.
ಇದನ್ನೂ ಓದಿ: ಲಂಚ ಕೇಳಿದರೆ ಪೊಲೀಸರಿಗೆ ದೂರು ಕೊಡಿ: ಗೃಹ ಸಚಿವ ಆರಗ ಜ್ಞಾನೇಂದ್ರ
ಇದನ್ನೂ ಓದಿ: ಕಚೇರಿಯಲ್ಲೇ ಲಂಚ: ಎಸಿಬಿ ಬಲೆಗೆ ಬಿಬಿಎಂಪಿ ಎಫ್ಡಿಎ