
ಬೆಂಗಳೂರು, ಡಿಸೆಂಬರ್ 07: ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಚುನಾವಣೆಯಲ್ಲಿ (BDCC Bank Election) ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದೆ. ಆ ಮೂಲಕ ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ (Congress) ಬೆಂಬಲಿತ ಅಭ್ಯರ್ಥಿಗಳು ಪಾರಮ್ಯ ಮುಂದುವರೆಸಿದ್ದಾರೆ. 18ರ ಪೈಕಿ 15 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ತಿಳಿಸಿದ್ದಾರೆ.
ಇಂದು ಬ್ಯಾಂಕ್ ಚುನಾವಣೆ ನಡೆದಿತ್ತು. 18 ಕ್ಷೇತ್ರಗಳ ಪೈಕಿ 15ರಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ನೇರವಾಗಿ ಗೆದ್ದಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದ 2 ಕ್ಷೇತ್ರಗಳು, ಚನ್ನಪಟ್ಟಣದ 1, ಕನಕಪುರದ 2, ಮಾಗಡಿಯ 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಇದನ್ನೂ ಓದಿ: ಎಲ್ಲವೂ ಸುಸೂತ್ರ, ಒಂದು ಹಂತಕ್ಕೆ ಬರುತ್ತೆ: ಡಿಕೆ ಸುರೇಶ್ ಮಾತಿನ ಮರ್ಮವೇನು?
ಸೋಮಶೇಖರ್ ಕಾಂಗ್ರೆಸ್ನೊಂದಿಗೆ ಕೈಜೋಡಿಸಿದ್ದು, ಅವರ ಕ್ಷೇತ್ರದಲ್ಲೂ ನಮ್ಮ ಅಭ್ಯರ್ಥಿ ಗೆದ್ದಿದ್ದಾರೆ.
ಬೆಂಗಳೂರು ಉತ್ತರ ಜಿಲ್ಲೆಯ ಹೊಸಕೋಟೆಯ 2, ದೇವನಹಳ್ಳಿಯಲ್ಲಿ 1, ದೊಡ್ಡಬಳ್ಳಾಪುರದಲ್ಲಿ 1, ಆನೇಕಲ್ ನಲ್ಲಿ 1, ಬೆಂಗಳೂರು ಉತ್ತರ ಕ್ಷೇತ್ರದಿಂದ 1 ಕ್ಷೇತ್ರದಲ್ಲಿ ಹಾಗೂ ಹೆಚ್. ಎಂ ರೇವಣ್ಣ ಅವರ ಸಹಕಾರದಿಂದ 1 ಇತರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ. ಉಳಿದಂತೆ ನೆಲಮಂಗಲ ಹಾಗೂ ಸೋಲೂರು ಕ್ಷೇತ್ರಗಳ 2 ಸ್ಥಾನಗಳನ್ನು ಬಿಜೆಪಿ ಸಹಕಾರದೊಂದಿಗೆ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ.
ಚುನಾವಣಾ ಫಲಿತಾಂಶ ಬಳಿಕ ಚಾಮರಾಜಪೇಟೆಯ ಬಿಡಿಸಿಸಿ ಬ್ಯಾಂಕ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಂಸದ ಡಿಕೆ ಸುರೇಶ್, ಡಿಕೆ ಸುರೇಶ್ ಹೇಳಿಕೆ ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ಇತಿಹಾಸ ಇರುವ ಬ್ಯಾಂಕ್. ಅನೇಕ ಏಳು ಬೀಳು ಕಂಡಿದೆ. ಉತ್ತಮವಾದ ಸ್ಥಿತಿಯಲ್ಲಿ ಬ್ಯಾಂಕ್ ನಡೆಸಿಕೊಂಡು ಬಂದಿದೆ. ರಾಜ್ಯದ ಗಮನ ಸೆಳೆಯುವ ಬ್ಯಾಂಕ್ ಇದಾಗಿದೆ. ಇಂದು ಚುನಾವಣೆ ನಡೆದಿದೆ. ಸುಮಾರು 18 ಕ್ಷೇತ್ರಗಳು ಅಂದರೆ 36 ವಿಧಾನಸಭಾ ಹೊಂದಿದೆ ಎಂದರು.
BDCC ಬ್ಯಾಂಕ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಜಯಭೇರಿ!
ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಬೆಂಗಳೂರು ಜಿಲ್ಲಾ ಕೇಂದ್ರ ಕೋ – ಆಪರೇಟಿವ್ ಬ್ಯಾಂಕ್ ಆವರಣದಲ್ಲಿ ಶಾಸಕರಾದ ಮಾಗಡಿ ಬಾಲಕೃಷ್ಣ, ಶರತ್ ಬಚ್ಚೇಗೌಡ, ನೆಲಮಂಗಲ ಶ್ರೀನಿವಾಸ್ ಹಾಗೂ ಎಂಎಲ್ಸಿ ಎಸ್ ರವಿ ಹಾಗೂ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರ ಸಮ್ಮುಖದಲ್ಲಿ ಮಾಧ್ಯಮಗೋಷ್ಠಿ… pic.twitter.com/7dxZlqiw2x
— DK Suresh (@DKSureshINC) December 7, 2025
ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ರಾಮಲಿಂಗ ರೆಡ್ಡಿ, ಕೆ.ಹೆಚ್ ಮುನಿಯಪ್ಪ ಸೇರಿ ಶಾಸಕರು, ಸಚಿವರು ಸಹಕಾರದಲ್ಲಿ ನಾವು ಮತ್ತೊಮ್ಮೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆದ್ದಿದ್ದೇವೆ. ಎರಡು ಸ್ಥಾನ ಬಿಜೆಪಿ ಜೊತೆ ಸೇರಿ ಜೆಡಿಎಸ್‌ನವರು ಗೆದ್ದಿದ್ದಾರೆ. ಹಗಲು ರಾತ್ರಿ ಚುನಾವಣೆಯಲ್ಲಿ ಸಹಕಾರ ನೀಡಿರುವವವರಿಗೆ ಧನ್ಯವಾದ ತಿಳಿಸಿದರು. ಬಿಡಿಸಿಸಿ ಬ್ಯಾಂಕ್ ಅನ್ನು ಅತ್ಯುತ್ತಮವಾಗಿ ಮುನ್ನಡೆಸಿ, ಈ ಬ್ಯಾಂಕ್ ವ್ಯಾಪ್ತಿಗೆ ಬರುವ ರೈತರು ಹಾಗೂ ನಾಗರಿಕರಿಗೆ ಉತ್ತಮ ಸೇವೆ, ಸೌಲಭ್ಯವನ್ನು ನಮ್ಮ ಆಡಳಿತ ಮಂಡಳಿ ನೀಡಲಿದೆ ಎಂದು ಡಿಕೆ ಸುರೇಶ್ ಹೇಳಿದ್ದಾರೆ.
ಇದನ್ನೂ ಓದಿ: ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಸಿದ್ಧತೆ ಪೂರ್ಣ: ಏಳುಸುತ್ತಿನ ಕೋಟೆಯಾದ ಕುಂದಾನಗರಿ
ಇನ್ನು ಡಿಸಿಎಂ ಡಿಕೆ ಶಿವಕುಮಾರ್, ಸಚಿವ ರಾಮಲಿಂಗಾರೆಡ್ಡಿ, ಕೆ.ಹೆಚ್ ಮುನಿಯಪ್ಪ, ಕೃಷ್ಣಬೈರೇಗೌಡ ಹಾಗೂ ಶಾಸಕರಾದ ಶಿವಣ್ಣ, ಶರತ್ ಬಚ್ಚೇಗೌಡ, ಇಕ್ಬಾಲ್ ಹುಸೇನ್, ಬಾಲಕೃಷ್ಣ, ಸಿ.ಪಿ ಯೋಗೇಶ್ವರ್,
ಶ್ರೀನಿವಾಸ್, ಮುಖಂಡರಾದ ಆರ್.ಕೆ. ರಮೇಶ್, ವೆಂಕಟರಮಣಪ್ಪ ಮತ್ತಿತರರ ಸಹಕಾರದಿಂದ ಈ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಆಡಳಿತ ಮಂಡಳಿಗೆ ಆಯ್ಕೆ ಮಾಡಲಾಗಿತ್ತು.
ವರದಿ: ಈರಣ್ಣ ಬಸವ
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.