AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​​ ತೆಕ್ಕೆಗೆ ಬೆಂಗಳೂರು ಬಿಡಿಸಿಸಿ ಬ್ಯಾಂಕ್: ಪಾರುಪತ್ಯ ಸಾಧಿಸಿದ ಡಿಕೆಶಿ ಬೆಂಬಲಿತ ಟೀಂ

ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್​​ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಸಾಧಿಸಿದ್ದಾರೆ. 18ರ ಪೈಕಿ 15 ಕ್ಷೇತ್ರಗಳು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಪಾಲಾಗಿವೆ. ಆ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಪಾರಮ್ಯ ಮುಂದುವರೆಯಲಿದೆ.

ಕಾಂಗ್ರೆಸ್​​ ತೆಕ್ಕೆಗೆ ಬೆಂಗಳೂರು ಬಿಡಿಸಿಸಿ ಬ್ಯಾಂಕ್: ಪಾರುಪತ್ಯ ಸಾಧಿಸಿದ ಡಿಕೆಶಿ ಬೆಂಬಲಿತ ಟೀಂ
ಮಾಜಿ ಸಂಸದ ಡಿಕೆ ಸುರೇಶ್​​ ಸುದ್ದಿಗೋಷ್ಠಿ
ಗಂಗಾಧರ​ ಬ. ಸಾಬೋಜಿ
|

Updated on: Dec 07, 2025 | 8:52 PM

Share

ಬೆಂಗಳೂರು, ಡಿಸೆಂಬರ್​ 07: ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್​​ ಚುನಾವಣೆಯಲ್ಲಿ (BDCC Bank Election) ಕಾಂಗ್ರೆಸ್​ ಪಕ್ಷ ಭರ್ಜರಿ ಗೆಲುವು ಸಾಧಿಸಿದೆ. ಆ ಮೂಲಕ ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ (Congress) ಬೆಂಬಲಿತ ಅಭ್ಯರ್ಥಿಗಳು ಪಾರಮ್ಯ ಮುಂದುವರೆಸಿದ್ದಾರೆ. 18ರ ಪೈಕಿ 15 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದು ಮಾಜಿ ಸಂಸದ ಡಿಕೆ ಸುರೇಶ್​​ ತಿಳಿಸಿದ್ದಾರೆ.

ಇಂದು ಬ್ಯಾಂಕ್​​ ಚುನಾವಣೆ ನಡೆದಿತ್ತು. 18 ಕ್ಷೇತ್ರಗಳ ಪೈಕಿ 15ರಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ನೇರವಾಗಿ ಗೆದ್ದಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದ 2 ಕ್ಷೇತ್ರಗಳು, ಚನ್ನಪಟ್ಟಣದ 1, ಕನಕಪುರದ 2, ಮಾಗಡಿಯ 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಇದನ್ನೂ ಓದಿ: ಎಲ್ಲವೂ ಸುಸೂತ್ರ, ಒಂದು ಹಂತಕ್ಕೆ ಬರುತ್ತೆ: ಡಿಕೆ ಸುರೇಶ್ ಮಾತಿನ ಮರ್ಮವೇನು?​

ಸೋಮಶೇಖರ್ ಕಾಂಗ್ರೆಸ್​​ನೊಂದಿಗೆ ಕೈಜೋಡಿಸಿದ್ದು, ಅವರ ಕ್ಷೇತ್ರದಲ್ಲೂ ನಮ್ಮ ಅಭ್ಯರ್ಥಿ ಗೆದ್ದಿದ್ದಾರೆ. ಬೆಂಗಳೂರು ಉತ್ತರ ಜಿಲ್ಲೆಯ ಹೊಸಕೋಟೆಯ 2, ದೇವನಹಳ್ಳಿಯಲ್ಲಿ 1, ದೊಡ್ಡಬಳ್ಳಾಪುರದಲ್ಲಿ 1, ಆನೇಕಲ್ ನಲ್ಲಿ 1, ಬೆಂಗಳೂರು ಉತ್ತರ ಕ್ಷೇತ್ರದಿಂದ 1 ಕ್ಷೇತ್ರದಲ್ಲಿ ಹಾಗೂ ಹೆಚ್. ಎಂ ರೇವಣ್ಣ ಅವರ ಸಹಕಾರದಿಂದ 1 ಇತರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ. ಉಳಿದಂತೆ ನೆಲಮಂಗಲ ಹಾಗೂ ಸೋಲೂರು ಕ್ಷೇತ್ರಗಳ 2 ಸ್ಥಾನಗಳನ್ನು ಬಿಜೆಪಿ ಸಹಕಾರದೊಂದಿಗೆ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ.

ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಿಷ್ಟು 

ಚುನಾವಣಾ ಫಲಿತಾಂಶ ಬಳಿಕ ಚಾಮರಾಜಪೇಟೆಯ ಬಿಡಿಸಿಸಿ ಬ್ಯಾಂಕ್​​ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಂಸದ ಡಿಕೆ ಸುರೇಶ್, ಡಿಕೆ ಸುರೇಶ್ ಹೇಳಿಕೆ ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್​​, ಇತಿಹಾಸ ಇರುವ ಬ್ಯಾಂಕ್. ಅನೇಕ ಏಳು ಬೀಳು ಕಂಡಿದೆ. ಉತ್ತಮವಾದ ಸ್ಥಿತಿಯಲ್ಲಿ ಬ್ಯಾಂಕ್ ನಡೆಸಿಕೊಂಡು ಬಂದಿದೆ. ರಾಜ್ಯದ ಗಮನ ಸೆಳೆಯುವ ಬ್ಯಾಂಕ್ ಇದಾಗಿದೆ. ಇಂದು ಚುನಾವಣೆ ನಡೆದಿದೆ. ಸುಮಾರು 18 ಕ್ಷೇತ್ರಗಳು ಅಂದರೆ 36 ವಿಧಾನಸಭಾ ಹೊಂದಿದೆ ಎಂದರು.

ಮಾಜಿ ಸಂಸದ ಡಿಕೆ ಸುರೇಶ್ ಟ್ವೀಟ್​

ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ರಾಮಲಿಂಗ ರೆಡ್ಡಿ, ಕೆ.ಹೆಚ್ ಮುನಿಯಪ್ಪ ಸೇರಿ ಶಾಸಕರು, ಸಚಿವರು ಸಹಕಾರದಲ್ಲಿ ನಾವು ಮತ್ತೊಮ್ಮೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆದ್ದಿದ್ದೇವೆ. ಎರಡು ಸ್ಥಾನ ಬಿಜೆಪಿ ಜೊತೆ ಸೇರಿ ಜೆಡಿಎಸ್‌ನವರು ಗೆದ್ದಿದ್ದಾರೆ. ಹಗಲು ರಾತ್ರಿ ಚುನಾವಣೆಯಲ್ಲಿ ಸಹಕಾರ ನೀಡಿರುವವವರಿಗೆ ಧನ್ಯವಾದ ತಿಳಿಸಿದರು. ಬಿಡಿಸಿಸಿ ಬ್ಯಾಂಕ್ ಅನ್ನು ಅತ್ಯುತ್ತಮವಾಗಿ ಮುನ್ನಡೆಸಿ, ಈ ಬ್ಯಾಂಕ್ ವ್ಯಾಪ್ತಿಗೆ ಬರುವ ರೈತರು ಹಾಗೂ ನಾಗರಿಕರಿಗೆ ಉತ್ತಮ ಸೇವೆ, ಸೌಲಭ್ಯವನ್ನು ನಮ್ಮ ಆಡಳಿತ ಮಂಡಳಿ ನೀಡಲಿದೆ ಎಂದು ಡಿಕೆ ಸುರೇಶ್ ಹೇಳಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಸಿದ್ಧತೆ ಪೂರ್ಣ: ಏಳುಸುತ್ತಿನ ಕೋಟೆಯಾದ ಕುಂದಾನಗರಿ

ಇನ್ನು ಡಿಸಿಎಂ ಡಿಕೆ ಶಿವಕುಮಾರ್, ಸಚಿವ ರಾಮಲಿಂಗಾರೆಡ್ಡಿ, ಕೆ.ಹೆಚ್ ಮುನಿಯಪ್ಪ, ಕೃಷ್ಣಬೈರೇಗೌಡ ಹಾಗೂ ಶಾಸಕರಾದ ಶಿವಣ್ಣ, ಶರತ್ ಬಚ್ಚೇಗೌಡ, ಇಕ್ಬಾಲ್ ಹುಸೇನ್, ಬಾಲಕೃಷ್ಣ, ಸಿ.ಪಿ ಯೋಗೇಶ್ವರ್, ಶ್ರೀನಿವಾಸ್, ಮುಖಂಡರಾದ ಆರ್.ಕೆ. ರಮೇಶ್, ವೆಂಕಟರಮಣಪ್ಪ ಮತ್ತಿತರರ ಸಹಕಾರದಿಂದ ಈ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಆಡಳಿತ ಮಂಡಳಿಗೆ ಆಯ್ಕೆ ಮಾಡಲಾಗಿತ್ತು.

ವರದಿ: ಈರಣ್ಣ ಬಸವ 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್